ಸಾರಾಂಶ
ಕನ್ನಡಪ್ರಭ ವಾರ್ತೆ ಬಂಟ್ವಾಳ
ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2023- 24ನೇ ಸಾಲಿನಲ್ಲಿ 445.45 ಕೋಟಿ ರು. ವ್ಯವಹಾರ ನಡೆಸಿದ್ದು, 1.68 ಕೋಟಿ ರು. ಲಾಭಾಂಶ ಗಳಿಸಿದೆ. ಸಂಘದ ಸದಸ್ಯರಿಗೆ ಶೇ.12ರಷ್ಟು ಲಾಭಾಂಶ ನೀಡಲಾಗುವುದು ಎಂದು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪ್ರಭಾಕರ ಪ್ರಭು ಹೇಳಿದರು.ಅವರು ಸಿದ್ದಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕೇಂದ್ರ ಕಚೇರಿಯ ಬೆಳ್ಳಿಪ್ಪಾಡಿ ಕೃಷ್ಣ ರೈ ರೈತ ಸಭಾಂಗಣದಲ್ಲಿ ಶನಿವಾರ ನಡೆದ 2023- 24ನೇ ಸಾಲಿನ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಮಾತಾನಾಡಿದರು.
ಸಂಘದಲ್ಲಿ ಒಟ್ಟು 7106 ಸದಸ್ಯರನ್ನು ಹೊಂದಿದ್ದು, ವರದಿ ವರ್ಷದಲ್ಲಿ 1547 ಮಂದಿ ರೈತರಿಗೆ ಶೂನ್ಯ ಬಡ್ಡಿದರದಲ್ಲಿ 34.55 ಕೋಟಿ ಸಾಲವನ್ನು ಮಂಗಳಾ ಕಿಸಾನ್ ಕಾರ್ಡ್ ಮೂಲಕ ವಿತರಿಸಲಾಗಿದೆ. ಶೇ.3ರ ಬಡ್ಡಿದರದಲ್ಲಿ ಕೃಷಿ ಅಭಿವೃದ್ದಿಗಾಗಿ 243 ಮಂದಿ ರೈತರಿಗೆ 7 ಕೋಟಿ ಸಾಲ ನೀಡಲಾಗಿದೆ. ಹೈನುಗಾರಿಕೆಗೆ ಪ್ರೋತ್ಸಾಹ ನೀಡುವ ಸಲುವಾಗಿ ಹಸುಗಳ ನಿರ್ವಹಣೆಗಾಗಿ ಶೂನ್ಯ ಬಡ್ಡಿದರದಲ್ಲಿ 2.59 ಕೋಟಿ ನೀಡಲಾಗಿದೆ ಎಂದರು.ಸಂಘವು ನಿರಂತರವಾಗಿ ಪ್ರಗತಿ ಸಾಧಿಸಿದ್ದಕ್ಕಾಗಿ ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಮೆಚ್ಚುಗೆ ವ್ಯಕ್ತ ಪಡಿಸಿದೆ . ಸತತವಾಗಿ ಪ್ರಶಸ್ತಿ ಪುರಸ್ಕಾರಕ್ಕೆ ಪಾತ್ರವಾಗಿದೆ. ಲೆಕ್ಕ ಪರಿಶೋಧನೆಯಲ್ಲಿ ಸತತವಾಗಿ ‘ಎ’ ಗ್ರೇಡ್ ಬಂದಿದ್ದು,ಶೇ 98 ಸಾಲ ವಸೂಲಾತಿ ಪ್ರಗತಿ ಸಾಧಿಸಲಾಗಿದೆ ಎಂದರು. ನಿವೃತ್ತ ಯೋಧರಿಗೆ ಗೌರವರ್ಪಣೆ: ರಾಷ್ಟ್ರ ಸೇವೆಯಲ್ಲಿ ಕರ್ತವ್ಯ ಸಲ್ಲಿಸಿ ನಿವೃತ್ತಿಗೊಂಡು ಕೃಷಿಯಲ್ಲಿ ತೊಡಗಿಸಿಕೊಂಡ ರಾಜು ಪೂಜಾರಿ ಹಲಾಯಿ, ದಯಾನಂದ ಶೆಟ್ಟಿ, ಮೋಹನ್ ಜಿ. ಮೂಲ್ಯ ಅವರನ್ನು ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರಾದ ಸತೀಶ್ ಪೂಜಾರಿ, ನಿರ್ದೇಶಕರಾದ ಪದ್ಮರಾಜ್ ಬಲ್ಲಾಳ್ ಮಾವಂತೂರು, ಸಂದೇಶ್ ಶೆಟ್ಟಿ ಪೊಡುಂಬ, ರಾಜೇಶ್ ಶೆಟ್ಟಿ ಕೊನೆರಬೆಟ್ಟು, ದಿನೇಶ್ ಪೂಜಾರಿ ಹುಲಿಮೇರು, ವೀರಪ್ಪ ಪರವ, ಜಾರಪ್ಪ ನಾಯ್ಕ, ಉಮೇಶ್ ಗೌಡ, ದೇವರಾಜ್ ಸಾಲ್ಯಾನ್, ಅರುಣಾ ಶೆಟ್ಟಿ, ಮಂದರಾತಿ ಎಸ್. ಶೆಟ್ಟಿ, ವೃತ್ತಿಪರ ನಿರ್ದೇಶಕರಾದ ಮಾಧವ ಶೆಟ್ಟಿಗಾರ್ ಉಪಸ್ಥಿತರಿದ್ದರು.ಮಹಾಸಭೆಯಲ್ಲಿ ಸಂಘದ ಮಾಜಿ ಅಧ್ಯಕ್ಷ ಗೋಪಿನಾಥ ರೈ, ಸಿದ್ದಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ರತ್ನಕುಮಾರ್ ಚೌಟ, ಆರಂಬೋಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಪ್ರಭಾಕರ ಹುಲಿಮೇರು, ಕುಕ್ಕಿಪಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶೇಖರ್ ಶೆಟ್ಟಿ ಬದ್ಯಾರ್, ಪ್ರಮುಖರಾದ ರಶ್ಮಿತ್ ಶೆಟ್ಟಿ, ಸಂದೀಪ್ ಶೆಟ್ಟಿ ಪೊಡುಂಬ, ಲಕ್ಷ್ಮೀಧರ ಶೆಟ್ಟಿ, ನಾರಯಣ ನಾಯ್ಕ, ಜಯರಾಮ ಅಡಪ , ಕಿರಣ್ ಮಂಜಿಲ, ರಾಜೇಶ್ ಶೆಟ್ಟಿ ಸೀತಾಳ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು.
ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆರತಿ ಶೆಟ್ಟಿ ವಾರ್ಷಿಕ ವರದಿ ವಾಚಿಸಿದರು. ಸಂಘದ ನಿರ್ದೇಶಕ ಹರೀಶ್ ಆಚಾರ್ಯ ಸ್ವಾಗತಿಸಿದರು. ಸಿಬ್ಬಂದಿ ಸುಭಾಶ್ ಬಂಗೇರ ಕಾರ್ಯಕ್ರಮ ನಿರೂಪಿಸಿದರು.