8 ಕಾಲುಸಂಕಗಳ ನಿರ್ಮಾಣಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ರು. 1 ಕೋಟಿ ಅನುದಾನ ಬಿಡುಗಡೆಗೊಳಿಸಿದ್ದು ಕಾರ್ಕಳ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ಧನ್ಯವಾದ ಸಲ್ಲಿಸಿದ್ದಾರೆ.

ಕಾರ್ಕಳ: 8 ಕಾಲುಸಂಕಗಳ ನಿರ್ಮಾಣಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ರು. 1 ಕೋಟಿ ಅನುದಾನ ಬಿಡುಗಡೆಗೊಳಿಸಿದ್ದು ಕಾರ್ಕಳ ಕಾಂಗ್ರೆಸ್ ನಾಯಕ ಉದಯ ಶೆಟ್ಟಿ ಮುನಿಯಾಲು ಧನ್ಯವಾದ ಸಲ್ಲಿಸಿದ್ದಾರೆ.ಅನೇಕ ವರ್ಷಗಳಿಂದ ಕಾರ್ಕಳ ತಾಲೂಕಿನ ಗ್ರಾಮೀಣ ಭಾಗದ ಜನರು ಅನುಭವಿಸುತ್ತಿದ್ದ ಸಂಚಾರ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕುವಂತೆ, ಬಹುಕಾಲದ ಬೇಡಿಕೆಯಾಗಿದ್ದ 8 ಕಾಲುಸಂಕಗಳ ನಿರ್ಮಾಣಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ರು. 1 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಈ ಅನುದಾನದಿಂದ ಗ್ರಾಮೀಣ ಪ್ರದೇಶದ ಜನರ ದೈನಂದಿನ ಸಂಚಾರ ಸುಗಮವಾಗುವುದರ ಜೊತೆಗೆ ವಿದ್ಯಾರ್ಥಿಗಳು, ರೈತರು ಹಾಗೂ ಕಾರ್ಮಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ. ಈ ಮಹತ್ವದ ಅನುದಾನವನ್ನು ಮಂಜೂರು ಮಾಡಿಸುವಲ್ಲಿ ಸಹಕರಿಸಿದ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಬೇಡಿಕೆಗೆ ಸ್ಪಂದಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹಾಗೂ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಅವರಿಗೆ ಉದಯ ಶೆಟ್ಟಿ ಮುನಿಯಾಲು ಧನ್ಯವಾದ ಸಲ್ಲಿಸಿದ್ದಾರೆ.

ಈ ಯೋಜನೆಗಳಿಂದ ಕಾರ್ಕಳದ ಸಮಗ್ರ ಅಭಿವೃದ್ಧಿಗೆ ವೇಗ ದೊರೆಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.