ಸಾರಾಂಶ
ಈ ಬಾರಿ 20 ದಿನಗಳ ಅವಧಿಯಲ್ಲಿ 1,70,16,820 ನಗದು ಹಣ, 30 ಗ್ರಾಂ ಚಿನ್ನ ಹಾಗೂ 1 .100 ಕೆಜಿ ಬೆಳ್ಳಿಯ ವಸ್ತುಗಳನ್ನು ಹುಂಡಿಗೆ ಕಾಣಿಕೆ ಸಲ್ಲಿಸಿದ್ದಾರೆ.ಅಲ್ಲದೆ ಚಲಾವಣೆಯಲ್ಲಿ ಇಲ್ಲದ 2000 ಮುಖಬೆಲೆಯ 3ನೋಟುಗಳು ಕಂಡುಬಂದಿವೆ.
ಹನೂರು:
ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 20 ದಿನಗಳ ಅವಧಿಯಲ್ಲಿ 1 ಕೋಟಿ 70 ಲಕ್ಷ ರು. ಸಂಗ್ರಹವಾಗಿದೆ.ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು ಹಾಗೂವ ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ರವರ ಸಮ್ಮುಖದಲ್ಲಿ ಗುರುವಾರ ಹುಂಡಿಗಳನ್ನು ತೆರೆಯಲಾಯಿತು. ಬಳಿಕ ಸಿಸಿ ಕ್ಯಾಮರಾ ಕಣ್ಣಾವಲಿನಲ್ಲಿ ಎಣಿಕೆ ಕಾರ್ಯ ಪ್ರಾರಂಭಗೊಂಡು ಸಂಜೆ 4 ಗಂಟೆಗೆ ಮುಕ್ತಾಯವಾಯಿತು.
ಸರ್ಕಾರಿ ರಜಾ ದಿನ, ಅಮಾವಾಸ್ಯೆ ಜಾತ್ರಾ ಮಹೋತ್ಸವ ಸೇರಿದಂತೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯ ಉಚಿತ ಪ್ರಯಾಣದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ. ಈ ಬಾರಿ 20 ದಿನಗಳ ಅವಧಿಯಲ್ಲಿ 1,70,16,820 ನಗದು ಹಣ, 30 ಗ್ರಾಂ ಚಿನ್ನ ಹಾಗೂ 1 .100 ಕೆಜಿ ಬೆಳ್ಳಿಯ ವಸ್ತುಗಳನ್ನು ಹುಂಡಿಗೆ ಕಾಣಿಕೆ ಸಲ್ಲಿಸಿದ್ದಾರೆ.ಅಲ್ಲದೆ ಚಲಾವಣೆಯಲ್ಲಿ ಇಲ್ಲದ 2000 ಮುಖಬೆಲೆಯ 3ನೋಟುಗಳು ಕಂಡುಬಂದಿವೆ.ಈ ಎಣಿಕೆ ಕಾರ್ಯದಲ್ಲಿ ಪ್ರಾಧಿಕಾರದ ನಾಮ ನಿರ್ದೇಶಿತ ಸದಸ್ಯರಾದ ಶ್ರೀ ಮರಿಸ್ವಾಮಿ, ಕಾಗಲವಾಡಿ, ಶ್ರೀಮತಿ ಭಾಗ್ಯಮ್ಮ, ಕುಪ್ಯಾ, ಪ್ರಾಧಿಕಾರದ ಹಣಕಾಸು ಮತ್ತು ಲೆಕ್ಕ ಪತ್ರ ಸಲಹೆಗಾರರಾದ ಮಹದೇವು.ಸಿ, ಉಪ ಕಾರ್ಯದರ್ಶಿ ಚಂದ್ರಶೇಖರ ಜಿ.ಎಲ್., ಲೆಕ್ಕಧೀಕ್ಷಕರಾದ ಗುರುಮಲ್ಲಯ್ಯ ಸರಗೂರು ಮಹಾದೇವಸ್ವಾಮಿ ಹಾಗೂ ಚಾಮರಾಜನಗರ ಜಿಲ್ಲಾಡಳಿತ ಕಚೇರಿಯ, ಸಂಗೀತ, ಹಾಗೂ ಪ್ರಾಧಿಕಾರದ ಸಿಬ್ಬಂದಿ, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ಕೊಳ್ಳೇಗಾಲದ ಬ್ಯಾಂಕ್ ಆಪ್ ಬರೋಡ ಮುಖ್ಯ ವ್ಯವಸ್ಥಾಪಕರು, ಸಿಬ್ಬಂದಿ ಹಾಜರಿದ್ದರು.--------------19ಸಿಎಚ್‌ಎನ್55
ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಎಇ ರಘು ಹಾಗೂವ ಸಾಲೂರು ಬೃಹನ್ ಮಠದ ಅಧ್ಯಕ್ಷರಾದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ರವರ ಸಮ್ಮುಖದಲ್ಲಿ ಗುರುವಾರ ಹುಂಡಿಗಳನ್ನು ತೆರೆಯಲಾಯಿತು.-----------