ಖಾದಿಯಿಂದ 1.94 ಕೋಟಿ ಉದ್ಯೋಗಾವಕಾಶ ಸೃಜನೆ: ಸಚಿವ ಶರಣಬಸಪ್ಪ ದರ್ಶನಾಪುರ

| Published : Jul 17 2025, 12:42 AM IST

ಖಾದಿಯಿಂದ 1.94 ಕೋಟಿ ಉದ್ಯೋಗಾವಕಾಶ ಸೃಜನೆ: ಸಚಿವ ಶರಣಬಸಪ್ಪ ದರ್ಶನಾಪುರ
Share this Article
  • FB
  • TW
  • Linkdin
  • Email

ಸಾರಾಂಶ

ರಾಷ್ಟ್ರಪಿತ ಮಹಾತ್ಮಗಾಂಧಿ ಅವರು ಸ್ವದೇಶಿ ಚಳುವಳಿಯ ಪ್ರತೀಕವಾಗಿ ಖಾದಿ ಪ್ರತಿನಿಧಿಸಿದೆ. ಖಾದಿ ಕೇವಲ ಬಟ್ಟೆ ಮಾತ್ರವಲ್ಲ ಅದು ಸ್ವಾವಲಂಬನೆಯ ಮತ್ತು ಪರಿಸರಸ್ನೇಹಿ ಜೀವನ ಶೈಲಿ ಪ್ರತೀಕವೂ ಆಗಿದೆ.

ಕನ್ನಡಪ್ರಭ ವಾರ್ತೆ ಕೋಲಾರರಾಜ್ಯದಲ್ಲಿ ಖಾದಿ ಉತ್ಪಾದನೆಗೆ ಒಂದು ಪ್ರಮುಖ ಇತಿಹಾಸವಿದೆ. ಖಾದಿ ಮತ್ತು ಗ್ರಾಮೋದ್ಯೋಗ ಕ್ಷೇತ್ರದಲ್ಲಿ ರಾಷ್ಟ್ರ ಮಟ್ಟದಲ್ಲಿ 1.7 ಲಕ್ಷ ಕೋಟಿಗೂ ಅಧಿಕ ವಹಿವಾಟು ನಡೆದಿರುವುದರ ಜೊತೆಗೆ ಸುಮಾರು 1.94 ಕೋಟಿ ಉದ್ಯೋಗಾವಕಾಶಗಳನ್ನು ಸೃಷ್ಟಿಸಿರುವುದು ಹೆಮ್ಮೆಯ ಸಂಗತಿ ಎಂದು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆ ಸಚಿವ ಶರಣಬಸಪ್ಪ ದರ್ಶನಾಪುರ ತಿಳಿಸಿದರು.ನಗರದ ಶತಶೃಂಗ ಪೊಲೀಸ್ ಭವನದಲ್ಲಿ ರಾಜ್ಯ ಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತುಪ್ರದರ್ಶನ ಹಾಗೂ ಮಾರಾಟ ಮೇಳ ಉದ್ಘಾಟಿಸಿ ಮಾತನಾಡಿ, ರಾಜ್ಯದಲ್ಲಿ 650 ಕೋಟಿಗೂ ಅಧಿಕ ವಹಿವಾಟಿನೊಂದಿಗೆ 21 ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶಗಳನ್ನು ಸೃಜಿಸಲಾಗಿದೆ ಎಂದರು.ರಾಷ್ಟ್ರಪಿತ ಮಹಾತ್ಮಗಾಂಧಿ ಅವರು ಸ್ವದೇಶಿ ಚಳುವಳಿಯ ಪ್ರತೀಕವಾಗಿ ಖಾದಿ ಪ್ರತಿನಿಧಿಸಿದೆ. ಖಾದಿ ಕೇವಲ ಬಟ್ಟೆ ಮಾತ್ರವಲ್ಲ ಅದು ಸ್ವಾವಲಂಬನೆಯ ಮತ್ತು ಪರಿಸರಸ್ನೇಹಿ ಜೀವನ ಶೈಲಿ ಪ್ರತೀಕವೂ ಆಗಿದೆ. ಖಾದಿ ಮಂಡಳಿಯ ಕಳೆದ 65 ವರ್ಷಕ್ಕೂ ಮೇಲ್ಪಟ್ಟು ಖಾದಿ ಕ್ಷೇತ್ರವಾದ ಹತ್ತಿ, ರೇಷ್ಮೆ ಹಾಗೂ ಉಣ್ಣೆಯನ್ನು ನೂಲಿನಿಂದ ಕೈ ಚರಕದ ಮೂಲಕ ನೂಲು ತೆಗೆದು ಸ್ಥಳೀಯ ಕಸುಬುದಾರರಿಂದಲೇ ಹತ್ತಿಯ ನೂಲು ಬಟ್ಟೆ, ರೇಷ್ಮೆ ಬಟ್ಟೆ ಹಾಗೂ ಉಣ್ಣೆ ವಸ್ತ್ರಗಳನ್ನು ತಯಾರಿಸಲು ಉತ್ತೇಜಿಸುತ್ತಿದ್ದು, ಪ್ರಸ್ತುತ ರಾಜ್ಯದಲ್ಲಿ 175 ಸಂಘ ಸಂಸ್ಥೆಗಳು ಖಾದಿ ಉತ್ಪಾದನೆಯಲ್ಲಿ ತೊಡಗಿಕೊಂಡಿರುವುದು ಹೆಮ್ಮೆಯ ವಿಷಯ ಎಂದರು.ಕೋಲಾರದ ಈ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳದ ಭಾಗವಾಗಿ ಮುಂದಿನ 3 ತಿಂಗಳೊಳಗಾಗಿ ವಿವಿಧ 6 ಜಿಲ್ಲೆಗಳಲ್ಲಿ ಖಾದಿ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಲಾಗುವುದು. ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಅಧ್ಯಕ್ಷರು ಮತ್ತು ಕಾರ್ಯನಿರ್ವಾಹಕ ಅಧಿಕಾರಿಗಳು ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಖಾದಿ ಬಟ್ಟೆಯ ಗುಣಮಟ್ಟ ಕಾಪಾಡುವುದರೊಂದಿಗೆ ಪರಿಣಾಮಕಾರಿ ಮಾರುಕಟ್ಟೆ ವ್ಯವಸ್ಥೆ ಒದಗಿಸಬೇಕು. ಮಾರುಕಟ್ಟೆಯಲ್ಲಿ ಖಾದಿ ಬಟ್ಟೆಗಳಿಗೆ ಹೆಚ್ಚು ಬೇಡಿಕೆ ಬರುವ ರೀತಿಯಲ್ಲಿ ಸರ್ಕಾರ ಉತ್ತೇಜನ ನೀಡಲಾಗುತ್ತಿದೆ ಎಂದು ತಿಳಿಸಿದರು.ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಬಸನಗೌಡ ತಿರುವಿಹಾಳ ಮಾತನಾಡಿ, ನಮ್ಮ ಮಂಡಳಿ ಸ್ಥಾಪನೆಯಾಗಿ ಸುಮಾರು 70ಕ್ಕೂ ಹೆಚ್ಚು ವರ್ಷಗಳಾಗಿದ್ದು, ಖಾದಿ ಮತ್ತು ಗ್ರಾಮೋದ್ಯೋಗ ಚಟುವಟಿಕೆಗಳನ್ನು ಉತ್ತೇಜಿಸಿ ಪ್ರೋತ್ಸಾಹಿಸುವುದು ಮಂಡಳಿಯ ಧ್ಯೇಯವಾಗಿದೆ. ಕರ್ನಾಟಕದಲ್ಲಿ 170ಕ್ಕೂ ಹೆಚ್ಚು ಖಾದಿ ಉತ್ಪಾದನಾ ಸಂಸ್ಥೆಗಳಿದ್ದು ಸುಮಾರು 14 ಸಾವಿರಕ್ಕೂ ಹೆಚ್ಚು ಕಸುಬುದಾರರುಗಳಿಗೆ ಉದ್ಯೋಗ ಪ್ರಾಪ್ತಿಯಾಗಿರುತ್ತದೆ ಎಂದು ತಿಳಿಸಿದರು.ಈ ವರ್ಷವು ಸಹ ರಾಷ್ಟ್ರಮಟ್ಟದ ಖಾದಿ ಮತ್ತು ಗ್ರಾಮೋದ್ಯೋಗ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳವನ್ನು ಹಾಗೂ ರಾಜ್ಯ ಮಟ್ಟದಲ್ಲಿ 7 ವಿವಿಧ ನಗರಗಳಲ್ಲಿ ಖಾದಿ ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಆಯೋಜಿಸಿದ್ದು ಕೋಲಾರ ನಗರದಲ್ಲಿ ಪ್ರಥಮವಾಗಿ ಉದ್ಘಾಟಿಸಲಾಗುತ್ತಿದೆ ಎಂದರು.

ಶಾಸಕ ಕೊತ್ತೂರು ಜಿ.ಮಂಜುನಾಥ್ ಮಾತನಾಡಿ, ಖಾದಿ ಎಂದರೆ ನಮ್ಮ ಗಾಂಧಿಜೀ ಖಾದಿ ಬಟ್ಟೆ ಧರಿಸುತ್ತಿದ್ದರು ಎಂಬುದನ್ನು ನಾವು ಕೇಳಿದ್ದೇವೆ. ಇಂತಹ ಕಾರ್ಯಕ್ರಮಕ್ಕೆ ಸಚಿವರು ಮತ್ತು ಮಂಡಳಿಯ ಅಧ್ಯಕ್ಷರು ಬಂದು ಉದ್ಘಾಟನೆ ಮಾಡಿರುವುದು ನಮಗೆ ಹೆಮ್ಮೆಯ ವಿಷಯ ಎಂದರು.

ಎಂಎಲ್ಸಿ ಎಂ.ಎಲ್.ಅನಿಲ್ ಕುಮಾರ್, ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ವೈ.ಶಿವಕುಮಾರ್, ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ ರಾಜ್ಯ ನಿರ್ದೇಶಕರಾದ ಬಸವರಾಜ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಡಿ.ಬಿ.ನಟೇಶ್, ಜಿಲ್ಲಾ ಕೈಗಾರಿಕಾ ಕೇಂದ್ರ ಜಂಟಿ ನಿರ್ದೇಶಕ ಪಿ.ನಾಗೇಶ್, ಅಭಿವೃದ್ಧಿ ಅಧಿಕಾರಿ ಸಿ.ನವೀನ್ ಕುಮಾರ್, ಕೆ.ಆರ್.ರಂಜಿತ್, ಕೆ.ಬಿ.ಮಲ್ಲಿಕಾರ್ಜುನಪ್ಪ, ಕೋಲಾರ ಜಿಲ್ಲಾ ಅಭಿವೃದ್ಧಿ ಅಧಿಕಾರಿ ಆರ್.ಶ್ರೀನಿವಾಸ್, ಕೆಡಿಪಿ ಅಧ್ಯಕ್ಷ ಸೊನ್ನೇಗೌಡ, ಎಸ್.ಸಿ.ಘಟಕ ಜಿಲ್ಲಾಧ್ಯಕ್ಷ ಜಯದೇವ್, ಮುನಿವೆಂಕಟಪ್ಪ ಇದ್ದರು.