ಡಿಸಿಎಂಸಿ ಪ್ರೌಢ ಶಾಲೆಗೆ ಶೇ.100 ಫಲಿತಾಂಶ

| Published : May 10 2024, 11:49 PM IST

ಸಾರಾಂಶ

ನರಸಿಂಹರಾಜಪುರ, ತಾಲೂಕು ಒಕ್ಕಲಿಗರ ಸಂಘ ನಡೆಸುತ್ತಿರುವ ಡಿಸಿ ಎಂ ಸಿ ಪ್ರೌಢಶಾಲೆ ಎಸ್ ಎಸ್ ಎಲ್ ಸಿಗೆ ಒಟ್ಟು 53 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದು ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ 100 ರಷ್ಟು ಫಲಿತಾಂಶದೊಂದಿಗೆ ಶಾಲೆಗೆ ಹಾಗೂ ಒಕ್ಕಲಿಗರ ವಿದ್ಯಾಸಂಸ್ಥೆಗೆ ಕೀರ್ತಿ ತಂದಿದ್ದಾರೆ ಎಂದು ಡಿಸಿಎಂಸಿ ಪ್ರೌಢ ಶಾಲೆ ಪ್ರಾಂಶುಪಾಲರಾದ ಪದ್ಮರಮೇಶ್ ತಿಳಿಸಿದ್ದಾರೆ.

ಪರೀಕ್ಷೆಗೆ ಕುಳಿತಿದ್ದ ಎಲ್ಲಾ 53 ವಿದ್ಯಾರ್ಥಿಗಳು ತೇರ್ಗಡೆ

ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ

ತಾಲೂಕು ಒಕ್ಕಲಿಗರ ಸಂಘ ನಡೆಸುತ್ತಿರುವ ಡಿಸಿ ಎಂ ಸಿ ಪ್ರೌಢಶಾಲೆ ಎಸ್ ಎಸ್ ಎಲ್ ಸಿಗೆ ಒಟ್ಟು 53 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದು ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ 100 ರಷ್ಟು ಫಲಿತಾಂಶದೊಂದಿಗೆ ಶಾಲೆಗೆ ಹಾಗೂ ಒಕ್ಕಲಿಗರ ವಿದ್ಯಾಸಂಸ್ಥೆಗೆ ಕೀರ್ತಿ ತಂದಿದ್ದಾರೆ ಎಂದು ಡಿಸಿಎಂಸಿ ಪ್ರೌಢ ಶಾಲೆ ಪ್ರಾಂಶುಪಾಲರಾದ ಪದ್ಮರಮೇಶ್ ತಿಳಿಸಿದ್ದಾರೆ.

53 ವಿದ್ಯಾರ್ಥಿಗಳಲ್ಲಿ 17 ಅತ್ಯುತ್ತಮ ಶ್ರೇಣಿ, 31 ಪ್ರಥಮ ಶ್ರೇಣಿ ಹಾಗೂ 5 ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದಿದ್ದಾರೆ. ಸಾಂದ್ರ ಮರಿಯ ಎಂಬ ವಿದ್ಯಾರ್ಥಿನಿ 625 ಕ್ಕೆ 599 ( ಶೇ 95.84) ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನ ಗಳಿಸಿದ್ದು,. ಶೆರಿನ್ ಎಂ ವಿ 625 ಕ್ಕೆ 587 ( ಶೇ 93.92) ಹಾಗೂ ಕುಮಾರಿ ಅಯ್‌ ಫುನಾ ಯಾಕೂತ್ ಆರ್ 625 ಕ್ಕೆ 587 ( ಶೇ 93.92) ಅಂಕ ಪಡೆದು ಇಬ್ಬರೂ ಎರಡನೇ ಸ್ಥಾನ ಪಡೆದಿದ್ದಾರೆ. ತನುಶ್ರೀ ಟಿ ಪಿ ಎಂಬ ವಿದ್ಯಾರ್ಥಿನಿ 625 ಕ್ಕೆ 577 ( ಶೇ 92.32) ಅಂಕಗಳೊಂದಿಗೆ ಮೂರನೇ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ. ಉತ್ತಮ ಫಲಿತಾಂಶಕ್ಕೆ ಕಾರಣರಾದ ಎಲ್ಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರಿಗೆ ಶಾಲೆ ಪ್ರಾಂಶುಪಾಲರು ಹಾಗೂ ಶಾಲಾ ಆಡಳಿತ ಮಂಡಳಿಯವರು ಅಭಿನಂದನೆ ಸಲ್ಲಿಸಿದ್ದಾರೆ.