ಜಗಳೂರು ತಾಲೂಕಲ್ಲಿ 1.30 ಕೋಟಿ ಮಹಿಳೆಯರಿಗೆ ಲಾಭ

| Published : Jul 15 2025, 01:00 AM IST

ಸಾರಾಂಶ

ರಾಜ್ಯ ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯಲ್ಲಿ ತಾಲೂಕಿನ 1.30 ಲಕ್ಷ ಮಹಿಳೆಯರು ಸಂಚಾರ ಮಾಡಿ, ಯೋಜನೆ ಲಾಭ ಪಡೆದಿದ್ದಾರೆ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದ್ದಾರೆ.

- ಬಸ್‌ನಲ್ಲಿ ಸಂಚರಿಸಿ ಸಮಸ್ಯೆಗಳ ಆಲಿಸಿ ಶಾಸಕ ಬಿ.ದೇವೇಂದ್ರಪ್ಪ ಶ್ಲಾಘನೆ

- - -

ಕನ್ನಡಪ್ರಭ ವಾರ್ತೆ ಜಗಳೂರು

ರಾಜ್ಯ ಕಾಂಗ್ರೆಸ್‌ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯಲ್ಲಿ ತಾಲೂಕಿನ 1.30 ಕೋಟಿ ಮಹಿಳೆಯರು ಸಂಚಾರ ಮಾಡಿ, ಯೋಜನೆ ಲಾಭ ಪಡೆದಿದ್ದಾರೆ ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದರು.

ಗ್ಯಾರಂಟಿ ಅನುಷ್ಠಾನ ಸಮಿತಿಯಿಂದ ಪಟ್ಟಣದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸೋಮವಾರ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾದ ಶಕ್ತಿ ಯೋಜನೆ ಅಡಿ ರಾಜ್ಯಾದ್ಯಂತ 500 ಕೋಟಿ ಮಹಿಳಾ ಪ್ರಯಾಣಿಕರು ಪ್ರಯಾಣಿಸಿರುವ ಸಂಭ್ರಮದ ಹಿನ್ನೆಲೆ ಮಹಿಳೆಯರಿಗೆ ಸಿಹಿ ಹಂಚಿ, ಬಸ್‌ನಲ್ಲಿ ಸಂಚರಿಸಿ ಮಹಿಳೆಯರ ಕುಂದುಕೊರತೆ ಆಲಿಸಿ ಅವರು ಮಾತನಾಡಿದರು.

ನಮ್ಮ ಸರ್ಕಾರ ನುಡಿದಂತೆ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಮೂಲಕ ಸರ್ವರಿಗೂ ಸಮಪಾಲು, ಸಮಬಾಳು ಸಿದ್ಧಾಂತ ಎಲ್ಲ ವರ್ಗದ ಮಹಿಳೆಯರಿಗೂ ತಲುಪುತ್ತಿದೆ. ನಮ್ಮ ಕ್ಷೇತ್ರದಲ್ಲಿ 1.30 ಕೋಟಿ ಜನ ಕೆಎಸ್ಆರ್ಟಿಸಿ ಬಸ್‌ಗಳಲ್ಲಿ ಸಂಚರಿಸಿ, ಯೋಜನೆ ಫಲಾನುಭವಿಗಳಾಗಿದ್ದಾರೆ ಎಂದರು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಷಂಷೀರ್ ಅಹಮದ್, ಅರಸೀಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಮಾತನಾಡಿದರು.

ಈ ವೇಳೆ ಕೆಎಸ್ಆರ್ಟಿಸಿ ಡಿಪೋ ಮ್ಯಾನೇಜರ್ ಮರುಳಸಿದ್ದಪ್ಪ, ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಪಿ. ಸುರೇಶ ಗೌಡ, ಮೆದಗಿನಕೆರೆ ಲಕ್ಷ್ಮೀ ಬಸ್ ಮಾಲೀಕ ವೀರಣ್ಣಗೌಡ, ಕಾಂಗ್ರೆಸ್ ಮುಖಂಡರಾದ ಬಿ.ಮಹೇಶ್ವರಪ್ಪ, ಪ.ಪಂ. ಮಾಜಿ ಅಧ್ಯಕ್ಷ ಮಂಜುನಾಥ್, ಗೊಲ್ಲರಹಟ್ಟಿ ತಿಪ್ಪೇಸ್ವಾಮಿ ಗೌಡ, ರಮೇಶ್ ಸೇರಿದಂತೆ ನೂರಾರು ಮುಖಂಡರು ಉಪಸ್ಥಿತರಿದ್ದರು.

- - -

-14ಜೆ.ಎಲ್.ಆರ್.ಚಿತ್ರ1:

ಜಗಳೂರು ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯಿಂದ ಶಕ್ತಿ ಯೋಜನೆ ಫಲಾನುಭವಿ ಮಹಿಳೆಯರಿಗೆ ಶಾಸಕ ಬಿ.ದೇವೇಂದ್ರಪ್ಪ ಸಿಹಿ ಹಂಚಿ, ಮಾತನಾಡಿದರು.