ಸಾರಾಂಶ
ಮಂಡ್ಯದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ 14 ವರ್ಷದೊಳಗಿನ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಜೆ.ಜೆ.ಪಬ್ಲಿಕ್ ಶಾಲೆ ವಿದ್ಯಾರ್ಥಿ ಮಹಮ್ಮದ್ ಸಾಹಿದ್ 100 ಮೀಟರ್ ಓಟ ಮತ್ತು ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಕನ್ನಡಪ್ರಭ ವಾರ್ತೆ ಹಲಗೂರು
ಮಂಡ್ಯದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ನಡೆದ 14 ವರ್ಷದೊಳಗಿನ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಜೆ.ಜೆ.ಪಬ್ಲಿಕ್ ಶಾಲೆ ವಿದ್ಯಾರ್ಥಿ ಮಹಮ್ಮದ್ ಸಾಹಿದ್ 100 ಮೀಟರ್ ಓಟ ಮತ್ತು ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.ರಾಜ್ಯ ಮಟ್ಟಕ್ಕೆ ಆಯ್ಕೆಯಾದ ಮಹಮ್ಮದ್ ಸಾಹಿದ್ ಅವರನ್ನು ಶಾಲೆ ಸಂಸ್ಥಾಪಕರಾದ ಲಲಿತಾಂಬ ಸೋಮಶೇಖರ್ ಮತ್ತು ಶಿಕ್ಷಕ ವೃಂದ ವಿದ್ಯಾರ್ಥಿಯನ್ನು ಅಭಿನಂದಿಸಿದ್ದು, ಜಿಲ್ಲಾ ಮಟ್ಟದಿಂದ ಗೆಲುವು ಸಾಧಿಸಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುವುದರಿಂದ ಶಾಲೆ, ಹೋಬಳಿ ಮತ್ತು ತಾಲೂಕಿಗೆ ಕೀರ್ತೀ ತಂದಿದ್ದಾನೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಶಾಲೆಯ ಪಠ್ಯ ಮತ್ತು ದೈಹಿಕ ಶಿಕ್ಷಕರು ನನ್ನ ಮೇಲೆ ನಂಬಿಕೆ ಇಟ್ಟಿದ್ದು ಅದನ್ನು ಉಳಿಸಿಕೊಂಡು ಮುಂದಿನ ದಿನಗಳಲ್ಲಿ ನಡೆಯುವ ರಾಜ ಮಟ್ಟದ ಕ್ರೀಡೆಯಲ್ಲಿ ನಿಷ್ಠೆ, ಶ್ರದ್ಧೆಯಿಂದ ಭಾಗವಹಿಸಿ ಗೆಲವು ಸಾಧಿಸುತ್ತೇನೆ ಎಂದು ವಿದ್ಯಾರ್ಥಿ ಮಹಮ್ಮದ್ ಸಾಹಿದ್ ವಿಶ್ವಾಸ ವ್ಯಕ್ತಪಡಿಸಿದರು.ದೈಹಿಕ ಶಿಕ್ಷಣ ಶಿಕ್ಷಕ ಎಂ.ಎ.ರಾಜಶೇಖರ್ ಮೂರ್ತಿ ಮಾತನಾಡಿ, ಸಾಹಿದ್ ಕ್ರೀಡೆ, ಓದಿನಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದಾನೆ. ತಾಲೂಕಿನಿಂದ ನಮ್ಮ ವಿದ್ಯಾರ್ಥಿ ಒಬ್ಬನೇ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು, ರಾಜ್ಯಮಟ್ಟ ಕ್ರೀಡಾಕೂಟದಲ್ಲಿ ಗೆಲ್ಲುವ ನಿರೀಕ್ಷೆ ಹೊಂದಿದ್ದೇವೆ ಎಂದರು.