ಸಾರಾಂಶ
ಮಕ್ಕಳಲ್ಲಿನ ಅಪೌಷ್ಟಿಕತೆ ತೊಡೆದು ಹಾಕಲು ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಈಗ ರಾಗಿ ಮಾಲ್ಟ್ ನೀಡಲಾಗುತ್ತಿದೆ. ಸಾಕಷ್ಟು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು ಇದನ್ನು ಹೋಗಲಾಡಿಸಲು ರಾಜ್ಯ ಸರ್ಕಾರ ವಿನೂತನವಾಗಿ ಈ ಯೋಜನೆ ಜಾರಿಗೆ ತಂದಿದ್ದು, ಮಕ್ಕಳ ಕಲಿಕೆಗೆ, ದೈಹಿಕ ಸದೃಢತೆಗೆ ಪೂರಕವಾಗಿದೆ
ಕನ್ನಡಪ್ರಭ ವಾರ್ತೆ ಕಾಗವಾಡ
ಶಾಲಾ ಮಕ್ಕಳ ಮಾನಸಿಕ, ದೈಹಿಕ, ಆರೋಗ್ಯಕ್ಕಾಗಿ ಸರ್ಕಾರ ರಾಗಿ ಮಾಲ್ಟ್ ವಿತರಣೆ ಮಾಡುತ್ತಿದೆ. ಇದರಲ್ಲಿ ಉತ್ತಮ ಪೌಷ್ಟಿಕಾಂಶ ಇದ್ದು, ಉತ್ತಮ ವಿದ್ಯಾರ್ಥಿಗಳ ಆರೋಗ್ಯಕ್ಕೆ ಸಹಕಾರಿಯಾಗಲಿದೆ ಎಂದು ಕಾಗವಾಡ ತಾ.ಪಂ ಕಾರ್ಯನಿರ್ವಹಣಾಧಿಕಾರಿ ಪ್ರವೀಣ ಪಾಟೀಲ ಹೇಳಿದರು.ಜಿ.ಪಂ ಬೆಳಗಾವಿ, ಶಾಲಾ ಶಿಕ್ಷಣ ಇಲಾಖೆ ಚಿಕ್ಕೋಡಿ, ಶ್ರೀ ಸತ್ಯ ಸಾಯಿ ಟ್ರಸ್ಟ್ ಹಾಗೂ ಕೆಎಂಎಫ್ ಸಂಸ್ಥೆ ಇವುಗಳ ಸಂಯುಕ್ತಾಶ್ರಯದಲ್ಲಿ ಐನಾಪುರದ ಸರ್ಕಾರಿ ಹೆಣ್ಣು ಮಕ್ಕಳ ಶಾಲೆಯಲ್ಲಿ 1 ರಿಂದ 10ನೇ ತರಗತಿಯವರೆಗೆ ಓದುತ್ತಿರುವ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರ ಸಾಯಿ ಶೂರ್ ಹೆಲ್ತ್ ಮಿಕ್ಸ್ ವಿತರಣಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ಮಕ್ಕಳಲ್ಲಿನ ಅಪೌಷ್ಟಿಕತೆ ತೊಡೆದು ಹಾಕಲು ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಈಗ ರಾಗಿ ಮಾಲ್ಟ್ ನೀಡಲಾಗುತ್ತಿದೆ. ಸಾಕಷ್ಟು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು ಇದನ್ನು ಹೋಗಲಾಡಿಸಲು ರಾಜ್ಯ ಸರ್ಕಾರ ವಿನೂತನವಾಗಿ ಈ ಯೋಜನೆ ಜಾರಿಗೆ ತಂದಿದ್ದು, ಮಕ್ಕಳ ಕಲಿಕೆಗೆ, ದೈಹಿಕ ಸದೃಢತೆಗೆ ಪೂರಕವಾಗಿದೆ ಎಂದು ಹೇಳಿದರು.
ಈ ವೇಳೆ ಪ.ಪಂ ಸದಸ್ಯ ಅರುಣ ಗಾಣಿಗೇರ, ಪ.ಪಂ ಸದಸ್ಯ ಸಂಜಯ ಬಿರಡಿ, ಕುಮಾರ ಜಯಕರ, ಕ್ಷೇತ್ರ ಶಿಕ್ಷಾಣಾಧಿಕಾರಿ ಎಂ.ಆರ್. ಮುಂಜೆ, ಬಿಸಿಯೂಟ ಅಧಿಕಾರಿ ಮಲ್ಲಿಕಾರ್ಜುನ ನಾಮದಾರ, ನೌಕರರ ಸಂಘದ ಅಧ್ಯಕ್ಷ ಗೌಡಪ್ಪ ಸಡ್ಡಿ, ಶಿಕ್ಷಕರ ಸಂಘದ ಅಧ್ಯಕ್ಷ ಜಿ.ಎಂ.ಸಂಕಪಾಳ, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಇಲಾಖೆಗಳ ಅಧಿಕಾರಿಗಳು, ಶಿಕ್ಷಕರು ಇದ್ದರು. ಸಂಜಯ ಕುರಣೆ ನಿರೂಪಿಸಿದರು, ಎ,ಬಿ.ಅಡಿಸೇರಿ ವಂದಿಸಿದರು.