ಅದಾನಿ ಫೌಂಡೇಷನ್‌ನಿಂದ ಪಲಿಮಾರು ಗ್ರಾ.ಪಂ.ಗೆ ೧.೬೦ ಕೋಟಿ ರು. ಅನುದಾನ

| Published : Dec 08 2024, 01:15 AM IST

ಅದಾನಿ ಫೌಂಡೇಷನ್‌ನಿಂದ ಪಲಿಮಾರು ಗ್ರಾ.ಪಂ.ಗೆ ೧.೬೦ ಕೋಟಿ ರು. ಅನುದಾನ
Share this Article
  • FB
  • TW
  • Linkdin
  • Email

ಸಾರಾಂಶ

ಅದಾನಿ ಸಮೂಹದ ಉಡುಪಿ ಟಿಪಿಪಿ ಸಂಸ್ಥೆಯು ತನ್ನ ಸಿಎಸ್‌ಆರ್ ಯೋಜನೆಯಡಿ ಪಲಿಮಾರು ಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆಯ ಕಾಂಕ್ರಿಟೀಕರಣಕ್ಕೆ ಶನಿವಾರ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ, ಅಧ್ಯಕ್ಷ ಕಿಶೋರ್ ಆಳ್ವ ಮತ್ತು ಪಂಚಾಯಿತಿ ಅಧ್ಯಕ್ಷೆ ಸೌಮ್ಯಲತಾ ಶೆಟ್ಟಿ ಭೂಮಿ ಪೂಜೆ ನೆರವೇರಿಸಿದರು.

ಕನ್ನಡಪ್ರಭ ವಾರ್ತೆ ಕಾಪು

ಇಲ್ಲಿನ ಅದಾನಿ ಸಮೂಹದ ಉಡುಪಿ ಟಿಪಿಪಿ ಸಂಸ್ಥೆಯು ತನ್ನ ಸಿಎಸ್‌ಆರ್ ಯೋಜನೆಯಡಿ ಪಲಿಮಾರು ಪಂಚಾಯಿತಿ ವ್ಯಾಪ್ತಿಯಲ್ಲಿ ರಸ್ತೆಯ ಕಾಂಕ್ರಿಟೀಕರಣಕ್ಕೆ ಶನಿವಾರ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ, ಅಧ್ಯಕ್ಷ ಕಿಶೋರ್ ಆಳ್ವ ಮತ್ತು ಪಂಚಾಯಿತಿ ಅಧ್ಯಕ್ಷೆ ಸೌಮ್ಯಲತಾ ಶೆಟ್ಟಿ ಭೂಮಿ ಪೂಜೆ ನೆರವೇರಿಸಿದರು.

ಈ ಸಂದರ್ಭ ಮಾತನಾಡಿದ ಕಿಶೋರ್‌ ಆಳ್ವ, ಪಲಿಮಾರು ಪಂಚಾಯಿತಿ ವ್ಯಾಪ್ತಿಯಲ್ಲಿ ೧.೬೦ ಕೋಟಿ ರು.ಗಳಷ್ಟು ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಅದಾನಿ ಸಂಸ್ಥೆ ನಿರ್ವಹಿಸಿದೆ ಎಂದು ಹೇಳಿದರು.ಪಂಚಾಯಿತಿ ಅಧ್ಯಕ್ಷೆ ಸೌಮ್ಯಲತಾ ಮಾತನಾಡಿದರು.ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಶಿಧರ್, ಸದಸ್ಯರಾದ ಸತೀಶ್ ದೇವಾಡಿಗ, ಯೋಗಾನಂದ ಕುಕ್ಕಿಯಾನ್, ಜಯಂತಿ ಎಸ್. ಕೋಟ್ಯಾನ್, ಗಾಯತ್ರಿ ಪ್ರಭು, ಸುಜಾತ, ಜಯಶ್ರೀ, ಶಿವರಾಮ ಪೂಜಾರಿ, ಗಿರಿಯಪ್ಪ ಪೂಜಾರಿ, ಮಾಜಿ ಅಧ್ಯಕ್ಷರಾದ ಜಿತೇಂದ್ರ ಫುಟ್ರಾಡೊ, ಮಧುಕರ ಸುವರ್ಣ ಮತ್ತು ಅದಾನಿ ಸಂಸ್ಥೆಯ ಎಜಿಎಂ ರವಿ ಆರ್. ಜೇರೆ, ಅದಾನಿ ಫೌಂಡೇಷನ್‌ನ ಅನುದೀಪ್ ಭೂಮಿಪೂಜೆ ಸಂದರ್ಭದಲ್ಲಿ ಉಪಸ್ಥಿತರಿದ್ದರು.