: ಮೇ. 9ರಂದು ಚಿತ್ರದುರ್ಗದಲ್ಲಿ ಹಮ್ಮಿಕೊಂಡಿರುವ ಬಿ.ಎಸ್.ವೈ. ಅಭಿಮಾನೋತ್ಸವಕ್ಕೆ ಪುತ್ತೂರಿನಿಂದ ಒಂದು ಸಾವಿರಕ್ಕೂ ಹೆಚ್ಚು ಮಂದಿ ತೆರಳಲಿದ್ದು, ಅವರನ್ನು ಕರೆದೊಯ್ಯಲು ಪುತ್ತೂರಿನಿಂದ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ.

ಪುತ್ತೂರು: ಮೇ. 9ರಂದು ಚಿತ್ರದುರ್ಗದಲ್ಲಿ ಹಮ್ಮಿಕೊಂಡಿರುವ ಬಿ.ಎಸ್.ವೈ. ಅಭಿಮಾನೋತ್ಸವಕ್ಕೆ ಪುತ್ತೂರಿನಿಂದ ಒಂದು ಸಾವಿರಕ್ಕೂ ಹೆಚ್ಚು ಮಂದಿ ತೆರಳಲಿದ್ದು, ಅವರನ್ನು ಕರೆದೊಯ್ಯಲು ಪುತ್ತೂರಿನಿಂದ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ ಎಂದು ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ರಾಜ್ಯದಾದ್ಯಂತ 10 ಲಕ್ಷದಷ್ಟು ಕಾರ್ಯಕರ್ತರು ಮತ್ತು ಅಭಿಮಾನಿಗಳು ಸೇರಲಿದ್ದಾರೆ. ಬಿ.ಎಸ್. ಯಡಿಯೂರಪ್ಪ ಅವರು ಪುತ್ತೂರಿಗೂ ಹಲವು ಕೊಡುಗೆಗಳನ್ನು ನೀಡಿದ್ದು, ಪುತ್ತೂರಿನಿಂದ ಒಂದು ಸಾವಿರದಷ್ಟು ಮಂದಿ ಹೆಸರು ನೀಡಿದ್ದಾರೆ. ಇನ್ನು ಹೆಸರು ನೀಡಿದರೆ ಕರೆದೊಯ್ಯುವ ವ್ಯವಸ್ಥೆ ಮಾಡಲಾಗುವುದು ಎಂದರು.

8ರಂದು ರಾತ್ರಿ 9.30ಕ್ಕೆ ಪುತ್ತೂರಿನಿಂದ ಬಸ್ ಹೊರಡಲಿದೆ. ಮೇ 9ರಂದು ಬಿ.ಎಸ್.ವೈ. ಅಭಿಮಾನೋತ್ಸವ ಕಾರ್ಯಕ್ರಮ ನಡೆಯಲಿದ್ದು, ಆಗಮಿಸುವ ಇಚ್ಛೆಯುಳ್ಳವರನ್ನು ಕರೆದೊಯ್ಯಲಾಗುವುದು. ಇದಲ್ಲದೇ ಅನೇಕ ಮಂದಿ ತಮ್ಮ ಖಾಸಗಿ ವಾಹನದಲ್ಲಿ ಆಗಮಿಸುವ ಇಚ್ಛೆ ವ್ಯಕ್ತಪಡಿಸಿದ್ದಾರೆ ಎಂದರು.

ಪುತ್ತೂರಿಗೆ ಕೊಡುಗೆ: ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಪುತ್ತೂರು ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಮಂಜೂರಾಗಿತ್ತು. ಪುತ್ತೂರು ಆಡಳಿತ ಸೌಧ, ಮೊರಾರ್ಜಿ ದೇಸಾಯಿ ವಸತಿಯುತ ಶಾಲೆ, ಅಗ್ನಿಶಾಮಕ ಕಟ್ಟಡ, ಬೆಳಿಯೂರು ಅಣೆಕಟ್ಟು, ಜಲಸಿರಿ ಯೋಜನೆಯಡಿ 115 ಕೋಟಿ ರೂ. ಮಂಜೂರು, ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಸೇರಿದಂತೆ ಹಲವು ಯೋಜನೆಗಳನ್ನು ಪುತ್ತೂರಿಗೆ ನೀಡಿದ್ದಾರೆ ಎಂದು ಸಂಜೀವ ಮಠಂದೂರು ತಿಳಿಸಿದರು.

ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಉಜಿರೆಮಾರು, ನಿಕಟಪೂರ್ವ ಗ್ರಾಮಾಂತರ ಮಂಡಲ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ವಿದ್ಯಾಗೌರಿ, ಫಲಾನುಭವಿ ಪ್ರಕೋಷ್ಠದ ಜಿಲ್ಲಾ ಸಂಚಾಲಕ ನಿತೀಶ್ ಶಾಂತಿವನ, ನಗರ ಮಂಡಲ ಉಪಾಧ್ಯಕ್ಷೆ ವಸಂತಲಕ್ಷ್ಮೀ, ಬಿ.ಎಲ್.ಎ. 1 ಸಂಚಾಲಕ ಹರೀಶ್ ಬಿಜತ್ರೆ, ಗ್ರಾಮಾಂತರ ಮಂಡಲ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್ ಉಪಸ್ಥಿತರಿದ್ದರು.