ಶ್ರೀನಿವಾಸಗೌಡರಿಗೆ ಸನ್ಮಾನ

| Published : May 14 2024, 01:13 AM IST

ಸಾರಾಂಶ

ಸಹಕಾರಿ ಧುರೀಣರಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಕೋಲಾರ ಕ್ಷೇತ್ರವನ್ನು ಗುರುತಿಸುವ ನಿಟ್ಟಿನಲ್ಲಿ ಕೆಲಸ ಮಾಡಿದ್ದಾರೆ, ಜೊತೆಗೆ ಕ್ಷೇತ್ರದಲ್ಲಿ ತಮ್ಮದೇ ಆದ ಹಿಡಿತವನ್ನು ಹೊಂದಿದ್ದಾರೆ

ಕನ್ನಡಪ್ರಭ ವಾರ್ತೆ ಕೋಲಾರಕಳೆದ ೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಸಿದ್ದರಾಮಯ್ಯ ಅವರು ಸ್ಪರ್ಧೆ ಮಾಡಲಿದ್ದಾರೆ ಎಂದು ಮಾಜಿ ಸಚಿವ ಹಾಗೂ ಅಂತರಾಷ್ಟ್ರೀಯ ಸಹಕಾರಿ ಧುರೀಣ ಕೆ.ಶ್ರೀನಿವಾಸಗೌಡರು ಕ್ಷೇತ್ರವನ್ನು ತ್ಯಾಗ ಮಾಡಿದ್ದಾರೆ ಅವರ ತ್ಯಾಗಕ್ಕೆ ಸೂಕ್ತ ಸ್ಥಾನಮಾನ ನೀಡಬೇಕಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಊರಬಾಗಿಲು ಶ್ರೀನಿವಾಸ್ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.ಜಿಲ್ಲಾ ಕಾಂಗ್ರೆಸ್‌ನಿಂದ ಇಫ್ಕೋ ಸಂಸ್ಥೆಗೆ ಸತತವಾಗಿ ಏಳನೇ ಬಾರಿಗೆ ನಿರ್ದೇಶಕರಾಗಿ ಆಯ್ಕೆಯಾದ ಕೆ.ಶ್ರೀನಿವಾಸಗೌಡರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿ, ಸಹಕಾರಿ ಧುರೀಣರಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಕೋಲಾರ ಕ್ಷೇತ್ರವನ್ನು ಗುರುತಿಸುವ ನಿಟ್ಟಿನಲ್ಲಿ ಕೆಲಸ ಮಾಡಿದ್ದಾರೆ, ಜೊತೆಗೆ ಕ್ಷೇತ್ರದಲ್ಲಿ ತಮ್ಮದೇ ಆದ ಹಿಡಿತವನ್ನು ಹೊಂದಿದ್ದಾರೆ ಎಂದರು.

ಶ್ರೀನಿವಾಸಗೌಡರನ್ನು ಎಂಎಲ್ಸಿ ಮಾಡಲಿ

ಸಿದ್ದರಾಮಯ್ಯ ಕೋಲಾರದಲ್ಲಿ ಕಾರಣದಿಂದ ನಿಲ್ಲುವುದಿಲ್ಲ ಎಂದ ಬಳಿಕವೂ ಶ್ರೀನಿವಾಸಗೌಡ ಬೇರೆಯವರಿಗೆ ಕ್ಷೇತ್ರ ಬಿಟ್ಟು ಕೊಟ್ಟು ಕಾಂಗ್ರೆಸ್ ಗೆಲುವಿಗೆ ಸಹಕಾರಿಯಾಗಿದ್ದಾರೆ ಅಂತಹವರಿಗೆ ಮುಂದಿನ ದಿನಗಳಲ್ಲಿ ಸಿ.ಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಮಾಜಿ ಕೆ.ಎಚ್ ಮುನಿಯಪ್ಪ ಕಾಂಗ್ರೆಸ್ ನಾಯಕರು ಅವರನ್ನು ಎಂಎಲ್ಸಿ ಮಾಡಿ ನ್ಯಾಯ ಒದಗಿಸಬೇಕಾಗಿದೆ ಎಂದರು.ಕೋಲಾರ ತಾಲೂಕಿನ ಅಣ್ಣಿಹಳ್ಳಿ ಸೊಸೈಟಿ ಮೂಲಕ ಸಹಕಾರಿ ಕ್ಷೇತ್ರಕ್ಕೆ ಬಂದು ತಾಲೂಕು ಜಿಲ್ಲಾ ಪರಿಷತ್ ಸೇರಿದಂತೆ ಕೋಲಾರ ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ರಾಜ್ಯದಲ್ಲಿ ಕೃಷಿ ಸಚಿವರಾಗಿ ಕೆಲಸ ಮಾಡಿದ್ದಾರೆ, ನವದೆಹಲಿಯ ಇಫ್ಕೋ ಸಂಸ್ಥೆಗೆ ಸತತವಾಗಿ ಏಳನೇ ಬಾರಿಗೆ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ ಎಂದು ಶ್ಲಾಘಿಸಿದರು.ನಗರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸಾದ್ ಬಾಬು, ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಉದಯಶಂಕರ್, ಮುಖಂಡರಾದ ನಾಗರಾಜಗೌಡ, ಹಾರೋಹಳ್ಳಿ ಶ್ರೀನಿವಾಸ್, ನಾಗೇಶ್, ರಾಮಣ್ಣ, ತ್ಯಾಗರಾಜ್, ಹರೀಶ್ ಇದ್ದರು.