ಕೃಷ್ಣಾ ನದಿಗೆ 1.60 ಲಕ್ಷ ಕ್ಯುಸೆಕ್‌ ನೀರು ಬಿಡುಗಡೆ

| Published : Jul 25 2024, 01:16 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ಕಾಗವಾಡ: ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಮಳೆಯಿಂದ ಕೃಷ್ಣಾ ನದಿಗೆ ರಾಜಾಪೂರ ಬ್ಯಾರೇಜ್‌ನಿಂದ 1.60 ಲಕ್ಷ ಕ್ಯುಸೆಕ್‌ ನೀರು ಹರಿದು ಬರುತ್ತಿದೆ. ಅಷ್ಟೇ ಪ್ರಮಾಣದ ನೀರನ್ನು ಆಲಮಟ್ಟಿಯಿಂದ ಹೊರ ಬಿಡಲಾಗುತ್ತಿದ್ದು, ನದಿ ತೀರದ ಗ್ರಾಮಸ್ಥರು ಎಚ್ಚರ ವಹಿಸುವಂತೆ ತಹಸೀಲ್ದಾರ್‌ ರಾಜೇಶ ಬುರ್ಲಿ ಸೂಚನೆ ನೀಡಿದ್ದಾರೆ.

ನದಿ ತೀರದ ಗ್ರಾಮಗಳಿಗೆ ತಹಶೀಲ್ದಾರ ರಾಜೇಶ ಬುರ್ಲಿ ಭೇಟ್ಟಿ..! ಸೂಕ್ತ ಮುಂಜಾಗ್ರತೆ ಕ್ರಮಕ್ಕೆ ಸೂಚನೆ..ಕನ್ನಡಪ್ರಭ ವಾರ್ತೆ ಕಾಗವಾಡ: ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಮಳೆಯಿಂದ ಕೃಷ್ಣಾ ನದಿಗೆ ರಾಜಾಪೂರ ಬ್ಯಾರೇಜ್‌ನಿಂದ 1.60 ಲಕ್ಷ ಕ್ಯುಸೆಕ್‌ ನೀರು ಹರಿದು ಬರುತ್ತಿದೆ. ಅಷ್ಟೇ ಪ್ರಮಾಣದ ನೀರನ್ನು ಆಲಮಟ್ಟಿಯಿಂದ ಹೊರ ಬಿಡಲಾಗುತ್ತಿದ್ದು, ನದಿ ತೀರದ ಗ್ರಾಮಸ್ಥರು ಎಚ್ಚರ ವಹಿಸುವಂತೆ ತಹಸೀಲ್ದಾರ್‌ ರಾಜೇಶ ಬುರ್ಲಿ ಸೂಚನೆ ನೀಡಿದ್ದಾರೆ.ತಾಲೂಕಿನ ಮೊಳವಾಡ-ಕುಸನಾಳ ಗ್ರಾಮಗಳ ನದಿ ತೀರಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಅವರು, ನದಿ ದಡದಲ್ಲಿ ಬಟ್ಟೆ ತೊಳೆಯುವುದು, ಜಾನುವಾರುಗಳ ಮೈ ತೊಳೆಯುವುದು ಮಾಡಬಾರದು. ನದಿ ನೀರು ಹೆಚ್ಚಾದರೇ ಗ್ರಾಮಸ್ಥರು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳಬೇಕು. ಸ್ಥಳಾಂತರಕ್ಕಾಗಿ ಇರುವ ರಸ್ತೆಯನ್ನು ರೀಪೇರಿ ಮಾಡಲು, ಅಲ್ಲಿಯೇ ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿ ಮುಖಾಂತರ ಮಾತನಾಡಿದರು. ಜನರಿಗೆ ಯಾವುದೇ ತೊಂದರೆಯಾಗದಂತೆ ಅಗತ್ಯ ಕ್ರಮ ಕೈಗಳ್ಳಲು ನೊಡಲ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮುಂಜಾಗೃತೆ ಕ್ರಮವಾಗಿ ನದಿ ತೀರದ ಗ್ರಾಮಗಳ ಜಾನುವಾರಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಸ್ಥಳಾಂತರಿಸಲು ಮತ್ತು ಅವುಗಳಿಗೆ ಮೇವಿನ ವ್ಯವಸ್ಥೆ ಮಾಡಲು ಸೂಚಿಸಿದರು.

ಈ ಸಮಯದಲ್ಲಿ ತಾಪಂ ಇಒ ವೀರಣ್ಣ ವಾಲಿ, ಸಿಡಿಪಿಒ ಸಂಜೀವಕುಮಾರ ಸದಲಗಿ, ಪಿಡಿಒ ಯಶವಂತ ವಂಟಗೂಡೆ, ಗ್ರಾಮ ಲೆಕ್ಕಾಧಿಕಾರಿ ಪ್ರಕಾಶ ಕಾಂಬಳೆ, ಅಧಿಕಾರಿಗಳಾದ ಅಮರ ಮೇತ್ರಿ ಸೇರಿದಂತೆ ಗ್ರಾಮದ ಮುಖಂಡರು, ಗ್ರಾಮಸ್ಥರು, ಅಧಿಕಾರಿಗಳು ಉಪಸ್ಥಿತರಿದ್ದರು. ----------------------------------------------------