ಕನ್ನಡಪ್ರಭ ವಾರ್ತೆ ಮದ್ದೂರು

ತಾಲೂಕಿನ ಬೆಸಗರಹಳ್ಳಿ ಮಾನಸ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ ಬರಲು ಕಾರಣರಾದ ವಿದ್ಯಾರ್ಥಿಗಳನ್ನು ಅಭಿನಂದಿಸುವುವುದಾಗಿ ಸಂಸ್ಥೆ ಅಧ್ಯಕ್ಷ ವಿ.ಕೆ.ಜಗದೀಶ್ ತಿಳಿಸಿದರು.

ಪರೀಕ್ಷೆ ಬರೆದ ಎಲ್ಲಾ 52 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ ಹಾಗೂ ಅತ್ಯುನ್ನತ ಶ್ರೇಣಿಯಲ್ಲಿ 9 ಮಂದಿ, ಪ್ರಥಮ ಶ್ರೇಣಿಯಲ್ಲಿ 31 ಮಂದಿ, ದ್ವಿತೀಯ ಶ್ರೇಣಿಯಲ್ಲಿ 8 ಮಂದಿ ಉತೀರ್ಣರಾಗಿದ್ದಾರೆ ಎಂದು ಹೇಳಿದರು.

ಸಂಸ್ಥೆ ಅಂಗ ಸಂಸ್ಥೆಯಾದ ಎಚ್.ಡಿ.ದೇವೇಗೌಡ ಪ್ರೌಢಶಾಲೆಯಲ್ಲಿ ಪ್ರಸ್ತುತ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 30 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಶೇ.96.66 ರಷ್ಟು ಉತ್ತೀರ್ಣರಾಗಿದ್ದಾರೆ ಹಾಗೂ ಅತ್ಯುನ್ನತ ಶ್ರೇಣಿಯಲ್ಲಿ 2 ವಿದ್ಯಾರ್ಥಿಗಳು, ಪ್ರಥಮ ಶ್ರೇಣಿಯಲ್ಲಿ 14 ಮಂದಿ, ದ್ವಿತೀಯ ಶ್ರೇಣಿಯಲ್ಲಿ 10 ಮಂದಿ ಉತ್ತೀರ್ಣರಾಗಿದ್ದಾರೆ ಎಂದರು.

ಮಾನಸ ವಿದ್ಯಾಸಂಸ್ಥೆಯ ಆವರಣದಲ್ಲಿ ವಿದ್ಯಾರ್ಥಿಗಳನ್ನು ಶುಕ್ರವಾರ ಅಭಿನಂದಿಸಿ ಮಾತನಾಡಿದ ಸಂಸ್ಥೆ ಅಧ್ಯಕ್ಷ ವಿ.ಕೆ.ಜಗದೀಶ್, ಮಾನಸ ಆಂಗ್ಲ ಮಾಧ್ಯಮ ಪ್ರೌಢಶಾಲೆ ಹಾಗೂ ಎಚ್.ಡಿ.ದೇವೇಗೌಡ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ನಿರಂತರವಾಗಿ ಉತ್ತಮ ಫಲಿತಾಂಶ ಬರುತ್ತಿದೆ. ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೆ ಸಂಸ್ಥೆ ವತಿಯಿಂದ ನುರಿತ ಶಿಕ್ಷಕರಿಂದ ಗುಣಾತ್ಮಕ ಶಿಕ್ಷಣ ನೀಡುತ್ತಿರುವುದರಿಂದ ಉತ್ತಮ ಫಲಿತಾಂಶ ಬರಲು ಸಾಧ್ಯವಾಗುತ್ತಿದೆ ಎಂದು ಹೇಳಿದರು.


ಈ ವೇಳೆ ಸಂಸ್ಥೆ ಖಜಾಂಚಿ ವಿ.ಕೆ.ಸನತ್ ಕುಮಾರ್, ಕಾರ್ಯದರ್ಶಿ ಪಿ.ನಾಗರಾಜು, ಮುಖ್ಯ ಶಿಕ್ಷಕರಾದ ಆರ್.ಪಲ್ಲವಿ, ಬಿ.ಎಂ.ಬಸವರಾಜು, ಎನ್.ಶರತ್ ಸೇರಿದಂತೆ ಶಿಕ್ಷಕರು ಹಾಗೂ ಪಾಲಕರು ಇದ್ದರು.