ಸಾರಾಂಶ
ಕ್ರೀಡಾ ಕೋಟಾದಡಿ ಅರ್ಹತೆಯಿದ್ದರೂ ವೈದ್ಯಕೀಯ ಸೀಟು ದೊರಕಿಸಿಕೊಡದ ಕಾರಣಕ್ಕೆ ಅಂತಾರಾಷ್ಟ್ರೀಯ ಚೆಸ್ ಪಟು ಸಂಜನಾ ರಘುನಾಥ್ ಅವರಿಗೆ ₹10 ಲಕ್ಷ ಪರಿಹಾರ ಪಾವತಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಕ್ರೀಡಾ ಕೋಟಾದಡಿ ಅರ್ಹತೆಯಿದ್ದರೂ ವೈದ್ಯಕೀಯ ಸೀಟು ದೊರಕಿಸಿಕೊಡದ ಕಾರಣಕ್ಕೆ ಅಂತಾರಾಷ್ಟ್ರೀಯ ಚೆಸ್ ಪಟು ಸಂಜನಾ ರಘುನಾಥ್ ಅವರಿಗೆ ₹10 ಲಕ್ಷ ಪರಿಹಾರ ಪಾವತಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.ಬೆಂಗಳೂರಿನ ಎಚ್‌ಎಸ್‌ಆರ್ ಲೇಔಟ್ ವಾಸಿ ಸಂಜನಾ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.
ಅರ್ಜಿದಾರರು 2018ರಲ್ಲಿ ಏಷ್ಯಾ ಯುವ ಚೆಸ್ ಚಾಂಪಿಯನ್‌ಶಿಪ್ ನಲ್ಲಿ ಭಾಗವಹಿಸಿದ್ದಾರೆ. ಹಾಗಾಗಿ, ಅವರು ಕ್ರೀಡಾ ಕೋಟಾದ ಸೀಟು ಪಡೆಯುವ ಅರ್ಹತೆಗಳಲ್ಲಿ ಪಿ-1 ಶ್ರೇಣಿಗೆ ಅರ್ಹರಿದ್ದಾರೆ. ಆದರೆ ತಪ್ಪಾಗಿ ಅವರಿಗೆ ಪಿ-5 ಶ್ರೇಣಿ ನೀಡಲಾಗಿದೆ. ಪಿ-1 ಶ್ರೇಣಿಯ ಅಭ್ಯರ್ಥಿಯಾಗಿ ಪ್ರವೇಶ ಪಡೆಯಲು ಅವರು ಅವಕಾಶದಿಂದ ವಂಚಿತರನ್ನಾಗಿ ಮಾಡಲಾಗಿದೆ. ಹಾಗಾಗಿ ಅವರು 10 ಲಕ್ಷ ರು. ಪರಿಹಾರಕ್ಕೆ ಅರ್ಹರು. ರಾಜ್ಯ ಸರ್ಕಾರವು ಅರ್ಜಿದಾರರಿಗ ಆರು ವಾರಗಳಲ್ಲಿ ಪರಿಹಾರದ ಮೊತ್ತವನ್ನು ಪಾವತಿಸಬೇಕು ಎಂದು ಆದೇಶದಲ್ಲಿ ನ್ಯಾಯಪೀಠ ತಿಳಿಸಿದೆ. ಪ್ರಕರಣವೇನು?: ಚೆಸ್ ಆಟಗಾರ್ತಿಯಾದ ಸಂಜನಾ ರಘುನಾಥ್ ಹಲವು ರಾಜ್ಯ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಚೆಸ್ ಟೂರ್ನಿಗಳಲ್ಲಿ ಭಾಗವಹಿಸಿ ಪದಕ ಗಳಿಸಿದ್ದಾರೆ. ವೈದ್ಯೆಯಾಗುವ ಆಕಾಂಕ್ಷೆ ಹೊಂದಿದ್ದ ಅವರು 2022-23ನೇ ಸಾಲಿನ ನೀಟ್ ಪರೀಕ್ಷೆ ಬರೆದು ಉತ್ತಮ ರ್ಗಳಿಸಿದ್ದರು. ಆದರೆ ಅವರ ಅರ್ಹತೆ ತಕ್ಕಂತೆ ಕೆಇಎ ಶ್ರೇಣಿ ನೀಡದ ಕಾರಣ ಅವರು ಸೀಟು ವಂಚಿತರಾಗಿದ್ದರು. ಇದರಿಂದ ಹೈಕೋರ್ಟ್ ಮೊರೆ ಹೋಗಿದ್ದರು.