ಸಾರಾಂಶ
ಗಾಯಗೊಂಡ ಶಿಲ್ಪ ಅವರನ್ನು ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಥಮ ಚಿಕಿತ್ಸೆ ನೀಡಲಾಗಿದೆ.
ಶಿಡ್ಲಘಟ್ಟ: ನಗರದ 1ನೇ ವಾರ್ಡಿನಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಅಧಿಕಾರಿಗಳ ನಿರ್ಲಕ್ಷ್ಯದಿಂದ ಸಮಸ್ಯೆ ಇನ್ನೂ ಉಲ್ಬಣಗೊಂಡಿದೆ. ಇತ್ತೀಚೆಗೆ ಮನೆ ಸಮೀಪ ವಾಕಿಂಗ್ ಮಾಡುತ್ತಿದ್ದ ಶಿಲ್ಪ ಎಂಬ ಮಹಿಳೆ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ, ತೀವ್ರವಾಗಿ ಗಾಯಗೊಳಿಸಿವೆ.
ಸ್ಥಳೀಯರ ಆಕ್ರೋಶ: ಗಾಯಗೊಂಡ ಶಿಲ್ಪ ಅವರನ್ನು ತಕ್ಷಣವೇ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಥಮ ಚಿಕಿತ್ಸೆ ನೀಡಲಾಗಿದೆ. ಸ್ಥಳೀಯ ಮುಖಂಡರಾದ ಚೆಲುವರಾಜ್ ಮತ್ತು ನಾರಾಯಣಸ್ವಾಮಿ (ಬುಜ್ಜಿ ನಾಯಕ್ ) ಅವರು ಈ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಈ ಬಗ್ಗೆ ಸಂಬಂಧಿತ ಅಧಿಕಾರಿಗಳು ಬೀದಿ ನಾಯಿಗಳ ಹಾವಳಿಯನ್ನು ಗಂಭೀರವಾಗಿ ಪರಿಗಣಿಸಿ, ತಕ್ಷಣವೇ ಈ ಬಡಾವಣೆಯಲ್ಲಿ ಬೀದಿ ನಾಯಿಗಳ ಸಂತಾನಹರಣ ಕಾರ್ಯಾಚರಣೆ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. 1ನೇ ವಾರ್ಡಿನ ನಗರಸಭಾ ಸದಸ್ಯೆ ಪದ್ಮಿನಿ ಕಿಶನ್ ಈ ಸಮಸ್ಯೆಯನ್ನು ತಕ್ಷಣವೇ ಪರಿಹರಿಸಲು ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರೂ ಸಹ ಒತ್ತಾಯಿಸಿದ್ದಾರೆ.