ಮಹದೇಶ್ವರ ಬೆಟ್ಟದ ಹುಂಡಿಯಲ್ಲಿ 30 ದಿನಕ್ಕೆ ₹1.76 ಕೋಟಿ ಸಂಗ್ರಹ

| Published : Aug 31 2024, 01:35 AM IST

ಮಹದೇಶ್ವರ ಬೆಟ್ಟದ ಹುಂಡಿಯಲ್ಲಿ 30 ದಿನಕ್ಕೆ ₹1.76 ಕೋಟಿ ಸಂಗ್ರಹ
Share this Article
  • FB
  • TW
  • Linkdin
  • Email

ಸಾರಾಂಶ

ಮಾದೇಶ್ವರ ಬೆಟ್ಟದಲ್ಲಿ 30 ದಿನಗಳ ಅಂತರದಲ್ಲಿ ₹1.76 ಕೋಟಿ ಕಾಣಿಕೆ ರೂಪದಲ್ಲಿ ಸಂಗ್ರಹವಾಗಿದೆ.

ಕನ್ನಡಪ್ರಭ ವಾರ್ತೆ ಹನೂರು

ಮಾದೇಶ್ವರ ಬೆಟ್ಟದಲ್ಲಿ 30 ದಿನಗಳ ಅಂತರದಲ್ಲಿ ₹1.76 ಕೋಟಿ ಕಾಣಿಕೆ ರೂಪದಲ್ಲಿ ಸಂಗ್ರಹವಾಗಿದೆ.

ಕರ್ನಾಟಕ ತಮಿಳುನಾಡು ಗಡಿ ಭಾಗದಲ್ಲಿರುವ ಹನೂರು ತಾಲೂಕಿನ ಮಹದೇಶ್ವರ ಬೆಟ್ಟದ ಮಲೆ ಮಹದೇಶ್ವರಸ್ವಾಮಿ ದೇವಾಲಯದಲ್ಲಿ ಶ್ರೀ ಸಾಲೂರು ಬೃಹನ್ಮಠಾಧ್ಯಕ್ಷ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಗಳ ಸಾನ್ನಿಧ್ಯದಲ್ಲಿ ಮಾದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರಘು ನೇತೃತ್ವದಲ್ಲಿ ಹುಂಡಿ ಕಾರ್ಯ ನಡೆಯಿತು.

ಹುಂಡಿಯಿಂದ ಒಂದು ಕೋಟಿ ಎಪ್ಪತ್ತಾರು ಲಕ್ಷ ಇಪ್ಪತ್ತೊಂಬತ್ತು ಸಾವಿರದ ಎಂಟನೂರು ನಲವತ್ತೊಂಬತ್ತು ರು. ಸಂಗ್ರಹವಾಗಿದೆ. ಇದರ ಜೊತೆಗೆ 45 ಗ್ರಾಂ ಚಿನ್ನ, ಒಂದು ಕೆ.ಜಿ ಮುನ್ನೂರು ಗ್ರಾಂ ಬೆಳ್ಳಿ ಆಭರಣಗಳು ಸಂಗ್ರಹವಾಗಿದೆ. ಅಲ್ಲದೆ ಅಮೇರಿಕಾದ 20 ಡಾಲರ್, ಶ್ರೀಲಂಕಾ 20 ರು, ಅರಬ್ ದೇಶದ ಮೂರು ನೋಟುಗಳು, ಥೈಲ್ಯಾಂಡ್‌ನ ಒಂದು ನೋಟ್‌ನ್ನು ಭಕ್ತರು ಹಾಕಿರುವುದು ಹುಂಡಿಯಲ್ಲಿ ಸಿಕ್ಕಿದೆ ಎಂದು ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ. ಹುಂಡಿ ಎಣಿಕ ಕಾರ್ಯದಲ್ಲಿ ಪ್ರಾಧಿಕಾರದ ಉಪ ಕಾರ್ಯದರ್ಶಿ ಚಂದ್ರಶೇಖರ. ಜಿ.ಎಲ್, ಹಣಕಾಸು ಮತ್ತು ಲೆಕ್ಕಪತ್ರ ಸಲಹೆಗಾರ ನಾಗೇಶ್ ಹಾಗೂ ಚಾಮರಾಜನಗರ ಜಿಲ್ಲಾಡಳಿತ ಕಚೇರಿಯ ಭಾರತಿ.ಡಿ, ಬೆರಳಚ್ಚುಗಾರರು ಹಾಗೂ ಪ್ರಾಧಿಕಾರದ ಸಿಬ್ಬಂದಿ, ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಗೂ ಬ್ಯಾಂಕ್ ಆಫ್ ಬರೋಡ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.