ಸಾರಾಂಶ
ಕನ್ನಡಪ್ರಭ ವಾರ್ತೆ ಹಾಸನ
ಹಲವು ವರ್ಷಗಳಿಂದ ನೆನಗುದಿಗೆ ಬಿದ್ದ ನಗರದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಯನ್ನು ಪೂರ್ಣಗೊಳಿಸಲು ಸರ್ಕಾರ ಶೀಘ್ರದಲ್ಲೇ ಟೆಂಡರ್ ಕರೆಯಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್ ಭರವಸೆ ನೀಡಿದರು.ನಗರದಲ್ಲಿ ಶನಿವಾರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣವು ಹಾಸನ ಜಿಲ್ಲೆಯ ಬಹು ನಿರೀಕ್ಷಿತ ಯೋಜನೆ. ಈ ಆಸ್ಪತ್ರೆ ಕಾರ್ಯ ನಿಂತುಹೋಗಿದ್ದರೂ ಈಗ ಎಲ್ಲಾ ಅಡಚಣೆಗಳು ನಿವಾರಣೆಯಾಗಿವೆ. ಶೀಘ್ರದಲ್ಲೇ ಹೊಸ ಟೆಂಡರ್ ಕರೆಯಲಾಗುತ್ತಿದ್ದು, ಕಾಮಗಾರಿ ಪೂರ್ಣಗೊಳ್ಳಲಿದೆ. ಹಿಂದಿನ ಕಾಮಗಾರಿಗೆ ಬಿಲ್‌ಗಳು ಪಾವತಿಯಾಗದ ವಿಚಾರ ನನ್ನ ಗಮನಕ್ಕೆ ಬಂದಿದೆ. ಲೋಕಸಭಾ ಸದಸ್ಯರ ಮನವಿಯ ಮೇರೆಗೆ ತನಿಖೆ ನಡೆಸಿ, ವಿಷಯವನ್ನು ಸಚಿವ ಸಂಪುಟದ ಅನುಮೋದನೆಗೆ ತರಲಾಗಿದೆ. ಅದು ಈಗ ಪ್ರಕ್ರಿಯೆಯಲ್ಲಿದೆ. ಮುಂದಿನ ಹಂತದಲ್ಲಿ ಸ್ಥಳ ಪರಿಶೀಲನೆ ನಡೆಸಿ ಉಳಿದ ಕಾಮಗಾರಿಗಳ ಪಟ್ಟಿಯನ್ನು ತಯಾರು ಮಾಡಲಾಗುವುದು ಎಂದರು. ಕಾಮಗಾರಿಯ ನೂತನ ಅಂದಾಜು ೨೨ ಕೋಟಿ ರು. ಎಂದು ಅವರು ತಿಳಿಸಿದರು. ಟೆಂಡರ್ ಪ್ರಕ್ರಿಯೆ ಮುಗಿದ ನಂತರ ಆಸ್ಪತ್ರೆಯ ಅಗತ್ಯ ಎಕ್ಯುಪ್ಮೆಂಟ್ ಖರೀದಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.ಸಂಪುಟ ಪುನರ್‌ರಚನೆ ಕುರಿತು ಪ್ರತಿಕ್ರಿಯಿಸಿದ ಅವರು, ಸಂಪುಟ ಪುನರ್‌ರಚನೆ ಮುಖ್ಯಮಂತ್ರಿಯವರ ವಿವೇಚನೆಗೆ ಒಳಪಟ್ಟ ವಿಷಯ. ಪಕ್ಷದ ಹಿರಿಯರು ಮತ್ತು ಕಾಂಗ್ರೆಸ್ ಅಧ್ಯಕ್ಷರ ಸಲಹೆಯ ಮೇರೆಗೆ ಮಾತ್ರ ನಿರ್ಧಾರವಾಗುತ್ತದೆ. ನನಗೆ ಅದರ ಬಗ್ಗೆ ಮಾಹಿತಿ ಇಲ್ಲ ಎಂದರು. ನಾನು ಮಾತನಾಡುವ ಪ್ರತಿಯೊಂದು ಮಾತು ಹಾಗೂ ಕೈಗೊಳ್ಳುವ ಪ್ರತಿಯೊಂದು ಕೆಲಸ ಸಾರ್ವಜನಿಕ ಹಿತಾಸಕ್ತಿಗಾಗಿ. ರಾಜಕೀಯ ಹೇಳಿಕೆಗಳಿಂದ ಜನತೆಗೆ ಉಪಯೋಗವಿಲ್ಲ. ಸರಕಾರ ಜನಪರ ಕಾರ್ಯಗಳಲ್ಲಿ ಎಲ್ಲಿ ಎಡವಿದರೂ ಅದನ್ನು ಸರಿಪಡಿಸಲು ಕ್ರಮ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು. ರಾಜ್ಯದಲ್ಲಿರುವ ಸಮಸ್ಯೆ ಆಗಿರಬಹುದು, ಸಾರ್ವಜನಿಕ ಹಿತಾಸಕ್ತಿ ಇರುವ ಕೆಲಸಗಳ ಬಗ್ಗೆ ಸರಕಾರವು ಎಲ್ಲಾದರೂ ಎಡವಿದ್ದರೇ ಯಾವುದು ಕೆಲಸ ಆಗಬೇಕಾಗಿದೆ ಅದನ್ನ ಸರಕಾರದ ಗಮನಕ್ಕೆ ತಂದರೇ ಮಾಡುವುದರಿಂದ ಜನರಿಗೆ ಉಪಯೋಗವಾಗಲಿದೆ ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಸಂಸದ ಶ್ರೇಯಸ್ ಪಟೇಲ್, ಹುಡಾ ಅಧ್ಯಕ್ಷ ಪಟೇಲ್ ಶಿವಪ್ಪ, ಪುಷ್ಪಗಿರಿ ಮಠದ ಸೋಮಶೇಖರ ಸ್ವಾಮೀಜಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಜಿಲ್ಲಾ ಅಧ್ಯಕ್ಷ ನವೀಲೆ ಪರಮೇಶ್, ತಾಲೂಕು ಅಧ್ಯಕ್ಷ ಕಟ್ಟಾಯ ಶಿವಕುಮಾರ್, ಗ್ರಾನೈಟ್ ರಾಜಶೇಖರ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))