‘ಸಾಧನೆ ಮಾಡಲು ಪರಿಶ್ರಮಪಟ್ಟರೆ ನಮ್ಮ ಗುರಿಯನ್ನು ನಾವು ಮುಟ್ಟಬಹುದು’

| Published : Mar 23 2024, 01:02 AM IST

ಸಾರಾಂಶ

ಸಾಧನೆ ಮಾಡಬೇಕು ಎಂಬ ಹಠ, ಛಲ ಹೊಂದಿರುವ ವಿದ್ಯಾರ್ಥಿಗಳಿಗೆ ಸಮಾಜದಲ್ಲಿ ಹಲವು ಅವಕಾಶಗಳು ಇವೆ. ನಾವು ಯಾವ ದಾರಿಯಲ್ಲಿ ಸಾಗಬೇಕು ಎಂಬುದನ್ನು ಆಯ್ಕೆ ಮಾಡಿಕೊಳ್ಳವುದು ನಿಮ್ಮಗಳ ಜವಾಬ್ದಾರಿಯಾಗಿದೆ. ನಾವು ಯಾವುದೇ ಕೆಲಸ ಮಾಡಿದರು ಆತ್ಮವಿಶ್ವಾಸದಿಂದ ಕೆಲಸ ಮಾಡಬೇಕು. ಸಮಾಜದಲ್ಲಿ ಹಲವು ಸಾಧಕರಿದ್ದಾರೆ. ಸಾಧಕರ ಸಾಧನೆಯನ್ನು ಮೈಗೂಡಿಸಿಕೊಂಡು ಮುನ್ನಡೆದು ಕನಸ್ಸುಗಳನ್ನು ನನಸ್ಸು ಮಾಡಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು.

ಕನ್ನಡಪ್ರಭ ವಾರ್ತೆ ಪಾಂಡವಪುರಜೀವನದಲ್ಲಿ ಸಾಧನೆ ಮಾಡಲು ಪರಿಶ್ರಮಪಟ್ಟರೆ ಗುರಿ ಮುಟ್ಟಬಹುದು ಎಂದು ವೃತ್ತಿಕೌಶಲ್ಯ ತರಬೇತಿ ಮಾರ್ಗದರ್ಶಕ ಶಂಕರ್‌ ಬೆಳ್ಳೂರು ಹೇಳಿದರು.

ಪಟ್ಟಣದ ಬಿಜಿಎಸ್ ಸಮೂಹ ಶಿಕ್ಷಣ ಸಂಸ್ಥೆಯ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಮುಗಿದ ಬಳಿಕ ಮುಂದೇನು ಎಂಬ ವಿಶೇಷ ಅರಿವಿನ ಕಾರ್ಯಾಗಾರದಲ್ಲಿ ಹಲವು ಸಲಹೆಗಳನ್ನು ನೀಡಿದರು.

ಸಾಧನೆ ಮಾಡಬೇಕು ಎಂಬ ಹಠ, ಛಲ ಹೊಂದಿರುವ ವಿದ್ಯಾರ್ಥಿಗಳಿಗೆ ಸಮಾಜದಲ್ಲಿ ಹಲವು ಅವಕಾಶಗಳು ಇವೆ. ನಾವು ಯಾವ ದಾರಿಯಲ್ಲಿ ಸಾಗಬೇಕು ಎಂಬುದನ್ನು ಆಯ್ಕೆ ಮಾಡಿಕೊಳ್ಳವುದು ನಿಮ್ಮಗಳ ಜವಾಬ್ದಾರಿಯಾಗಿದೆ. ನಾವು ಯಾವುದೇ ಕೆಲಸ ಮಾಡಿದರು ಆತ್ಮವಿಶ್ವಾಸದಿಂದ ಕೆಲಸ ಮಾಡಬೇಕು ಎಂದರು.

ಸಮಾಜದಲ್ಲಿ ಹಲವು ಸಾಧಕರಿದ್ದಾರೆ. ಸಾಧಕರ ಸಾಧನೆಯನ್ನು ಮೈಗೂಡಿಸಿಕೊಂಡು ಮುನ್ನಡೆದು ಕನಸ್ಸುಗಳನ್ನು ನನಸ್ಸು ಮಾಡಿಕೊಳ್ಳುವ ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು ಸಲಹೆ ನೀಡಿದರು.

ಬಿಜಿಎಸ್ ಶಿಕ್ಷಣ ಸಂಸ್ಥೆ ಸಾವಿರಾರು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗಿದೆ. ಮಕ್ಕಳಿಗೆ ಶಿಕ್ಷಣ ಕೊಡಿಸುವುದರ ಜತೆಗೆ ಹಲವು ಮಾಹಿತಿಗಳನ್ನು ನೀಡುವ ಮೂಲಕ ಮಕ್ಕಳ ಮುಂದಿನ ಉಜ್ವಲ ಭವಿಷ್ಯಕ್ಕೆ ಸಹಕಾರಿಯಾಗುವ ಕೆಲಸ ಮಾಡುತ್ತಿದ್ದಾರೆ ಎಂದು ಬಣ್ಣಿಸಿದರು.

ಸಂಸ್ಥೆ ಕಾರ್‍ಯದರ್ಶಿ ಡಾ.ಜೆ.ಎನ್.ರಾಮಕೃಷ್ಣೇಗೌಡ ಮಾತನಾಡಿ, ನಮ್ಮ ಗ್ರಾಮೀಣ ಪ್ರದೇಶದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿದ್ದಾರೆ. ಅವರಿಗೆ ಸೂಕ್ತ ಮಾರ್ಗದರ್ಶನ, ಸಲಹೆ ಸಹಕಾರ, ತರಬೇತಿಗಳಿಲ್ಲದೆ ಪ್ರತಿಭೆಗಳು ಮಕ್ಕಳಲ್ಲಿಯೇ ಕಮರಿ ಹೋಗುತ್ತಿವೆ ಎಂದರು. ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ ಅವರಿಗೆ ಸೂಕ್ತ ಮಾರ್ಗದರ್ಶನ ನೀಡಲು ಸಂಸ್ಥೆ ವತಿಯಿಂದ ಕಾರ್ಯಾಗಾರ ನಡೆಸಲಾಗುತ್ತಿದೆ. ಇದನ್ನು ಸದ್ಬಳಕೆ ಮಾಡಿಕೊಂಡು ಜೀವನದಲ್ಲಿ ಉತ್ತಮ ಬದುಕು ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಈ ವೇಳೆ ಆರ್‌ಟಿಒ ನೌಕರರ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ್, ಡಾ.ರಾಘವೇಂದ್ರ, ಪ್ರಾಂಶುಪಾಲರು, ಮುಖ್ಯಶಿಕ್ಷಕ, ಶಿಕ್ಷರು ಹಾಜರಿದ್ದರು. ಸಾಧನೆಗೆ ವ್ಯಕ್ತಿತ್ವ ವಿಕಸನ ಅಗತ್ಯ: ಶಂಕರ್ ಬೆಳ್ಳೂರು

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಸಾಧನೆಗೆ ಪದವಿ ಪ್ರಮಾಣ ಪತ್ರ, ತಾಂತ್ರಿಕತೆ, ಕೌಶಲ್ಯಗಳು ಸಾಲದು. ಅದರ ಜೊತೆಗೆ ವ್ಯಕ್ತಿತ್ವ ವಿಕಸನವೂ ಅಗತ್ಯ ಎಂದು ರಾಜ್ಯ ವ್ಯಕ್ತಿತ್ವ ವಿಕಸನ ತರಬೇತುದಾರ ಶಂಕರ್ ಬೆಳ್ಳೂರು ತಿಳಿಸಿದರು.ಪಟ್ಟಣದ ಬಿಜಿಎಸ್ ಎಜುಕೇಷನ್ ಸೆಂಟರ್ ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ವ್ಯಕ್ತಿತ್ವ ವಿಕಸನ ತರಬೇತಿ ಹಾಗೂ ಜೀವನದ ಗುರಿಸಾಧನೆ ಕುರಿತು ಕೆರಿಯರ್ ಲಾಂಚರ್ ಕಾರ್ಯಕ್ರಮದ ಹಾಗೂ ವಿದ್ಯಾರ್ಥಿಗಳೊಂದಿಗೆ ಚಿಂತನ ಮಂಥನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತನ್ನು ಅಳವಡಿಸಿಕೊಳ್ಳುವುದರ ಜೊತೆಗೆ ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು. ಮೊದಲು ವಿದ್ಯಾರ್ಥಿಗಳು ಪ್ರಶ್ನೆ ಕೇಳುವ ಮನೋಭಾವ ಇದ್ದರೆ ನಮ್ಮ ವ್ಯಕ್ತಿತ್ವ ಉತ್ತಮಗೊಂಡು ಉತ್ತಮ ಸಾಧಕರಾಗಿ ಮೂಡಿ ಬರಲು ಸಾಧ್ಯ ಎಂದರು.ನೀರು, ಸ್ವಚ್ಛಗಾಳಿ, ಉತ್ತಮ ಪರಿಸರ ಇಲ್ಲವಾದರೆ ಯಾವುದೂ ಪ್ರಯೋಜನಕ್ಕೆ ಬರುವುದಿಲ್ಲ. ಮುಂದೊಂದು ದಿನ ಕೆರೆ ಕಟ್ಟೆಗಳನ್ನು ಸೈನಿಕರು ಬಂದೂಕು ಹಿಡಿದು ಕಾಯಬೇಕಾದ ಸ್ಥಿತಿ ನಿರ್ಮಾಣವಾದರೂ ಆಚ್ಚರಿಯಿಲ್ಲ. ಈ ಹಿನ್ನೆಲೆಯಲ್ಲಿ ಇಂದಿನಿಂದಲೇ ನೈಸರ್ಗಿಕ ಸಂಪತ್ತನ್ನು ಕಾಪಾಡಿಕೊಳ್ಳುವ ಅಗತ್ಯವಿದೆ ಎಂದರು.

ಸಮಾಜ ಸೇವಕ ಆರ್‌ಟಿಒ ಮಲ್ಲಿಕಾರ್ಜುನ್ ಮಾತನಾಡಿ, ವಿದ್ಯಾರ್ಥಿಗಳು ಸವಾಲುಗಳನ್ನು ಸ್ವೀಕರಿಸಬೇಕು. ಸಾಧನೆ ಮಾಡಬೇಕೆಂಬ ಮನೋಬಲವಿದ್ದರೆ ಯಾವುದೇ ರೀತಿಯ ಸಮಸ್ಯೆಗಳು ನಮಗೆ ಅಡ್ಡಿಯಾಗಲಾರವು ಎಂದರು.ಹೇಮಗಿರಿ ಬಿಜಿಎಸ್ ಶಾಖಾ ಮಠದ ಪ್ರಧಾನ ಕಾರ್ಯದರ್ಶಿ ಡಾ.ಜೆ.ಎನ್.ರಾಮಕೃಷ್ಣೇಗೌಡ ಮಾತನಾಡಿ, ವಿದ್ಯಾರ್ಥಿಗಳಲ್ಲಿ ವ್ಯಕ್ತಿತ್ವ ವಿಕಸನ, ಭಾಷಾಜ್ಞಾನ, ಕೌಶಲ್ಯಾಭಿವೃದ್ಧಿ ಮೂಲಕ ಸ್ಪರ್ಧೆಗಳಲ್ಲಿ ಭಾಗವಹಿಸುವಂತೆ ಉತ್ತೇಜಿಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಉದ್ಯಮಿಗಳಾದ ರಾಘವೇಂದ್ರ ಪ್ರಸಾದ್, ಪಿರಿಯಾಪಟ್ಟಣ ಕೆ.ಸುರೇಶ್, ಸಾಹಿತಿ ಬಲ್ಲೇನಹಳ್ಳಿ ಮಂಜುನಾಥ್, ಪುರಸಭಾ ಮಾಜಿ ಸದಸ್ಯ ಕೆ.ಆರ್ ನೀಲಕಂಠ, ಬಿಜಿಎಸ್ ಎಜುಕೇಶನ್ ಸೆಂಟರ್ ಶಾಲಾ ಮತ್ತು ಕಾಲೇಜಿನ ವಿದ್ಯಾರ್ಥಿಗಳು, ಬೋಧಕ ವರ್ಗ ಸೇರಿದಂತೆ ಇತರರಿದ್ದರು.