3 ವರ್ಷದಲ್ಲಿ 1.33 ಲಕ್ಷ ಅಪ್ರಾಪ್ತರ ಗರ್ಭಿಣಿ: ಶಶಿಧರ ಕೋಸಂಬೆ

| Published : Dec 24 2024, 12:47 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ:ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಆಗಿರುವ 1,33,000 ಅಪ್ರಾಪ್ತ ಮಕ್ಕಳು ಬಾಲ ಗರ್ಭಿಣಿಯರ ಸಂಖ್ಯೆ ಗಮನಿಸಿದರೆ ಬಹಳ ಶೋಚನೀಯ. ದೇಶದ ಪ್ರತಿ ಮಗುವಿನ ರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆಗಾರಿಕೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ತಿಳಿಸಿದರು.

ಕನ್ನಡಪ್ರಭ ವಾರ್ತೆ ವಿಜಯಪುರ:

ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ ಆಗಿರುವ 1,33,000 ಅಪ್ರಾಪ್ತ ಮಕ್ಕಳು ಬಾಲ ಗರ್ಭಿಣಿಯರ ಸಂಖ್ಯೆ ಗಮನಿಸಿದರೆ ಬಹಳ ಶೋಚನೀಯ. ದೇಶದ ಪ್ರತಿ ಮಗುವಿನ ರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆಗಾರಿಕೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ತಿಳಿಸಿದರು.

ಇಂಡಿ ತಾಲೂಕಿನ ಅಥರ್ಗಾದ ಆರ್‌.ಎಂ.ಬಿರಾದಾರ ಪಿಯು ಕಾಲೇಜಿನಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿ ಹಲವು ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ಹಕ್ಕುಗಳ ಕಾನೂನುಗಳ ಕುರಿತು ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಕ್ಕಳ ಕಲ್ಯಾಣ ಸಮಿತಿ ಮಾಜಿ ಸದಸ್ಯ ಸೂರ್ಯಕಾಂತ ಬಿರಾದಾರ ವಿಶೇಷ ಉಪನ್ಯಾಸ ನೀಡಿದರು. ಮೌನೇಶ ಪತ್ತಾರ ನಿರೂಪಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರೂಪಣಾಧಿಕಾರಿ ಸಾವಿತ್ರಿ ಗುಗ್ಗರಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಬಸಮ್ಮ ಹತ್ತರಕಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದೀಪಾಕ್ಷಿ ಜಾನಕಿ, ಗ್ರಾಪಂ ಅಧ್ಯಕ್ಷ ನಾಗುಗೌಡ ಪಾಟೀಲ, ಪ್ರಾಚಾರ್ಯ ಎಸ್.ಕೆ.ನಾಯಕ, ಹೆಚ್.ಎಸ್.ಪಾಟೀಲ ಸೇರಿದಂತೆ ಇತರರು ಉಪಸ್ಥಿತರಿದ್ದರು.