ಸಾರಾಂಶ
- ಶಿಲಾನ್ಯಾಸ ಕಾರ್ಯಕ್ರಮಕ್ಕೆ ವರ್ಚುವಲ್ ವಿಡಿಯೋ ಮೂಲಕ ಪ್ರಧಾನಿ ನರೇಂದ್ರ ಮೋದಿ ಚಾಲನೆ
- ಶಿವಮೊಗ್ಗ ವಿದ್ಯಾನಗರದಲ್ಲಿರುವ ದೂರದರ್ಶನ ಕೇಂದ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮ- ಉನ್ನತೀಕರಣಗೊಂಡ ಬಳಿಕ ಅಕ್ಕಪಕ್ಕದ 8 ಜಿಲ್ಲೆಗಳ ವ್ಯಾಪ್ತಿಯಲ್ಲಿ ಎಫ್.ಎಂ. ಕಾರ್ಯನಿರ್ವಹಿಸಲು ಸಹಕಾರಿ
- ಶಿವಮೊಗ್ಗದ ಯಾವುದೇ ಮೂಲೆಗೆ ಹೋದರೂ 150 ಕಿಲೋ ಮೀಟರ್‌ವರೆಗೆ ರೇಡಿಯೋ ಕೇಳಿಕೊಂಡು ಸಾಗಬಹುದು- ರಾಜಧಾನಿ ಬೆಂಗಳೂರು ಹೊರತುಪಡಿಸಿ ರಾಜ್ಯದಲ್ಲಿ ಶಿವಮೊಗ್ಗದಲ್ಲೇ ಅತ್ಯಧಿಕ ಸಾಮರ್ಥ್ಯದ ಟ್ರಾನ್ಸ್‌ಮೀಟರ್ ಅಳವಡಿಕೆ- - - ಕನ್ನಡಪ್ರಭ ವಾರ್ತೆ ಶಿವಮೊಗ್ಗ ನಗರದ ಜನತೆಯ ಬಹುದಿನದ ಬೇಡಿಕೆ ಆಗಿದ್ದ ಎಫ್.ಎಂ ಕೇಂದ್ರ 10 ವ್ಯಾಟ್ ನ ಎಫ್.ಎಂ ಕೇಂದ್ರವಾಗಿ ವಿಸ್ತರಣೆ ಹೊಂದಿದೆ. 1 ಕಿಲೋ ವ್ಯಾಟ್ ಇದ್ದ ಶಿವಮೊಗ್ಗ ಭದ್ರಾವತಿ ಕೇಂದ್ರಕ್ಕೆ 10 ಕಿಲೋ ವ್ಯಾಟ್ ಸಿಕ್ಕಿರುವುದು ಮಲೆನಾಡಿಗೆ ಸಿಕ್ಕ ಗೌರವ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ನಗರದ ವಿದ್ಯಾನಗರದಲ್ಲಿರುವ ದೂರದರ್ಶನ ಕೇಂದ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಂಸದರು ಮಾತನಾಡಿ, ಪ್ರಸಾರ ಭಾರತಿ ವತಿಯಿಂದ ಭದ್ರಾವತಿ ಆಕಾಶವಾಣಿಯಲ್ಲಿ 10 ಕಿಲೋ ವ್ಯಾಟ್ ಎಫ್.ಎಂ ಪ್ರಸರಣ ಕೇಂದ್ರ ಶಿಲಾನ್ಯಾಸ ಕಾರ್ಯಕ್ರಮಕ್ಕೆ ವರ್ಚುವಲ್ ವಿಡಿಯೋ ಮೂಲಕ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ ಎಂದು ತಿಳಿಸಿದರು.ಪ್ರಸ್ತುತ ಶಿವಮೊಗ್ಗ ಮತ್ತು ಭದ್ರಾವತಿ ವ್ಯಾಪ್ತಿಯಲ್ಲಿ ಆಕಾಶವಾಣಿ ಮತ್ತು ಎಫ್.ಎಂ ರೇಡಿಯೋ ಸುಮಾರು 1 ಕೆವಿ ಸಾಮರ್ಥ್ಯ ಟ್ರಾನ್ಸ್‌ಮೀಟರ್ ಮೂಲಕ ಕಾರ್ಯನಿರ್ವಹಿಸುತ್ತಿದೆ. ಉನ್ನತೀಕರಣದ ನಂತರ ಇದರ ವ್ಯಾಪ್ತಿ ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ, ಉತ್ತರ ಕನ್ನಡ, ಉಡುಪಿ ಸೇರಿದಂತೆ ಅಕ್ಕಪಕ್ಕದ 8 ಜಿಲ್ಲೆಗಳ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸಲು ಸಹಕಾರಿಯಾಗಲಿದೆ ಎಂದು ಹೇಳಿದರು.ಇದರ ಪೂರ್ಣಪ್ರಮಾಣದ ಕಾರ್ಯಾರಂಭವಾದ ಮೇಲೆ ನಾವು ಕಾರ್‌ನಲ್ಲಿ ಪ್ರಯಾಣ ಮಾಡುವಾಗ ಶಿವಮೊಗ್ಗದ ಯಾವುದೇ ಮೂಲೆಗೆ ಸಮಾರು 150 ಕಿಲೋ ಮೀಟರ್‌ವರೆಗೆ ರೇಡಿಯೋ ಕೇಳಿಕೊಂಡು ಹೋಗಬಹುದು. ರಾಜಧಾನಿ ಬೆಂಗಳೂರು ಹೊರತುಪಡಿಸಿ ರಾಜ್ಯದಲ್ಲಿ ಅತ್ಯಧಿಕ ಸಾಮರ್ಥ್ಯದ ಟ್ರಾನ್ಸ್‌ಮೀಟರ್ ಅಳವಡಿಕೆ ಕಾರ್ಯ ನಮ್ಮ ಶಿವಮೊಗ್ಗದಲ್ಲಿ ಆಗುತ್ತಿರುವುದು ನಮಗೆಲ್ಲ ಹೆಮ್ಮೆ ಹಾಗೂ ಸಂತೋಷ ತರುವ ವಿಚಾರವಾಗಿದೆ ಎಂದರು.
₹10 ಕೋಟಿ ಅನುದಾನ:ಆಕಾಶವಾಣಿಗೆ 59 ವರ್ಷ ತುಂಬಿದ್ದು ಇಳಿವಯಸ್ಸಿನಲ್ಲಿ ಯೌವನ ಬಂದಿದೆ. ಪ್ರಧಾನಿ ಮೋದಿ ಅವರ ದೂರದೃಷ್ಟಿ ನಾಯಕತ್ವವು ನಮ್ಮ ಮಲೆನಾಡಿನ ಅಭಿವೃದ್ಧಿಗೆ ಸಹಕಾರಿಯಾಗಿದೆ. ಈ ಯೋಜನೆಗೆ ರೂ. 10 ಕೋಟಿ ಅನುದಾನ ನೀಡಲಾಗಿದ್ದು, ಅನುಷ್ಠಾನದ ನಂತರ ತುಮಕೂರುವರೆಗೂ ರೆಡಿಯೋ ಸೇವೆ ದೊರೆಯಲಿದೆ. ಮೊಬೈಲ್‌ನಲ್ಲೂ ಇಂಟರ್ನೆಟ್ ಇಲ್ಲದೇ ಬಳಸಬಹುದು. ನಮ್ಮ ಮಲೆನಾಡಿನ ಗ್ರಾಮೀಣ ಮಕ್ಕಳ ಪ್ರತಿಭೆ ಅನಾವರಣಕ್ಕೆ ಸಹ ಸಹಕಾರಿ ಆಗಲಿದ್ದು, ಮುಂದಿನ ದಿನಗಳಲ್ಲಿ ಭಾರತದಲ್ಲಿ ಅತಿ ದೊಡ್ಡ ಎಫ್.ಎಂ. ಕೇಂದ್ರ ಇದಾಗಲಿದೆ ಎಂದು ವಿಶ್ವಾಸವನ್ನು ವ್ಯಕ್ತಪಡಿಸಿದರು. ಭದ್ರಾವತಿ ಆಕಾಶವಾಣಿ ಸ್ಟುಡಿಯೋವನ್ನು ಮೇಲ್ದರ್ಜೆಗೆ ಏರಿಸಲಾಗುವುದು. ಈ ರೀತಿಯ ಯೋಜನೆಯನ್ನು ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ, ಕೇಂದ್ರದ ಮಂತ್ರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
ವಿಧಾನ ಪರಿಷತ್ತು ಸದಸ್ಯ ಎಸ್.ರುದ್ರೇಗೌಡ ಮಾತನಾಡಿ, ನಮ್ಮ ಹೆಮ್ಮೆಯ ಪ್ರಧಾನಿ ಅವರು ಈ ದೇಶದಲ್ಲಿ ಅಧಿಕಾರ ವಹಿಸಿಕೊಂಡ ನಂತರ ದೇಶದ ಅಭಿವೃದ್ಧಿ ಚಿಂತನೆಯೊಂದಿಗೆ ಈ ರೀತಿಯ ಅನೇಕ ಯೋಜನೆ ನೀಡಿದ್ದಾರೆ. ಸಂಸದ ಬಿ.ವೈ. ರಾಘವೇಂದ್ರ ಅವರು ಎಲ್ಲ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡಿದ್ದಾರೆ ಎಂದರು.ಭದ್ರಾವತಿ ಆಕಾಶವಾಣಿ ಕೇಂದ್ರದ ಮುಖ್ಯಸ್ಥರಾದ ಎಸ್,ಆರ್. ಭಟ್ ಮಾತನಾಡಿ ನಮ್ಮ ಆಕಾಶವಾಣಿಗೆ ಹೊಸ ಹುರುಪು ಬರುತ್ತಿದೆ. ಈ ನಿಟ್ಟಿನಲ್ಲಿ ಸಂಸದ ಬಿ.ವೈ ರಾಘವೇಂದ್ರ ಅವರ ಶ್ರಮ ಅತ್ಯಂತ ಅಮೂಲ್ಯವಾದದ್ದು ಎಂದು ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಶಿವಮೊಗ್ಗ ನಗರ ಕ್ಷೇತ್ರ ಶಾಸಕ ಎಸ್.ಎನ್. ಚನ್ನಬಸಪ್ಪ, ವಿಧಾನ ಪರಿಷತ್ತು ಸದಸ್ಯ ಡಿ.ಎಸ್.ಅರುಣ್, ಬಿಜೆಪಿ ಶಿವಮೊಗ್ಗ ನಗರ ಅಧ್ಯಕ್ಷ ಜಗದೀಶ್ ಮತ್ತಿತರರು ಇದ್ದರು.- - - -28ಎಸ್‌ಎಂಜಿಕೆಪಿ02:
ಶಿವಮೊಗ್ಗ ನಗರದ ವಿದ್ಯಾನಗರದ ದೂರದರ್ಶನ ಕೇಂದ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿದರು. ಶಾಸಕ ಎಸ್.ಎನ್ ಚನ್ನಬಸಪ್ಪ, ವಿಪ ಸದಸ್ಯರಾದ ಎಸ್.ರುದ್ರೇಗೌಡ, ಡಿ.ಎಸ್.ಅರುಣ್, ಬಿಜೆಪಿ ನಗರ ಅಧ್ಯಕ್ಷ ಜಗದೀಶ್ ಮತ್ತಿತರರು ಇದ್ದರು.