ಮೌನೇಶ್ವರ ದೇವಸ್ಥಾನ ಅಭಿವೃದ್ಧಿಗೆ ₹ 1 ಲಕ್ಷ

| Published : Apr 23 2024, 12:52 AM IST

ಮೌನೇಶ್ವರ ದೇವಸ್ಥಾನ ಅಭಿವೃದ್ಧಿಗೆ ₹ 1 ಲಕ್ಷ
Share this Article
  • FB
  • TW
  • Linkdin
  • Email

ಸಾರಾಂಶ

ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ಧಾರ್ಮಿಕ ವಲಯ ಮಾತ್ರವಲ್ಲದೇ ಶಿಕ್ಷಣ, ಆರೋಗ್ಯ, ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಧಾರವಾಡ:

ತಾಲೂಕಿನ ನರೇಂದ್ರ ಗ್ರಾಮದಲ್ಲಿನ ಶ್ರೀಮೌನೇಶ್ವರ ದೇವಸ್ಥಾನದ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾದ ₹ 1 ಲಕ್ಷ ಮೊತ್ತದ ಚೆಕ್‌ನ್ನು ಮೌನೇಶ್ವರ ದೇವಸ್ಥಾನ ಕಮಿಟಿಯ ಪದಾಧಿಕಾರಿಗಳಿಗೆ ಹಸ್ತಾಂತರಿಸಲಾಯಿತು.

ಯೋಜನೆಯ ಜಿಲ್ಲಾ ನಿರ್ದೇಶಕ ಪ್ರದೀಪ ಶೆಟ್ಟಿ ಮಾತನಾಡಿ, ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರು ಧಾರ್ಮಿಕ ವಲಯ ಮಾತ್ರವಲ್ಲದೇ ಶಿಕ್ಷಣ, ಆರೋಗ್ಯ, ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಭಕ್ತರು ಕ್ಷೇತ್ರಕ್ಕೆ ಸಲ್ಲಿಸುವ ಕಾಣಿಕೆಯನ್ನು ಮರಳಿ ಸಮಾಜಕ್ಕೆ ಕೊಡುವ ಕಾರ್ಯ ಮಾಡುತ್ತಿದ್ದಾರೆ. ದೇವಸ್ಥಾನಗಳ ಅಭಿವೃದ್ಧಿಗೆ ಆರ್ಥಿಕ ನೆರವು, ಸ್ಮಶಾನ ಅಭಿವೃದ್ಧಿ, ನಿರ್ಗತಿಕರಿಗೆ ಮನೆ ನಿರ್ಮಾಣ ಮುಂತಾದ ಕಾರ್ಯಗಳನ್ನು ಯೋಜನೆಯ ಮೂಲಕ ಅನುಷ್ಠಾನಗೊಳಿಸುತ್ತಿದ್ದಾರೆ ಎಂದರು. ಜತೆಗೆ ಕೆರೆಗಳ ಪುನಶ್ಚೇತನ ಮತ್ತು ನಿರ್ಮಾಣಕ್ಕೆ ಆರ್ಥಿಕ ಸಹಾಯ ಮಾಡುವ ಮೂಲಕ ಜನ-ಜಾನುವಾರು, ಪಕ್ಷಿಗಳಿಗೆ ಜಲ ಅಭಾವ ಆಗದಂತೆ ನೋಡಿಕೊಳ್ಳುತ್ತಿದ್ದಾರೆ. ಈ ವರ್ಷ ಜಿಲ್ಲೆಯಲ್ಲಿಯೂ ಅನೇಕ ಕೆರೆಗಳ ಹೋಳೆತ್ತುವ ಮತ್ತು ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ ಎಂದರು.

ಸ್ಥಳೀಯ ಮಳೆಪ್ಪಜ್ಜನ ಮಠದ ಶ್ರೀ ಸಂಗಮೇಶ ಸ್ವಾಮೀಜಿಗಳ ಸಮ್ಮುಖದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷ ನಾಗೇಶ ಹಟ್ಟಿಹೊಳಿ, ಉಪಾಧ್ಯಕ್ಷೆ ಮಲ್ಲವ್ವ ತಳವಾರ, ಸದಸ್ಯ ಆತ್ಮಾನಂದ ಹುಂಬೇರಿ, ಉದ್ಯಮಿ ಸುನೀಲ ಇಂಗಳಗಿ, ಮುಖಂಡರಾದ ಮಂಜುನಾಥ ತಿರ್ಲಾಪೂರ, ಈಶ್ವರ ಗಾಣಿಗೇರ, ದುಂಡಪ್ಪ ಬಡಿಗೇರ, ಷಣ್ಮುಖ ಬಡಿಗೇರ, ಬಸವರಾಜ ಕಮ್ಮಾರ, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಪುಂಡಲೀಕ ಹಡಪದ, ಯೋಜನಾಧಿಕಾರಿ ಮಯೂರ ತೋರಸ್ಕರ್ ಇದ್ದರು.