ಟ್ರ್ಯಾಕ್ಟರ್‌ ಟ್ರ್ಯಾಲಿ ಪಲ್ಟಿ : ಮೂವರು ಮಹಿಳೆಯರು ಸಾವು

| Published : Feb 05 2024, 01:46 AM IST

ಸಾರಾಂಶ

ಘಟನೆಯಲ್ಲಿ ಮಾಲಾ ರಾವಾಸಾಬ ಐನಾಪುರೆ(65), ಚಂಪಾ ಲಕ್ಕಪ್ಪ ತಳಕಟ್ಟಿ (45), ಭಾರತಿ ಸತ್ಯಪ್ಪ (ಘಾಟಗೆ) ವಡ್ರಾಳೆ(42) ಮೃತಪಟ್ಟಿದ್ದಾರೆ.

ಕನ್ನಡಪ್ರಭ ವಾರ್ತೆ ಕಾಗವಾಡಕಬ್ಬು ಸಾಗಾಟದ ಟ್ರ್ಯಾಕ್ಟರ್‌ ಟ್ರ್ಯಾಲಿ ಪಲ್ಟಿಯಾದ ಪರಿಣಾಮ ಮೂವರು ಮಹಿಳೆಯರು ಮೃತಪಟ್ಟಿದ್ದು, ಮತ್ತೊಬ್ಬರ ಸ್ಥಿತಿ ಚಿಂತಾಜನ ಆದ ಘಟನೆ ಕಾಗವಾಡ ತಾಲೂಕಿನ ಶೇಡಬಾಳ ಗ್ರಾಮದ ಇಂದಿರಾ ಕಾಲೋನಿ ಸಮೀಪ ಸಂಭವಿಸಿದೆ. ಘಟನೆಯಲ್ಲಿ ಮಾಲಾ ರಾವಾಸಾಬ ಐನಾಪುರೆ(65), ಚಂಪಾ ಲಕ್ಕಪ್ಪ ತಳಕಟ್ಟಿ (45), ಭಾರತಿ ಸತ್ಯಪ್ಪ (ಘಾಟಗೆ) ವಡ್ರಾಳೆ(42) ಮೃತಪಟ್ಟಿದ್ದಾರೆ. ಶೇಕವ್ವ ನರಸಪ್ಪ ಸರಸಾಯಿ (45) ಇವರ ಪರಿಸ್ಥಿತಿ ಚಿಂತಾಜನಕವಾಗಿದ್ದು, ಮಹಾರಾಷ್ಟ್ರದ ಮಿರಜ ಸಿವಿಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಕೃಷಿ ಕೂಲಿ ಕೆಲಸ ಮುಗಿಸಿ ರಸ್ತೆ ಬದಿ ನಡೆದು ಮನೆಗೆ ಬರುತ್ತಿದ್ದ ವೇಳೆ ಕಬ್ಬು ತುಂಬಿದ ಟ್ಯಾಕ್ಟರ್ ಟ್ರ್ಯಾಲಿ ಪಲ್ಟಿಯಾಗಿ ಇವರ ಮೇಲೆ ಬಿದ್ದು ಘಟನೆ ನಡೆದಿದೆ. ಕಾಗವಾಡ ಶಾಸಕ ರಾಜು ಕಾಗೆ ಸ್ಥಳಕ್ಕೆ ಭೇಟಿ ನೀಡಿ ಗಾಯಾಳು ಮಹಿಳೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಿ, ತ್ವರಿತ ರಕ್ಷಣಾ ಕಾರ್ಯಾಚರಣೆ ನಡೆಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು. ಮೃತ ಕುಟುಂಬಗಳಿಗೆ ಸರ್ಕಾರದಿಂದ ಪರಿಹಾರ ಕೊಡಿಸುವ ಭರವಸೆ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಕಾಗವಾಡ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ.

₹2 ಲಕ್ಷ ರೂ ಪರಿಹಾರ:

ಬೆಂಗಳೂರು: ಬೆಳಗಾವಿ ಜಿಲ್ಲೆ ಕಾಗವಾಡ ಬಳಿ ಸಂಭವಿಸಿದ ಟ್ರ್ಯಾಕ್ಟರ್ ಅಪಘಾತದಲ್ಲಿ ಮೃತಪಟ್ಟ ಮೂವರು ಮಹಿಳೆಯರ ಕುಟುಂಬಗಳಿಗೆ ತಲಾ ₹2 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯರ ಗಮನಕ್ಕೆ ತಂದು ವಿಶೇಷ ಪ್ರಕರಣ ಎಂದು ಪರಿಗಣಿಸಿ ಪರಿಹಾರ ನೀಡಲು ಮನವಿ ಮಾಡಿದಾಗ ಸಮ್ಮತಿಸಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ. ಘಟನೆ ಬಗ್ಗೆ ಆಘಾತ ವ್ಯಕ್ತ ಪಡಿಸಿರುವ ಸಚಿವರು ಮೃತರಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಳು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ