ವಿದ್ಯಾರ್ಥಿಗಳು ಪಠ್ಯದ ಜೊತೆ ಸಾಧಕರ ಪುಸ್ತಕ ಓದಬೇಕು

| Published : Feb 10 2024, 01:45 AM IST

ಸಾರಾಂಶ

ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಪಠ್ಯದೊಂದಿಗೆ ಗ್ರಂಥಾಲಯದಲ್ಲಿ ಲಭ್ಯವಿರುವ ಸಾಧಕರ ಪುಸ್ತಕಗಳನ್ನು ಓದಬೇಕು. ದಿನಪತ್ರಿಕೆ, ಸ್ಪರ್ಧಾತ್ಮಕ ಪರೀಕ್ಷೆಗಳ ಬಗೆಗಿನ ಪುಸ್ತಕ ಓದುವ, ಓದಿದ್ದನ್ನು ಮನನ ಮಾಡಿಕೊಳ್ಳುವುದನ್ನು ರೂಢಿಸಿಕೊಂಡಲ್ಲಿ ಸಾಧನೆ ಮಾಡಬಹುದಾಗಿದೆ .

ಬೈಲಹೊಂಗಲ: ವಿದ್ಯಾರ್ಥಿಗಳು ಗ್ರಂಥಾಲಯದಲ್ಲಿ ಲಭ್ಯವಿರುವ ಪುಸ್ತಕಗಳನ್ನು ಓದಿ ಹೆಚ್ಚಿನ ಜ್ಞಾನ ಸಂಪಾಧಿಸಿಕೊಂಡು ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂದೆ ಹೇಳಿದರು.

ತಾಲೂಕಿನ ಮಲ್ಲಮ್ಮನ ಬೆಳವಡಿ ಗ್ರಾಮದ ಗ್ರಾಮ ಪಂಚಾಯತಿಯ ಡಿಜಿಟಲ್ ಗ್ರಂಥಾಲಯಕ್ಕೆ ಶುಕ್ರವಾರ ಭೇಟಿ ನೀಡಿ ಓದುಗರೊಂದಿಗೆ ಚರ್ಚಿಸಿ ಅವರು ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಪಠ್ಯದೊಂದಿಗೆ ಗ್ರಂಥಾಲಯದಲ್ಲಿ ಲಭ್ಯವಿರುವ ಸಾಧಕರ ಪುಸ್ತಕಗಳನ್ನು ಓದಬೇಕು. ದಿನಪತ್ರಿಕೆ, ಸ್ಪರ್ಧಾತ್ಮಕ ಪರೀಕ್ಷೆಗಳ ಬಗೆಗಿನ ಪುಸ್ತಕ ಓದುವ, ಓದಿದ್ದನ್ನು ಮನನ ಮಾಡಿಕೊಳ್ಳುವುದನ್ನು ರೂಢಿಸಿಕೊಂಡಲ್ಲಿ ಸಾಧನೆ ಮಾಡಬಹುದಾಗಿದೆ ಎಂದರು.

ಗ್ರಂಥಪಾಲಕ, ಗ್ರಾ.ಪಂ ಸದಸ್ಯರು, ಸಿಬ್ಬಂದಿ ಜೊತೆ ಚರ್ಚಿಸಿ ಸಮಯಕ್ಕೆ ಸರಿಯಾಗಿ ಕೆಲಸಕ್ಕೆ ಬಂದು ಸಾರ್ವಜನಿಕರೊಂದಿಗೆ ಸಹಕಾರದಿಂದ ವರ್ತಿಸಿ ಅವರ ಸಮಸ್ಯಗಳಿಗೆ ತ್ವರಿತಗತಿಯಲ್ಲಿ ಸ್ಪಂದಿಸುವಂತೆ ತಿಳಿ ಹೇಳಿದರು.

ಕಾರ್ಯನಿರ್ವಾಹಕ ಅಧಿಕಾರ ಗಂಗಾಧರ ಕಂದಕೂರ, ಸಹಾಯಕ ನಿರ್ದೇಶಕ ವಿಜಯ ಪಾಟೀಲ, ತಾಪಂ ವ್ಯವಸ್ಥಾಪಕ ಎಂ.ಎನ್.ಮಿಜ್ಜಿ, ಗ್ರಾ.ಪಂ ಅಧ್ಯಕ್ಷ ಚಂದ್ರಶೇಖರಯ್ಯಾ ಕಾರಿಮನಿ, ಪಿಡಿಒ ಅವಿನಾಶ ಅಂಗರಗಟ್ಟಿ, ಗಣಕಯಂತ್ರ ಸಹಾಯಕಿ ಅಶ್ವಿನಿ ಮಾಂಡೊಳ್ಕರ, ಗ್ರಂಥಪಾಲಕ ಎಂ.ಎಸ್.ಕೆಂಜೇಡಿಮಠ, ಸುನೀಲ್ ಔವರನಾಳ, ಎಸ್.ವಿ.ಹಿರೇಮಠ ಇದ್ದರು.