ಸಾರಾಂಶ
ತಾಲೂಕಿನಲ್ಲಿ ರೈತರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಕೃಷಿಕ ಸಮಾಜದ ಆಡಳಿತ ಮಂಡಳಿಯವರು ಸರ್ಕಾರಕ್ಕೆ ರೈತರ ಕೃಷಿ ಚಟುವಟಿಕೆಗಳಿಗಾಗಿ ೧೦ ಎಕರೆ ಜಮೀನು ಬೇಕಾಗಿದೆ ಎಂದು ಮನವಿ ಸಲ್ಲಿಸಿದರೆ ಸರ್ಕಾರದ ಜತೆ ಚರ್ಚಿಸಿ ಜಮೀನು ಮಂಜೂರು ಮಾಡಿಸುವ ಭರವಸೆ.
ಕನ್ನಡಪ್ರಭ ವಾರ್ತೆ ಮಾಲೂರು
ರೈತನ ಮಗನಾಗಿರುವ ನನಗೆ ರೈತರ ಬಗ್ಗೆ ವಿಶೇಷ ಕಾಳಜಿ ಇದ್ದು, ತಾಲೂಕಿನಲ್ಲಿ ಕೃಷಿ ಚಟುವಟಿಕೆಗಳ ಬಗ್ಗೆ ರೈತರಿಗೆ ತರಬೇತಿ ನೀಡಲು ಬೇಕಾಗಿರುವ ಹತ್ತು ಎಕರೆ ಜಮೀನನ್ನು ಮಂಜೂರು ಮಾಡಿಸಲು ಸರ್ಕಾರದ ಜತೆ ಚರ್ಚಿಸುವುದಾಗಿ ಶಾಸಕ ಕೆ.ವೈ.ನಂಜೇಗೌಡ ಹೇಳಿದರು. ಅವರು ಇಲ್ಲಿನ ತಿರುಮಲ ಕಲ್ಯಾಣ ಮಂಟಪದಲ್ಲಿ ತಾಲೂಕು ಕೃಷಿಕ ಸಮಾಜ ೨೦೨೩-೨೪ ನೇ ಸಾಲಿನಲ್ಲಿ ಎಸೆಸೆಲ್ಸಿ ಹಾಗೂ ದ್ವೀತಿಯ ಪಿಯುಸಿಯಲ್ಲಿ ಶೇ.೯೦ ಕ್ಕೂ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಪ್ರಗತಿ ಪರ ರೈತರಿಗೆ ಸನ್ಮಾನ ಕರ‍್ಯಕ್ರಮದಲ್ಲಿ ಅವರು ಮಾತನಾಡಿದರು.ರಾಜೇನಹಳ್ಳಿ ಸಮೀಪ ೬೫ ಎಕರೆ
ತಾಲೂಕಿನಲ್ಲಿ ರೈತರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ಕೃಷಿಕ ಸಮಾಜದ ಆಡಳಿತ ಮಂಡಳಿಯವರು ಸರ್ಕಾರಕ್ಕೆ ರೈತರ ಕೃಷಿ ಚಟುವಟಿಕೆಗಳಿಗಾಗಿ ೧೦ ಎಕರೆ ಜಮೀನು ಬೇಕಾಗಿದೆ ಎಂದು ಮನವಿ ಸಲ್ಲಿಸಿದರೆ ಸರ್ಕಾರದ ಜತೆ ಚರ್ಚಿಸಿ ಜಮೀನು ಮಂಜೂರು ಮಾಡಿಸಲು ಪ್ರಯತ್ನಿಸಲಾಗುವುದು. ತಾಲೂಕಿನ ರಾಜೇನಹಳ್ಳಿ ಗ್ರಾಮದ ಸಮೀಪ ೬೫ ಎಕರೆ ಸರ್ಕಾರಿ ಜಮೀನಿದ್ದು, ಅದರಲ್ಲಿ ಹತ್ತು ಎಕರೆ ಯಲ್ಲಿ ಕೃಷಿ ತರಬೇತಿಗಾಗಿ ಅನುಮತಿ ಪಡೆಯಲು ಪ್ರಯತ್ನಿಸುತ್ತೇನೆ ಎಂದರು.ಪ್ರತಿಭಾವಂತ ಮಕ್ಕಳಿಗೆ ಸನ್ಮಾನ
ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಹನುಮಂತಪ್ಪ ಮಾತನಾಡಿದರು. ಕೃಷಿಕ ಸಮಾಜದ ರಾಜ್ಯಾಧ್ಯಕ್ಷ ಪಾಪಣ್ಣಸ್ವಾಮಿ ,ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಹನುಮಂತಪ್ಪ,ಜಿಲ್ಲಾಧ್ಯಕ್ಷ ಡಿ.ಎಲ್.ನಾಗರಾಜ್,ಸಿಪಿಐ ವಸಂತ್ ಕುಮಾರ್,ವಿಶ್ರಾಂತಿ ಪ್ರಾಂಶುಪಾಲ ರಾಮಕೃಷ್ಣಪ್ಪ,ವಿಶ್ರಾಂತ ಡಿ.ಡಿ.ಪಿ.ಐ.ರಾಮಚಂದ್ರಪ್ಪ,ಬಿಇಓ ಚಂದ್ರಕಲಾ ಮಾತನಾಡಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಕೆ.ರಮೇಶ್, ಜಿಲ್ಲಾ ಉಪಾಧ್ಯಕ್ಷ ರಾಜಣ್ಣ, ನಿರ್ದೇಶಕ ವಿಜಯ್,ಬಿ.ವಿ. ಪಾಪಣ್ಣ, ಕೃಷ್ಣಾ ರೆಡ್ಡಿ, ಪ್ರಭಾಕರ್, ನಾರಾಯಣಸ್ವಾಮಿ, ಸೀನಪ್ಪ, ಮಂಜಣ್ಣ, ಬಾಬು, ಪಿ.ನಾರಾಯಣಸ್ವಾಮಿ, ಎಲ್.ಕೆ.ಸುರೇಶ್, ಇನ್ನಿತರರು ಇದ್ದರು.