ಸರ್ವರ್‌ ಸಮಸ್ಯೆಯಿಂದ ಪಡಿತರ ವಿತರಣೆಯಲ್ಲಿ ವ್ಯತ್ಯಯ

| Published : Nov 29 2024, 01:04 AM IST

ಸರ್ವರ್‌ ಸಮಸ್ಯೆಯಿಂದ ಪಡಿತರ ವಿತರಣೆಯಲ್ಲಿ ವ್ಯತ್ಯಯ
Share this Article
  • FB
  • TW
  • Linkdin
  • Email

ಸಾರಾಂಶ

ಬೇಲೂರು ತಾಲೂಕಿನ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಿಸಲು ಸರ್ವರ್‌ ಸಮಸ್ಯೆ ಉಂಟಾಗಿದ್ದು, ಕೂಡಲೆ ಇದನ್ನು ಸರಿಪಡಿಸಬೇಕೆಂದು ತಾಲೂಕು ಸರ್ಕಾರಿ ಪಡಿತರ ವಿತರಕರ ಸಂಘದ ಅಧ್ಯಕ್ಷ ಗಂಗೂರು ರಂಗೇಗೌಡ ಆಗ್ರಹಿಸಿದ್ದಾರೆ. ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್‌ ಮಮತಾ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಕಳೆದು ಮೂರು ತಿಂಗಳಿಂದ ತಾಲೂಕಿನಾದ್ಯಂತ ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್‌ ಸಮಸ್ಯೆಯಿಂದ ಗ್ರಾಹಕರು ಮತ್ತು ಮಾಲೀಕರ ನಡುವೆ ವಾಗ್ವಾದ ನಡೆಯುತ್ತಿದ್ದು, ಕೂಡಲೇ ಸರ್ವರ್ ಸಮಸ್ಯೆಯನ್ನು ಬಗೆಹರಿಸಬೇಕು ಎಂದರು.

ಕನ್ನಡಪ್ರಭ ವಾರ್ತೆ ಬೇಲೂರುತಾಲೂಕಿನ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಿಸಲು ಸರ್ವರ್‌ ಸಮಸ್ಯೆ ಉಂಟಾಗಿದ್ದು, ಕೂಡಲೆ ಇದನ್ನು ಸರಿಪಡಿಸಬೇಕೆಂದು ತಾಲೂಕು ಸರ್ಕಾರಿ ಪಡಿತರ ವಿತರಕರ ಸಂಘದ ಅಧ್ಯಕ್ಷ ಗಂಗೂರು ರಂಗೇಗೌಡ ಆಗ್ರಹಿಸಿದ್ದಾರೆ.ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್‌ ಮಮತಾ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದ ಅವರು, ಕಳೆದು ಮೂರು ತಿಂಗಳಿಂದ ತಾಲೂಕಿನಾದ್ಯಂತ ನ್ಯಾಯಬೆಲೆ ಅಂಗಡಿಗಳಲ್ಲಿ ಸರ್ವರ್‌ ಸಮಸ್ಯೆಯಿಂದ ಗ್ರಾಹಕರು ಮತ್ತು ಮಾಲೀಕರ ನಡುವೆ ವಾಗ್ವಾದ ನಡೆಯುತ್ತಿದ್ದು, ಕೂಡಲೇ ಸರ್ವರ್ ಸಮಸ್ಯೆಯನ್ನು ಬಗೆಹರಿಸಬೇಕು ಎಂದರು.ತಾಲೂಕಿನ ಮಲೆನಾಡು ಭಾಗಗಳಲ್ಲಿ ಕೂಲಿ ಕಾರ್ಮಿಕರು, ಬಡವರೇ ಹೆಚ್ಚಾಗಿದ್ದು ಗ್ರಾಮೀಣ ಭಾಗದ ಗ್ರಾಹಕರು ದಿನನಿತ್ಯ ನ್ಯಾಯ ಬೆಲೆ ಅಂಗಡಿಗಳಿಗೆ ಅಲೆಯುತ್ತಿದ್ದಾರೆ. ಈ ಭಾಗದ ಕೆಲವು ಕಡೆಗಳಲ್ಲಿ ಕಾಡಾನೆಗಳ ಸಮಸ್ಯೆ ಇದ್ದು, ಅನಾಹುತವಾಗುವ ಮುನ್ನ ಸುಗಮ ಪಡಿತರ ಪಡೆಯಲು ಅನುವು ಮಾಡಿಕೊಡಬೇಕು ಎಂದರು. ವೃದ್ಧರು ಹಾಗೂ ಗ್ರಾಮೀಣ ಪ್ರದೇಶದ ಗ್ರಾಹಕರ ಹಿತದೃಷ್ಟಿಯಿಂದ ಈ ಹಿಂದಿನಂತೆಯೇ ಓಟಿಪಿ ಮೂಲಕ ಪಡಿತರ ಪಡೆಯಲು ಅನುಕೂಲ ಮಾಡಿಕೊಡಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ತಾಲೂಕು ಸರ್ಕಾರಿ ಪಡಿತರ ವಿತರಕರ ಸಂಘದ ಪ್ರಧಾನ ಕಾರ್ಯದರ್ಶಿ ಎನ್. ಅನಂತು, ಉಪಾಧ್ಯಕ್ಷ ಮಹೇಶ್, ಖಜಾಂಚಿ ಮೋಹನ್, ನಿರ್ದೇಶಕ ನಂಜುಂಡಪ್ಪ, ಇದ್ದರು.