ಸಾರಾಂಶ
ರಾಮನಗರ : ಮಹಾತ್ಮಾ ಗಾಂಧೀಜಿಯವರು ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷತೆ ವಹಿಸಿದ ಶತಮಾನೋತ್ಸವ ಸ್ಮರಣಾರ್ಥ ರಾಜ್ಯದಲ್ಲಿ 100 ಕಾಂಗ್ರೆಸ್ ಭವನಗಳನ್ನು ನಿರ್ಮಿಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ನಗರದಲ್ಲಿ ಭಾನುವಾರ ಯುವ ಪರ್ವ ಸಮಾರಂಭ ಉದ್ಘಾಟಿಸಿ ಮಾತನಾಡಿ, ಬೆಂಗಳೂರಿನಲ್ಲಿ ಕಾರ್ಯಕ್ರಮ ಆಯೋಜಿಸಿ, ಆನ್‌ಲೈನ್ ಮೂಲಕ 100 ಸ್ಥಳಗಳಲ್ಲಿ ನಿರ್ಮಾಣವಾಗಲಿರುವ ಕಾಂಗ್ರೆಸ್ ಭವನಗಳ ನಿರ್ಮಾಣಕ್ಕೆ ಅಡಿಗಲ್ಲು ಹಾಕಲಾಗುವುದು. ಈ ಅಡಿಗಲ್ಲು ಹಾಕುವ ಕಾರ್ಯಕ್ರಮಕ್ಕೆ ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ಅವರನ್ನು ಆಹ್ವಾನಿಸಲಾಗುವುದು. ಈ ವೇಳೆ, ರಾಹುಲ್ ಗಾಂಧಿ ಅವರು ಕಾರ್ಯಕರ್ತರ ಜತೆಗೂ ಚರ್ಚೆ ನಡೆಸಲಿದ್ದಾರೆ ಎಂದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಮೇ 20ಕ್ಕೆ ಎರಡು ವರ್ಷ ತುಂಬಲಿದೆ. ಹಾಗಾಗಿ, ವಿಜಯನಗರದಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗುತ್ತಿದೆ. ಯುದ್ಧ ನಡೆಯುತ್ತಿರುವ ಕಾರಣ ಕಾರ್ಯಕ್ರಮ ಆಯೋಜಿಸುವ ಕುರಿತು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಈ ಸಮಾವೇಶದಲ್ಲಿ 1 ಲಕ್ಷ ಗೊಲ್ಲರ ತಾಂಡ್ಯದವರನ್ನು ಒಂದು ಕಡೆ ಸೇರಿಸಿ, ಪಟ್ಟ ವಿತರಣೆ ಮಾಡುವ ಕೆಲಸ ಮಾಡಲಾಗುವುದು ಎಂದು ಅವರು ಹೇಳಿದರು.- ಬಾಕ್ಸ್-ಪಾಪ ಅವರು ಬಡವರು,
ನಾನೇ ಕೊಡ್ತೀನಿ: ಡಿಸಿಎಂ
ರಾಮನಗರದಲ್ಲಿ ನಿರ್ಮಿಸಲಾಗುತ್ತಿರುವ ಕಾಂಗ್ರೆಸ್ ಭವನ ನಿರ್ಮಾಣಕ್ಕೆ ವೇದಿಕೆಯಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಂದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ದೇಣಿಗೆ ಸಂಗ್ರಹಕ್ಕೆ ಮುಂದಾದರು.
ಕಾರ್ಯಕ್ರಮದ ಆರಂಭದಲ್ಲಿಯೇ ಡಿಕೆಶಿಯವರು ಕಾಂಗ್ರೆಸ್ ಭವನ ನಿರ್ಮಾಣಕ್ಕೆ ಹಣ ಘೋಷಣೆ ಮಾಡುವಂತೆ ತಿಳಿಸಿದ್ದರು. ನಾಯಕರು ನೀಡುವ ಹಣದ ವಿವರವನ್ನು ಬರೆದುಕೊಳ್ಳುವಂತೆ ಕಾರ್ಯಕರ್ತರಿಗೆ ಹೇಳಿದರು. ಭಾಷಣದ ನಂತರ ಗ್ಯಾರಂಟಿ ಅನುಷ್ಠಾನದ ರಾಜ್ಯಾಧ್ಯಕ್ಷ ಎಚ್.ಎಂ.ರೇವಣ್ಣ 1.1 ಲಕ್ಷ, ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೇಶ್ವರ್ 10 ಲಕ್ಷ ನೀಡುವುದಾಗಿ ಘೋಷಿಸಿದರು. ಈ ವೇಳೆ ಶಿವಕುಮಾರ್ ಮಾತನಾಡಿ, ಇಬ್ಬರು ಬಡವರಿದ್ದಾರೆ. ಇಬ್ಬರ ಪರವಾಗಿ ನಾನೇ 10 ಲಕ್ಷ ಹಾಗೂ 25 ಲಕ್ಷ ನೀಡುತ್ತೇನೆ ಎಂದು ಹೇಳಿ ಕಾಲೆಳೆದರು. ಶಿವಕುಮಾರ್ ಈ ಘೋಷಣೆ ಮಾಡುತ್ತಿದ್ದಂತೆ ಸಮಾರಂಭದಲ್ಲಿದ್ದ ಜನರು ನಗೆಗಡಲಲ್ಲಿ ತೇಲಿದರು.
ನಂತರ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ 1.1 ಕೋಟಿ, ಶಾಸಕ ಇಕ್ಬಾಲ್ ಹುಸೇನ್ 1 ಕೋಟಿ, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಗಾಣಕಲ್ ನಟರಾಜ್ 5 ಲಕ್ಷ, ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ವಿಜಯ್ ದೇವ್ 5 ಲಕ್ಷ, ಕೆಎಂಎಫ್ ಮಾಜಿ ಅಧ್ಯಕ್ಷ ಪಿ.ನಾಗರಾಜ್ - 10 ಲಕ್ಷ, ದೇಣಿಗೆ ಘೋಷಿಸಿದರು.
ರಾಮನಗರ ಅಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ
ಜಿಲ್ಲೆಯ ಜನ ಉದ್ಯೋಗಕ್ಕೆಂದು ಬೆಂಗಳೂರಿಗೆ ಹೋಗುತ್ತಿದ್ಧಾರೆ. ಇದನ್ನು ತಪ್ಪಿಸಿ ಜಿಲ್ಲೆಯಲ್ಲಿಯೇ ಉದ್ಯೋಗ ಸೃಷ್ಟಿಸುವ ಸಲುವಾಗಿ ರಾಮನಗರಕ್ಕೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕಾರಣ ಮಾಡಲಾಗುತ್ತಿದೆ. ಇಷ್ಟೇ ಅಲ್ಲ, ಆಸ್ತಿ ಮೌಲ್ಯ ಹೆಚ್ಚಳ ಮಾಡುವುದು ಕೂಡ ನಮ್ಮ ಉದ್ದೇಶವಾಗಿದೆ. ಕನಕಪುರ ಇದ್ದ ಲೋಕಸಭಾ ಕ್ಷೇತ್ರವನ್ನು ಬೆಂಗಳೂರು ಗ್ರಾಮಾಂತರ ಎಂದು ಮರುನಾಮಕರಣ ಮಾಡಲಾಯಿತು. ಬೆಂಗಳೂರು ದಕ್ಷಿಣ ಜಿಲ್ಲೆಯಾದರೂ ರಾಮನಗರವೇ ಜಿಲ್ಲಾ ಕೇಂದ್ರವಾಗಿರುತ್ತದೆ ಎಂದು ಡಿ.ಕೆ.ಶಿವಕುಮಾರ್ ಪುನರುಚ್ಛರಿಸಿದರು.
ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಬಾರದು ಎಂದು ಮಾಜಿ ಪ್ರಧಾನಿ ದೇವೇಗೌಡ ಹಾಗೂ ಸಂಸದ ಡಾ.ಸಿ.ಎನ್‌ಮಂಜುನಾಥ್ ಅವರು ಪತ್ರ ಬರೆದಿದ್ದಾರೆ. ಆದರೆ, ಈ ಹಿಂದೆ ಕುಮಾರಸ್ವಾಮಿ ಅವರು ಪ್ರಾಧಿಕಾರ ರಚನೆ ಮಾಡಲು ಯೋಚಿಸಿದ್ದರು ಎಂದು ಪ್ರತಿಪಾದಿಸಿದರು. ಬಾಕ್ಸ್:ಬಿಡದಿಯಿಂದ ರಾಮನಗರದವರೆಗೆ ಬೈಕ್ ರ್‍ಯಾಲಿ:ಯುವ ಪರ್ವ ಸಮಾವೇಶದ ಹಿನ್ನೆಲೆಯಲ್ಲಿ ಬಿಡದಿಯಿಂದ ರಾಮನಗರದವರೆಗೆ ಆಪರೇಷನ್ ಸಿಂದೂರ ಕಾರ್ಯಾಚರಣೆ ನಡೆಸಿದ ಭಾರತೀಯ ಸೈನಿಕರ ಬೆಂಬಲಾರ್ಥವಾಗಿ ಮಾಜಿ ಸಂಸದ ಡಿ.ಕೆ.ಸುರೇಶ್ ನೇತೃತ್ವದಲ್ಲಿ ಬೃಹತ್ ಬೈಕ್ ರ್‍ಯಾಲಿ ನಡೆಯಿತು. ನೂರಾರು ಯುವಕರು ಬೈಕ್ ರ್‍ಯಾಲಿಯಲ್ಲಿ ಭಾಗವಹಿಸಿದ್ದರು.
ಕಾಂಗ್ರೆಸ್ ಕಾರ್ಮಿಕ ಘಟಕ ಜಿಲ್ಲಾಧ್ಯಕ್ಷ ಪುಟ್ಟರಾಜು 1.1ಲಕ್ಷ , ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಚಂದ್ರ ಸಾಗರ್ - 2 ಲಕ್ಷ, ಮಾಜಿ ಶಾಸಕ ಕೆ.ರಾಜು - 5 ಲಕ್ಷ, ಮಾಜಿ ಶಾಸಕ ಅಶ್ವತ್ಥ್ - 10 ಲಕ್ಷ 1 ಸಾವಿರ, ಮುಖಂಡ ಕೀರಣಗೆರೆ ಜಗದೀಶ್ - 5 ಲಕ್ಷ, ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎ.ಬಿ.ಚೇತನ್ ಕುಮಾರ್ 5 ಲಕ್ಷ , ಕಾಂಗ್ರೆಸ್ ಮಹಿಳಾ ಘಟಕ ಅಧ್ಯಕ್ಷೆ ದೀಪಾ ಮುನಿರಾಜು 1 ಲಕ್ಷ 1 ಸಾವಿರ ದೇಣಿಕೆ ನೀಡುವುದಾಗಿ ಘೋಷಣೆ ಮಾಡಿದರು.