ಕಾಂಗ್ರೆಸ್‌ ಸರ್ಕಾರ ಬಂದ ಮೇಲೆ ಶಿಗ್ಗಾಂವಿ ಕ್ಷೇತ್ರಕ್ಕೆ ₹100 ಕೋಟಿ ಅನುದಾನ

| Published : Nov 07 2024, 11:54 PM IST

ಕಾಂಗ್ರೆಸ್‌ ಸರ್ಕಾರ ಬಂದ ಮೇಲೆ ಶಿಗ್ಗಾಂವಿ ಕ್ಷೇತ್ರಕ್ಕೆ ₹100 ಕೋಟಿ ಅನುದಾನ
Share this Article
  • FB
  • TW
  • Linkdin
  • Email

ಸಾರಾಂಶ

ಕಳೆದ ಹತ್ತು ವರ್ಷಗಳಲ್ಲಿ ಎರಡು ಬಾರಿ ಸಚಿವರಾಗಿ, ಮುಖ್ಯಮಂತ್ರಿಗಳಾಗಿ ಅಧಿಕಾರ ನಡೆಸಿದ ಈ ಭಾಗದ ಶಾಸಕರಾಗಿದ್ದ ಬಸವರಾಜ ಬೊಮ್ಮಾಯಿ ಕ್ಷೇತ್ರಕ್ಕೆ ವಿಶೇಷ ಅನುದಾನವನ್ನು ನೀಡಿ ಅಭಿವೃದ್ಧಿಯ ಮೂಲಕ ರಾಜ್ಯಕ್ಕೆ ಮಾದರಿಯಾಗಬೇಕಿತ್ತು. ಆದರೆ, ನಾನು ಇದೀಗ ಕ್ಷೇತ್ರದಲ್ಲಿ ಎಲ್ಲಿಯೂ ಯಾವುದೇ ಅಭಿವೃದ್ಧಿ ಕಾರ್ಯಗಳಾಗಿಲ್ಲ ಎನ್ನುವುದನ್ನು ಮತದಾರರಿಂದ ಕೇಳುತ್ತಿದ್ದೇನೆ. ಆದರೆ, ನಮ್ಮ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಶಿಗ್ಗಾಂವಿ ಕ್ಷೇತ್ರಕ್ಕೆ ₹೧೦೦ ಕೋಟಿ ವಿಶೇಷ ಅನುದಾನವನ್ನು ನೀಡಿದ್ದೇವೆ ಎಂದು ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು.

ಸವಣೂರು: ಕಳೆದ ಹತ್ತು ವರ್ಷಗಳಲ್ಲಿ ಎರಡು ಬಾರಿ ಸಚಿವರಾಗಿ, ಮುಖ್ಯಮಂತ್ರಿಗಳಾಗಿ ಅಧಿಕಾರ ನಡೆಸಿದ ಈ ಭಾಗದ ಶಾಸಕರಾಗಿದ್ದ ಬಸವರಾಜ ಬೊಮ್ಮಾಯಿ ಕ್ಷೇತ್ರಕ್ಕೆ ವಿಶೇಷ ಅನುದಾನವನ್ನು ನೀಡಿ ಅಭಿವೃದ್ಧಿಯ ಮೂಲಕ ರಾಜ್ಯಕ್ಕೆ ಮಾದರಿಯಾಗಬೇಕಿತ್ತು. ಆದರೆ, ನಾನು ಇದೀಗ ಕ್ಷೇತ್ರದಲ್ಲಿ ಎಲ್ಲಿಯೂ ಯಾವುದೇ ಅಭಿವೃದ್ಧಿ ಕಾರ್ಯಗಳಾಗಿಲ್ಲ ಎನ್ನುವುದನ್ನು ಮತದಾರರಿಂದ ಕೇಳುತ್ತಿದ್ದೇನೆ. ಆದರೆ, ನಮ್ಮ ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಶಿಗ್ಗಾಂವಿ ಕ್ಷೇತ್ರಕ್ಕೆ ₹೧೦೦ ಕೋಟಿ ವಿಶೇಷ ಅನುದಾನವನ್ನು ನೀಡಿದ್ದೇವೆ ಎಂದು ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು.

ಪಟ್ಟಣದಲ್ಲಿ ಗುರುವಾರ ಸಾಯಂಕಾಲ ರೋಡ್‌ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಿಗ್ಗಾಂವಿ-ಸವಣೂರು ಕ್ಷೇತ್ರದ ಅಭ್ಯರ್ಥಿ ಯಾಸೀರಖಾನ ಪಠಾಣ ಪರವಾಗಿ ಮತಯಾಚಿಸಿ ಮಾತನಾಡಿದರು. ಕಾಂಗ್ರೆಸ್ ಜವಾಹರಲಾಲ, ಇಂದಿರಾಗಾಂಧಿ, ರಾಜೀವಗಾಂಧಿ ಕಾಲದಿಂದಲೂ ಬಡವರಿಗಾಗಿ ಒಂದೊಂದು ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಾ ಬಂದಿದೆ. ಈಗ ನಾನು ಮತ್ತು ಸಿದ್ದರಾಮಯ್ಯ ಅವರು ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದೇವೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವುದೇ ಒಂದು ಗ್ಯಾರಂಟಿ ಯೋಜನೆ ಜಾರಿಗೊಳಿಸಿದ್ದನ್ನು ತೋರಿಸಿಕೊಡಲಿ ಎಂದು ಸವಾಲು ಹಾಕಿದರು. ಜನರ ಆಶೀರ್ವಾದದಿಂದ ಮುಂದಿನ ಎಂಟೂವರೆ ವರ್ಷ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ನಡೆಯುವುದು ಗ್ಯಾರಂಟಿ ಎಂದರು.

ಈ ಕ್ಷೇತ್ರದಲ್ಲಿ ಮನೆಗಳನ್ನು ನೋಡಿದರೆ ನನಗೆ ಅಯ್ಯೋ ಅನಿಸುತ್ತದೆ. ನಾನೇನಾದರೂ ಮುಖ್ಯಮಂತ್ರಿಯಾಗಿದ್ದಿದ್ದರೆ ಗುಡಿಸಲುಗಳಂತಿರುವ ಎಲ್ಲ ಮನೆಗಳನ್ನು ಒಡೆದು ಹಾಕಿ ವಿಶೇಷ ಅನುದಾನವನ್ನು ನೀಡಿ ಬಡವರಿಗೆ ಹೊಸ ಮನೆಗಳನ್ನು ಕಟ್ಟಿಕೊಡುತ್ತಿದ್ದೆ ಎಂದು ಹೇಳಿದರು.

ಜನವಿರೋಧಿ ಆಡಳಿತದಿಂದಾಗಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕಳೆದ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಕೇವಲ ೬೬ ಸ್ಥಾನಗಳನ್ನು ಗೆದ್ದಿದೆ. ಇತ್ತೀಚಿಗೆ ನಡೆದ ಎಂಪಿ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ೮೦೦೦ ಸಾವಿರ ಮತಗಳ ಮುನ್ನಡೆ ಸಿಕ್ಕಿದೆ. ಈಗ ಅವರ ಮಗ ಭರತ ಬೊಮ್ಮಾಯಿ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಆದರೆ, ಅವರಿಂದ ಯಾವುದೇ ಅಭಿವೃದ್ಧಿ ಸಾಧ್ಯವಿಲ್ಲ. ಸರ್ಕಾರ ನಮ್ಮದಿದೆ. ಕಾಂಗ್ರೆಸ್ ಅಭ್ಯರ್ಥಿ ಯಾಸೀರಖಾನ ಗೆದ್ದು ಬಂದರೆ, ಇನ್ನೂ ಹೆಚ್ಚಿನ ಅನುದಾನವನ್ನು ಕ್ಷೇತ್ರಕ್ಕೆ ನೀಡುವುದಾಗಿ ಭರವಸೆ ನೀಡುತ್ತೇನೆ. ತಾವೆಲ್ಲರೂ ನ. ೧೩ರಂದು ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಮನವಿ ಮಾಡಿದರು.