ನಿಪ್ಪಾಣಿಯಲ್ಲಿ 100 ಬೆಡ್‌ಗಳ ತಾಲೂಕು ಆಸ್ಪತ್ರೆ ನಿರ್ಮಿಸಿ

| Published : Mar 07 2025, 12:50 AM IST

ಸಾರಾಂಶ

ಬೆಂಗಳೂರಿನಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಮಾಜಿ ಸಚಿವೆ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಅವರ ಪ್ರಶ್ನೆಗೆ ಆರೋಗ್ಯ ಸಚಿವರಾದ ದಿನೇಶ ಗುಂಡೂರಾವ್ ಉತ್ತರಿಸಿದ್ದಾರೆ.

ಕನ್ನಡಪ್ರಭ ವಾರ್ತೆ ನಿಪ್ಪಾಣಿ

ಬೆಂಗಳೂರಿನಲ್ಲಿ ನಡೆಯುತ್ತಿರುವ ಅಧಿವೇಶನದಲ್ಲಿ ಮಾಜಿ ಸಚಿವೆ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಅವರ ಪ್ರಶ್ನೆಗೆ ಆರೋಗ್ಯ ಸಚಿವರಾದ ದಿನೇಶ ಗುಂಡೂರಾವ್ ಉತ್ತರಿಸಿದ್ದಾರೆ.ಬೆಳಗಾವಿ ಜಿಲ್ಲೆಯ ನೂತನ ತಾಲೂಕು ನಿಪ್ಪಾಣಿಯಲ್ಲಿರುವ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆರಿಸಿ, 100 ಬೆಡ್‌ಗಳ ತಾಲೂಕು ಆಸ್ಪತ್ರೆಯನ್ನಾಗಿ ಪರಿವರ್ತಿಸಬೇಕು ಎಂದು ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಅವರು ಸದನದಲ್ಲಿ ಇಂದು ಧ್ವನಿ ಎತ್ತಿದರು.

ಇದಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವರಾದ ದಿನೇಶ್ ಗುಂಡುರಾವ್ ಆದ್ಯತೆ ಮೇರೆಗೆ ಕ್ರಮಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ನೂತನ ತಾಲೂಕು ರಚನೆಯಾದ ನಿಪ್ಪಾಣಿಯಲ್ಲಿರುವ 30 ಬೆಡ್‌ಗಳ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೇಗೇರಿಸಿ 100 ಬೆಡ್ ಗಳ ತಾಲೂಕು ಆಸ್ಪತ್ರೆಯನ್ನಾಗಿ ಪರಿವರ್ತಿಸಬೇಕು ಎಂದು ಶಾಸಕಿ ಶಶಿಕಲಾ ಜೊಲ್ಲೆ ಆಗ್ರಹಿಸಿದ್ದಾರೆ. ಅಲ್ಲದೇ, ಇದಕ್ಕಾಗಿ ₹40 ಕೋಟಿ ಅನುದಾನ ಮತ್ತು ಮಾನವ ಸಂಪನ್ಮೂಲಕ್ಕಾಗಿ ₹7.95 ಕೋಟಿ ವೆಚ್ಚವಾಗುತ್ತದೆ ಎಂದು ವಿಸ್ತಾರವಾದ ಮಾಹಿತಿ ನೀಡಿದರು.

ನಿಪ್ಪಾಣಿ ತಾಲೂಕು ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತಹ ಕ್ಷೇತ್ರವಾಗಿದ್ದು, ಅಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತವೆ. ಅಲ್ಲದೇ ಹೆರಿಗೆ ಸಂಖ್ಯೆಗಳು ಕೂಡ ಹೆಚ್ಚಾಗುತ್ತಿದ್ದು, ಹೊರರೋಗಿಗಳ ಚಿಕಿತ್ಸೆಗಾಗಿ ಮತ್ತು ತಾಲೂಕಿನ ಜನಹಿತಕ್ಕಾಗಿ ಶೀಘ್ರದಲ್ಲೇ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಬೇಕು ಎಂದು ಆಗ್ರಹಿಸಿದರು.ಇದಕ್ಕೆ ಪ್ರತಿಕ್ರಿಯಿಸಿದ ಆರೋಗ್ಯ ಸಚಿವ ಡಾ. ದಿನೇಶ್ ಗುಂಡುರಾವ್ ಅವರು ಹಂತ-ಹಂತವಾಗಿ ಹೊಸ ತಾಲೂಕುಗಳಿಗೆ ಆಸ್ಪತ್ರೆಗಳನ್ನು ನಿರ್ಮಿಸಲಾಗುತ್ತಿದೆ. ಈ ಬಜೆಟ್‌ನಲ್ಲಿಯೂ ಪ್ರಸ್ತಾಪವನ್ನು ಇಡಲಾಗಿದೆ. ಆದ್ಯತೆ ಮೇರೆಗೆ ಹೆಚ್ಚು ಅವಶ್ಯಕತೆಯಿರುವಲ್ಲಿ ತಾಲೂಕು ಆಸ್ಪತ್ರೆಯನ್ನು ನಿರ್ಮಿಸಲಾಗುವುದು ಎಂದರು.ವೇಳೆ ಮಾತನಾಡಿದ ಶಾಸಕಿ ಶಶಿಕಲಾ ಜೊಲ್ಲೆ ಅವರು, ಸಮುದಾಯ ಆರೋಗ್ಯ ಕೇಂದ್ರವನ್ನು ಅಭಿವೃದ್ಧಿ ಪಡಿಸುವುದಾದರೇ, ಉಪಕರಣಗಳು ಮತ್ತು ಮಾನವ ಸಂಪನ್ಮೂಲಗಳನ್ನು ಒದಗಿಸಬೇಕು. 10 ತಾಲೂಕು ಕೇಂದ್ರಗಳ ಪರ್ಯಾಯ ವ್ಯವಸ್ಥೆಯಿರುವುದಾಗಿ ಹೇಳಿದ್ದಾರೆ. ಅಲ್ಲಿರುವ ವೈದ್ಯ ಸಂಖ್ಯೆ ಮತ್ತು ಸಮಸ್ಯೆಗಳನ್ನು ನಿವಾರಿಸಬೇಕು. ಎಂಸಿಎಚ್‌ ಆಸ್ಪತ್ರೆಯಲ್ಲಿ ಹೆರಿಗೆ ಸಂಖ್ಯೆ ಹೆಚ್ಚಾದರೇ, ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುದಾನದಲ್ಲಿ ಹೆಚ್ಚಿನ ಅಭಿವೃದ್ಧಿ ಮಾಡಲಾಗುವುದು. ಅಲ್ಲದೇ ಎಂ.ಸಿ.ಎಚ್.ನಲ್ಲಿ ಖಾಲಿಯಿರುವ ಸ್ಥಾನಗಳನ್ನು ತುಂಬಲಾಗುವುದು ಎಂದು ತಿಳಿಸಿದರು.