ತಾಲೂಕಿನ ದುಂಡ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆ ಪ್ರಾರಂಭಗೊಂಡು 100 ವರ್ಷ ದಾಟಿರುವ ಹಿನ್ನೆಲೆಯಲ್ಲಿ ಆ ಶಾಲೆಯಲ್ಲಿ ಓದಿದವರು, ಗ್ರಾಮಸ್ಥರು, ಮಕ್ಕಳ ಪೋಷಕರು ೭ರಂದು ಶತಮಾನೋತ್ಸವ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.
ಕನ್ನಡಪ್ರಭ ವಾರ್ತೆ ತುರುವೇಕೆರೆ
ತಾಲೂಕಿನ ದುಂಡ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆ ಪ್ರಾರಂಭಗೊಂಡು 100 ವರ್ಷ ದಾಟಿರುವ ಹಿನ್ನೆಲೆಯಲ್ಲಿ ಆ ಶಾಲೆಯಲ್ಲಿ ಓದಿದವರು, ಗ್ರಾಮಸ್ಥರು, ಮಕ್ಕಳ ಪೋಷಕರು ೭ರಂದು ಶತಮಾನೋತ್ಸವ ಆಚರಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.ತಾಲೂಕಿನ ದಂಡಿನಶಿವರ ಹೋಬಳಿಯ ದುಂಡ ಗ್ರಾಮದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆ ಬ್ರಿಟಿಷರ ಆಳ್ವಿಕೆ ಕಾಲದಲ್ಲೇ ಅಂದರೆ ೧೯೨೦ರಲ್ಲಿ ಗ್ರಾಮಸ್ಥರಿಂದ ೪೦೦ ರು. ಹಾಗೂ ಸರ್ಕಾರದಿಂದ ೪೦೦ ರು. ಒಟ್ಟು ೮೦೦ ರು.ಗಳ ವೆಚ್ಚದಲ್ಲಿ ಶಾಲಾ ಕಟ್ಟಡ ನಿರ್ಮಾಣ ಮಾಡಲಾಗಿತ್ತು. ಶಾಲೆಯ ನಿರ್ವಹಣೆ ಸಾಧ್ಯವಾಗದಿದ್ದರಿಂದ ಗ್ರಾಮಸ್ಥರು ೧೯೨೦ ರಲ್ಲಿ ಸರ್ಕಾರಕ್ಕೆ ವಹಿಸಿಕೊಟ್ಟಿದ್ದರು. ೮-೮-೧೯೨೪ ರಲ್ಲಿ ಈ ಶಾಲೆ ಸರ್ಕಾರಿ ಶಾಲೆಯಾಗಿ ಪರಿವರ್ತನೆಗೊಂಡಿದೆ. ಈ ಶಾಲೆಯ ಶತಮಾನೋತ್ಸವ ಫೆ.೭ ರಂದು ಶನಿವಾರ ಸಂಜೆ ಗ್ರಾಮದ ಶಾಲಾ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ತಾಲೂಕಿನ ಶಾಸಕರು, ಮಾಜಿ ಶಾಸಕರುಗಳು, ದಂಡಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ಅನೇಕ ಗಣ್ಯರು, ಶಿಕ್ಷಕರು, ಹಳೆಯ ವಿದ್ಯಾರ್ಥಿ ವೃಂದ ಹಾಗೂ ಗ್ರಾಮಸ್ಥರ ಸಹಕಾರದೊಂದಿಗೆ ಕಾರ್ಯಕ್ರಮ ಜರುಗಲಿದೆ.