ದೇಶದ ಅಭಿವೃದ್ಧಿಗಾಗಿ ಬಿಜೆಪಿ ಗೆಲ್ಲಿಸಿ: ದೊಡ್ಡನಗೌಡ ಪಾಟೀಲ

| Published : Apr 08 2024, 01:02 AM IST

ಸಾರಾಂಶ

ದೇಶದ ಭದ್ರತೆ ಹಾಗೂ ರಕ್ಷಣೆಗೆ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ಗುರುತರ ಜವಾಬ್ದಾರಿ ನಮ್ಮ, ನಿಮ್ಮೆಲ್ಲರ ಮೇಲಿದೆ.

ಕನ್ನಡಪ್ರಭ ವಾರ್ತೆ ಇಳಕಲ್ಲ

ದೇಶದ ಎಲ್ಲ ಸಮಾಜಗಳ ನೆಚ್ಚಿನ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದೆ. ದೇಶದ ಬಹು ಸಂಖ್ಯಾತ ಕಾರ್ಯಕರ್ತರ ಪರಿಶ್ರಮದಿಂದ ದೇಶದೆಲ್ಲೆಡೆ ಕಮಲ ಅರಳಿದೆ ಎಂದು ಮಾಜಿ ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು.

ಪಕ್ಷದ ಕಚೇರಿಯಲ್ಲಿ ಬಿಜೆಪಿ ಸಂಸ್ಥಾಪನಾ ದಿನದ ನಿಮಿತ್ತ ಶ್ಯಾಮಪ್ರಸಾದ ಮುಖರ್ಜಿ, ಪಂಡಿತ ದೀನದಯಾಳ ಉಪಾಧ್ಯಾಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಅವರು, ದೇಶದ ಭದ್ರತೆ ಹಾಗೂ ರಕ್ಷಣೆಗೆ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡುವ ಗುರುತರ ಜವಾಬ್ದಾರಿ ನಮ್ಮ, ನಿಮ್ಮೆಲ್ಲರ ಮೇಲಿದೆ. ಕಾರಣ ಎಲ್ಲರೂ ಒಂದಾಗಿ ಕೆಲಸ ಮಾಡಿ, ದೇಶದ ಅಭಿವೃದ್ಧಿಗಾಗಿ ಬಿಜೆಪಿ ಗೆಲವಿಗೆ ಶ್ರಮಿಸೋಣ ಎಂದು ಕರೆ ನೀಡಿದರು. ಸಮಾರಂಭದಲ್ಲಿ ಮಹಾಂತಗೌಡ ಪಾಟೀಲ, ಅರವಿಂದ ಮಂಗಳೂರ, ಲಕ್ಷ್ಮಣ ಗುರಂ, ಮಂಜುನಾಥ ಶೆಟ್ಟರ, ರಾಜಕುಮಾರ ಬಾದವಾಡಗಿ, ಮಹಾಂತಪ್ಪ ಚನ್ನಿ, ಸುಗೂರೇಶ ನಾಗಲೋಟಿ ಹಾಗು ಬಿಜೆಪಿ ಪಕ್ಷದ ಪದಾಧಿಕಾರಿಗಳೂ ಹಾಗು ಅಪಾರ ಕಾರ್ಯಕರ್ತರು ಇದ್ದರು.