ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸದಾ ಬದ್ದ

| Published : Jan 25 2025, 01:03 AM IST

ಸಾರಾಂಶ

ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಕ್ಷೇತ್ರದ ಜನರ ನೀರಿಕ್ಷೆಗೆ ತಕ್ಕಂತೆ ಕೆಲಸ ಮಾಡುವುದೆ ನನ್ನ ಗುರಿಯಾಗಿದೆ

ಕನ್ನಡಪ್ರಭ ವಾರ್ತೆ ಮಲ್ಕುಂಡಿ

ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ನಾನು ಕಂಕಣ ಬದ್ದನಾಗಿ ಕೆಲಸ ಮಾಡುತ್ತೇನೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.

ನಂಜನಗೂಡು ತಾಲೂಕಿನ ಸಂಗಮ ಕ್ಷೇತ್ರದಲ್ಲಿ 1.50 ಕೋಟಿ ರು. ವೆಚ್ಚದ ತಡೆಗೋಡೆ ನಿರ್ಮಾಣ ಹಾಗೂ ಕಪ್ಪಸೋಗೆ ಗ್ರಾಮದಲ್ಲಿ 50 ಲಕ್ಷ ರು. ವೆಚ್ಚದ ಸೇತುವೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಕ್ಷೇತ್ರದ ಜನರ ನೀರಿಕ್ಷೆಗೆ ತಕ್ಕಂತೆ ಕೆಲಸ ಮಾಡುವುದೆ ನನ್ನ ಗುರಿಯಾಗಿದೆ, ಈಗಾಗಲೆ ಕ್ಷೇತ್ರಕ್ಕೆ 25 ಕೋಟಿ ರು. ಅನುದಾನ ತಂದು ಕ್ಷೇತ್ರದ ಪ್ರತಿ ಗ್ರಾಮಗಳಿಗೆ ಸಮರ್ಪಕವಾಗಿ ಅನುದಾನ ನೀಡಿ ಅಭಿವೃದ್ಧಿ ಪಡಿಸಲಾಗಿದೆ, ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ತಂದು ಕ್ಷೇತ್ರದ ಅಭಿವೃದ್ಧಿಗೆ ಹಂತ ಹಂತವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದರು.

ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಬ್ಲಾಕ್ ಅಧ್ಯಕ್ಷ ಕೆ.ಜಿ. ಮಹೇಶ್, ಶ್ರೀಕಂಠನಾಯಕ, ಮುಖಂಡರಾದ ಸಿ.ಎಂ. ನಾಗಣ್ಣ, ಹಾಡ್ಯ ಜಯರಾಂ, ಶಿವಣ್ಣ, ಕೆ. ಮಾದಪ್ಪ, ಚನ್ನಪ್ಪ, ಶಿವರಾಜಪ್ಪ, ಮಲ್ಲಿಕಾರ್ಜುನಪ್ಪ, ಸಂಗರಾಜು, ಕೆ. ಮಾರುತಿ, ಹಾಡ್ಯ ಗ್ರಾಪಂ ಅಧ್ಯಕ್ಷ ಹರೀಶ್ ಕುಮಾರ್ ಇದ್ದರು.