ಸಾರಾಂಶ
ಪಾಂಡವಪುರ ತಾಲೂಕಿನ ಚಿನಕುರಳಿ ಗ್ರಾಮದಲ್ಲಿ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಒಡೆತನದ ಪ್ರತಿಷ್ಠಿತ ಎಸ್‌ಟಿಜಿ ಶಿಕ್ಷಣ ಸಂಸ್ಥೆಗೆ ದ್ವಿತೀಯ ಪಿಯುಸಿಯಲ್ಲಿ ಶೇ.100 ಫಲಿತಾಂಶ ಬಂದಿದೆ. ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಜಿಲ್ಲೆಗೆ ಟಾಪರ್ ಆಗಿದ್ದಾರೆ.
ಪಾಂಡವಪುರ: ತಾಲೂಕಿನ ಚಿನಕುರಳಿ ಗ್ರಾಮದಲ್ಲಿ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು ಒಡೆತನದ ಪ್ರತಿಷ್ಠಿತ ಎಸ್‌ಟಿಜಿ ಶಿಕ್ಷಣ ಸಂಸ್ಥೆಗೆ ದ್ವಿತೀಯ ಪಿಯುಸಿಯಲ್ಲಿ ಶೇ.100 ಫಲಿತಾಂಶ ಬಂದಿದೆ. ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಜಿಲ್ಲೆಗೆ ಟಾಪರ್ ಆಗಿದ್ದಾರೆ.
ಬುಧವಾರ ಪ್ರಕಟಗೊಂಡ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಎಸ್‌ಟಿಜಿ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳಾದ ಬಿ.ಆರ್. ಪ್ರಗತಿ ಹಾಗೂ ಬಿ.ಎಸ್. ಜೀವನ್ ಗೌಡ ತಲಾ 592 ಅಂಕಗಳಿಸುವ ಮೂಲಕ ಮಂಡ್ಯ ಜಿಲ್ಲೆಗೆ ಟಾಪರ್ ಆಗಿದ್ದು, ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಗಳಿಸುವ ಮೂಲಕ ಜಿಲ್ಲೆಗೆ ಹಾಗೂ ಕಾಲೇಜಿಗೆ ಕೀರ್ತಿ ತಂದಿದ್ದಾರೆ.ಕಾಲೇಜಿನಲ್ಲಿ 401 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದು ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಇದರಲ್ಲಿ 373 ವಿದ್ಯಾರ್ಥಿಗಳು ಉನ್ನತ ಶ್ರೇಣಿಯಲ್ಲಿ, 28 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಗಣಿತ ವಿಷಯದಲ್ಲಿ 230, ಜೀವಶಾಸ್ತ್ರದಲ್ಲಿ 22, ಹಾಗೂ ಕನ್ನಡ ವಿಷಯದಲ್ಲಿ ಒರ್ವ ವಿದ್ಯಾರ್ಥಿ ಶೇ.100 ರಷ್ಟು ಅಂಕಗಳಿಸುವ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸುವ ಮೂಲಕ ಕಾಲೇಜಿಗೆ ಕೀರ್ತಿ ತಂದುಕೊಟ್ಟ ಎಲ್ಲಾ ವಿದ್ಯಾರ್ಥಿಗಳಿಗೆ, ಉತ್ತಮ ಫಲಿತಾಂಶ ಬರಲು ಶ್ರಮಿಸಿದ ಕಾಲೇಜಿನ ಉಪಾನ್ಯಾಕರು ಹಾಗೂ ಸಿಬ್ಬಂದಿಗೆ ಸಂಸ್ಥೆಯ ಅಧ್ಯಕ್ಷ ಮಾಜಿ ಸಚಿವ ಸಿ.ಎಸ್.ಪುಟ್ಟರಾಜು, ಸಿಇಒ ಸಿ.ಪಿ.ಶಿವರಾಜು ಹಾಗೂ ಪ್ರಾಂಶುಪಾಲರು, ಆಡಳಿತ ಮಂಡಳಿಯ ಸದಸ್ಯರು ಅಭಿನಂಧನೆ ಸಲ್ಲಿಸಿದ್ದಾರೆ.