ವಿರಾಜಪೇಟೆ ಶಾಸಕ ಅಜ್ಜಿಕುಟ್ಟೀರ ಎಸ್. ಪೊನ್ನಣ್ಣ ಅವರನ್ನು ಯುನೈಟೆಡ್ ಕೊಡವ ಆರ್ಗನೈಸೇಷನ್-ಯುಕೊ ಸಂಘಟನೆ ಸದಸ್ಯರು ವಿರಾಜಪೇಟೆಯ ಅವರ ಗೃಹ ಕಚೇರಿಯಲ್ಲಿ ಭೇಟಿ ಮಾಡಿ ಅಭಿನಂದಿಸಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿಜಮ್ಮಾ ಸಮಸ್ಯೆಗೆ ಶಾಸ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಭೂಕಂದಾಯ ಕಾಯ್ದೆಯ ತಿದ್ದುಪಡಿ ವಿದೇಯಕವನ್ನು ಸದನದಲ್ಲಿ ಮಂಡಿಸಿ, ಯಶಸ್ವಿಯಾಗಿ ಅನುಮೋದನೆ ಪಡೆಯುವಲ್ಲಿ ನಿರ್ಣಾಯಕ ಪಾತ್ರ ನಿರ್ವಹಿಸಿದ ವಿರಾಜಪೇಟೆ ಶಾಸಕ ಅಜ್ಜಿಕುಟ್ಟೀರ ಎಸ್. ಪೊನ್ನಣ್ಣ ಅವರನ್ನು ಮಂಗಳವಾರ ಯುನೈಟೆಡ್ ಕೊಡವ ಆರ್ಗನೈಸೇಷನ್-ಯುಕೊ ಸಂಘಟನೆ ಸದಸ್ಯರು ವಿರಾಜಪೇಟೆಯ ಅವರ ಗೃಹ ಕಚೇರಿಯಲ್ಲಿ ಭೇಟಿ ಮಾಡಿ ಸ್ಮರಣಿಕೆ ನೀಡಿ ಅಭಿನಂದಿಸಿದರು.

ಯುಕೊ ಸಂಘಟನೆ ಅಧ್ಯಕ್ಷ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ, ಶಾಸಕ ಪೊನ್ನಣ್ಣನವರ, ಕಾನೂನಿನ ಪರಿಣತೆ, ಸಂವಿಧಾನ ಹಾಗೂ ಶಾಸಕಾಂಗದ ಕುರಿತು ಇರುವ ಅಪಾರ ಜ್ಞಾನ ಮತ್ತು ತನ್ನಲ್ಲಿರುವ ಇಚ್ಛಾಶಕ್ತಿ ಹಾಗೂ ಬದ್ಧತೆಯ ಪರಿಣಾಮ ತಿದ್ದುಪಡಿ ಮಸೂದೆಯನ್ನು ಹೆಚ್ಚು ಪರಿಣಾಮಕಾರಿಯಾಗಿ ಮಂಡಿಸಿ ಸದನದ ಬೆಂಬಲ ಪಡೆಯಲು ಸಾಧ್ಯವಾಯಿತು ಎಂದರು.

ಯುಕೊ ಸದಸ್ಯರಾದ ಚೆಪ್ಪುಡಿರ ಸುಜು ಕರುಂಬಯ್ಯ, ನೆಲ್ಲಮಕ್ಕಡ ಮಾದಯ್ಯ, ಅಜಿನಿಕಂಡ ತಿಮ್ಮಯ್ಯ. ತೀತಿಮಾಡ ಬೋಸ್ ಅಯ್ಯಪ್ಪ, ಬಾದುಮಂಡ ವಿಷ್ಣು ಕಾರ್ಯಪ್ಪ, ಕೊಡವ ಸಾಹಿತ್ಯ ಅಖಾಡೆಮಿ ಸದಸ್ಯರಾದ ಚೊಟ್ಚೆಯಂಡ ಸಂಜು ಕಾವೇರಪ್ಪ, ಮೂರ್ನಾಡು ಕೊಡವ ಸಮಾಜದ ಅದ್ಯಕ್ಷರಾದ ತೇಲಪಂಡ ಸುಬ್ಬಯ್ಯ, ನಿರ್ದೇಶಕ ಚಂಗಂಡ ಸೂರಜ್, ಅಮ್ಮಾಟಂಡ ದೇವಯ್ಯ, ಸಮಾಜ ಸೇವಕ ಪಾಲೇಂಗಡ ಅಮಿತ್, ಕಾಂಗ್ರೆಸ್ ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷ ಮೀದೇರಿರ ನವೀನ್ ಇದ್ದರು.