ಸಾರಾಂಶ
ಪಹಲ್ಗಾಂ ದಾಳಿಗೆ ಪ್ರತೀಕಾರವಾಗಿ, ಭಾರತೀಯ ಸೇನೆಯು "ಆಪರೇಷನ್ ಸಿಂದೂರ " ಪ್ರಾರಂಭಿಸಿ ಪಾಕಿಸ್ತಾನದೊಳಗೆ ಆಳವಾಗಿ ದಾಳಿ ನಡೆಸಿ, ಲಷ್ಕರ್-ಎ-ತೊಯ್ಬಾ ಮತ್ತು ಜೈಶ್-ಎ-ಮೊಹಮ್ಮದ್ ಗುಂಪುಗಳಿಗೆ ಸೇರಿದ ಒಂಭತ್ತು ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ನಾಶಪಡಿಸಿತು. ನೂರಾರು ಭಯೋತ್ಪಾದಕರನ್ನು ನಿರ್ಮೂಲನೆ ಮಾಡುವ ಮೂಲಕ ಮತ್ತು ಭಯೋತ್ಪಾದನೆಯನ್ನು ಸಹಿಸಲಾಗುವುದಿಲ್ಲ ಎಂಬ ದಿಟ್ಟ ಸಂದೇಶವನ್ನು ಜಗತ್ತಿಗೆ ರವಾನಿಸಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಭಯೋತ್ಪಾದಕರಿಗೆ ಮುಗ್ಧ ಹಿಂದೂಗಳು ಚೆಲ್ಲುವ ಪ್ರತಿ ರಕ್ತದ ಹನಿಗೂ ನ್ಯಾಯ ಒದಗಿಸಿದೆ ಎಂದರು.
ಕನ್ನಡಪ್ರಭ ವಾರ್ತೆ ಹಾಸನ
ಆಪರೇಷನ್ ಸಿಂದೂರದಲ್ಲಿ ದೇಶಕ್ಕಾಗಿ ಪ್ರಾಣ ಕೊಟ್ಟ ವೀರಯೋಧರಿಗೆ ಕದಂಬ ಸೈನ್ಯ ಕನ್ನಡ ಸಂಘಟನೆ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್ ಜಿಲ್ಲಾಧಿಕಾರಿ ಕಚೇರಿ ಬಳಿ ಬುಧವಾರ ಬೆಳಿಗ್ಗೆ ಪುಷ್ಪಾರ್ಚನೆ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಯನ್ನು ನೇರವೇರಿಸಿದರು. ಇದೇ ವೇಳೆ ಯಾವುದೇ ಕಾರಣಕ್ಕೂ ಆಪರೇಷನ್ ಸಿಂದೂರವನ್ನು ನಿಲ್ಲಿಸದೇ ಮುಂದುವರಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.ನಂತರ ಮಾತನಾಡಿದ ಅವರು, ಪಹಲ್ಗಾಂ ದಾಳಿಗೆ ಪ್ರತೀಕಾರವಾಗಿ, ಭಾರತೀಯ ಸೇನೆಯು "ಆಪರೇಷನ್ ಸಿಂದೂರ " ಪ್ರಾರಂಭಿಸಿ ಪಾಕಿಸ್ತಾನದೊಳಗೆ ಆಳವಾಗಿ ದಾಳಿ ನಡೆಸಿ, ಲಷ್ಕರ್-ಎ-ತೊಯ್ಬಾ ಮತ್ತು ಜೈಶ್-ಎ-ಮೊಹಮ್ಮದ್ ಗುಂಪುಗಳಿಗೆ ಸೇರಿದ ಒಂಭತ್ತು ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ನಾಶಪಡಿಸಿತು. ನೂರಾರು ಭಯೋತ್ಪಾದಕರನ್ನು ನಿರ್ಮೂಲನೆ ಮಾಡುವ ಮೂಲಕ ಮತ್ತು ಭಯೋತ್ಪಾದನೆಯನ್ನು ಸಹಿಸಲಾಗುವುದಿಲ್ಲ ಎಂಬ ದಿಟ್ಟ ಸಂದೇಶವನ್ನು ಜಗತ್ತಿಗೆ ರವಾನಿಸಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಭಯೋತ್ಪಾದಕರಿಗೆ ಮುಗ್ಧ ಹಿಂದೂಗಳು ಚೆಲ್ಲುವ ಪ್ರತಿ ರಕ್ತದ ಹನಿಗೂ ನ್ಯಾಯ ಒದಗಿಸಿದೆ ಎಂದರು.ನರೇಂದ್ರ ಮೋದಿಯವರು ಮೊದಲ ಬಾರಿಗೆ ಸೈನಿಕರಿಗೆ ಸಂಪೂರ್ಣ ಸ್ವಾತಂತ್ರ್ಯವನ್ನು ನೀಡಿದ್ದಾರೆ. ಭಾರತೀಯ ಸೇನೆಯು ಪಾಕಿಸ್ತಾನವನ್ನು ಪ್ರವೇಶಿಸಿ 26 ಅಮಾಯಕರ ಹತ್ಯೆಗೆ ಕಾರಣರಾದ ಭಯೋತ್ಪಾದಕರನ್ನು ನಿರ್ಮೂಲನೆ ಮಾಡಿದೆ. ಹೆಚ್ಚುತ್ತಿರುವ ಯುದ್ಧ ಉದ್ವಿಘ್ನತೆಯ ನಡುವೆ ಭಾರತವು ಪಹಲ್ಗಾಂ ದಾಳಿಗೆ ಪ್ರತೀಕಾರ ತೀರಿಸಿಕೊಂಡಿದ್ದು, ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ದಲ್ಲಿನ ಒಂಬತ್ತು ಭಯೋತ್ಪಾದಕ ಶಿಬಿರಗಳ ಮೇಲೆ ವಾಯುದಾಳಿ ನಡೆಸಿ, ಆಪರೇಷನ್ ಸಿಂದೂರ ಮೂಲಕ ಭಯೋತ್ಪಾದನೆಯನ್ನು ಅದರ ಬೇರುಗಳಲ್ಲಿಯೇ ಹತ್ತಿಕ್ಕಿದೆ ಎಂದು ಹೇಳಿದರು.ಕೇಂದ್ರ ಸರ್ಕಾರ ಯಾವುದೇ ರಾಷ್ಟ್ರ ಮಧ್ಯಸ್ಥಿಕೆ ವಹಿಸಿದರೂ ಕದನ ವಿರಾಮ ಘೋಷಣೆ ಮಾಡಬಾರದು. ಕದನ ವಿರಾಮ ಮಾಡಿದ್ದಕ್ಕೆ ಭಾರತದ ಗಡಿ ಭಾಗದ ಜಮ್ಮು ಕಾಶ್ಮೀರ ರಾಜಸ್ಥಾನ ಮತ್ತು ಗುಜರಾತ್ ಮೇಲೆ ಬಾಂಬ್ ದಾಳಿ ಮಾಡಿದ್ದಾರೆ. ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಯಾವುದೇ ಕಾರಣಕ್ಕೂ ಆಪರೇಷನ್ ಸಿಂದೂರವನ್ನು ನಿಲ್ಲಿಸುವುದಿಲ್ಲ ಎಂದು ಎಚ್ಚರಿಕೆ ನೀಡಬೇಕೆಂದು ಎಂದು ಹೇಳಿದರು. ಪಾಕಿಸ್ತಾನ ಕಳೆದು 50 ವರ್ಷಗಳಿಂದ ಭಯೋತ್ಪಾದಕರಿಗೆ ಆಶ್ರಯ ನೀಡುತ್ತಲೇ ಬಂದಿದೆ. ಸಾವಿರಾರು ಅಮಾಯಕ ಜನರ ಮೇಲೆ ದಾಳಿ ಮಾಡುತ್ತಲೇ ಬರುತ್ತಿದೆ. ಭಯೋತ್ಪಾದಕರನ್ನು ಬುಡ ಸಮೇತ ತೆಗೆದು ಹಾಕಲು ಭಾರತ ದೇಶ ಸೈನಿಕರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆದೇಶ ನೀಡಬೇಕು ಎಂದು ಮನವಿ ಮಾಡಿದರು. ನಮಗಾಗಿ ನಮ್ಮ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ವೀರ ಯೋಧರಿಗೆ ಪ್ರತಿ ಮನೆ ಮನೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಅವರ ಆತ್ಮಕ್ಕೆ ಗೌರವ ಪೂರಕವಾಗಿ ಕೃತಜ್ಞತೆ ಸಲ್ಲಿಸುವುದು ಭಾರತ ದೇಶದ ಎಲ್ಲಾ ಪ್ರಜೆಗಳ ಕರ್ತವ್ಯ ಎಂದರು.ಇದೇ ಸಂದರ್ಭದಲ್ಲಿ ಕದಂಬ ಸೈನ್ಯ ಕನ್ನಡ ಸಂಘಟನೆ ಜಿಲ್ಲಾ ಉಪಾಧ್ಯಕ್ಷ ಯಾಕುಬ್ ಖಾನ್ ಗೊರೂರು, ಸಕಲೇಶಪುರ ತಾಲೂಕು ಅಧ್ಯಕ್ಷ ವಿಶ್ವಾಸ್ ಬಿ ಗೌಡ, ಹಿರಿಯ ಸಾಹಿತಿಗಳು ಅನಂತರಾಜ್, ಹೋರಾಟಗಾರರಾದ ಪ್ರಕಾಶ್, ವಕೀಲರದ ಗೌಡರು, ರಾಜ್ಯ ಸಮಿತಿ ಸದಸ್ಯರಾದ ರಾಮು ಚಿಕ್ಕೆಗೌಡನದೊಡ್ಡಿ, ಮಂಡ್ಯ ಜಿಲ್ಲೆ ಸಂಚಾಲಕ ಸಲ್ಮಾನ್ ಇತರರು ಉಪಸ್ಥಿತರಿದ್ದರು.