ಬಾಳಿಗಾ ಆಸ್ಪತ್ರೆಯಲ್ಲಿ ಮನೆಯೆ ಗ್ರಂಥಾಲಯದ 100ನೇ ಕಾರ್ಯಕ್ರಮ

| Published : Sep 05 2024, 12:36 AM IST

ಬಾಳಿಗಾ ಆಸ್ಪತ್ರೆಯಲ್ಲಿ ಮನೆಯೆ ಗ್ರಂಥಾಲಯದ 100ನೇ ಕಾರ್ಯಕ್ರಮ
Share this Article
  • FB
  • TW
  • Linkdin
  • Email

ಸಾರಾಂಶ

ಪುಸ್ತಕದಿಂದ ಬದುಕು ಬದಲಾಗಲು ಸಾಧ್ಯವಿದೆ ಎಂದು ಸಾಹಿತಿ ಡಾ. ಬಿ. ಜನಾರ್ದನ ಭಟ್‌ ತಿಳಿಸಿದರು. ಮನೆಯೆ ಗ್ರಂಥಾಲಯ ಅಭಿಯಾನದ ಶತ ಸಂಭ್ರಮ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಪುಸ್ತಕ ನೀಡುವ ಬೌದ್ಧಿಕ ಸತ್ಯದ ದರ್ಶನ ಯಾವುದೇ ಮಾಧ್ಯಮಗಳು ನೀಡಲು ಸಾಧ್ಯವಿಲ್ಲ. ಪುಸ್ತಕದಿಂದ ಬದುಕು ಬದಲಾಗಲು ಸಾಧ್ಯವಿದೆ ಎಂದು ಖ್ಯಾತ ಸಾಹಿತಿ ಡಾ. ಬಿ. ಜನಾರ್ದನ ಭಟ್ ಹೇಳಿದರು.

ಅವರು ಇಲ್ಲಿನ ದೊಡ್ಡನಗುಡ್ಡೆಯ ಡಾ. ಎ. ವಿ. ಬಾಳಿಗ ಆಸ್ಪತ್ರೆ ಸಭಾಂಗಣದಲ್ಲಿ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ವತಿಯಿಂದ ನಡೆದ ಮನೆಯೆ ಗ್ರಂಥಾಲಯ ಅಭಿಯಾನದ ಶತ ಸಂಭ್ರಮ ಕಾರ್ಯಕ್ರಮದಲ್ಲಿ ಗ್ರಂಥಾಲಯಕ್ಕೆ ಪುಸ್ತಕ ಹಸ್ತಾಂತರಿಸಿ ಮಾತನಾಡಿದರು.

ಪುಸ್ತಕ ಓದುವ ಅಭ್ಯಾಸ ಇತ್ತೀಚಿಗಿನ ಶಿಕ್ಷಣ ಕ್ರಮದಿಂದ ಕಡಿಮೆಯಾಗುತ್ತಿದೆ. ಈ ನಿಟ್ಟಿನಲ್ಲಿ ಕಸಾಪದ ಈ ಕಾರ್ಯಕ್ರಮ ಶ್ಲಾಘನೀಯ ಎಂದರು. ವಿದೇಶದಲ್ಲಿ ಯಾವುದೇ ಪುಸ್ತಕವನ್ನು ಡಿಜಿಟಲ್ ಮಾಧ್ಯಮದ ಮೂಲಕ ಕ್ಷಣಾರ್ಧದಲ್ಲಿ ಪಡೆಯುವ ವ್ಯವಸ್ಥೆ, ಇದೆ ಇದು ಕನ್ನಡದಲ್ಲಿ ಕೂಡ ನಡೆಯಬೇಕು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ಪಿ. ವಿ. ಭಂಡಾರಿ, ಮಾನಸಿಕ ಒತ್ತಡ ಕಡಿಮೆ ಮಾಡಲು ಪುಸ್ತಕ ಅತ್ಯುತ್ತಮ ಸಾಧನ ಎಂದರು.

ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಸ್ಥಾಪಕರಾದ ವಿಶ್ವನಾಥ ಶೆಣೈ ಅವರು ನೂತನ ಗ್ರಂಥಾಲಯ ಉದ್ಘಾಟಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಪೂರ್ಣಿಮಾ, ಅಧ್ಯಕ್ಷ ಪ್ರೊ. ಶಂಕರ್, ಮನೋರೋಗ ತಜ್ಞ ಡಾ. ವಿರೂಪಾಕ್ಷ ದೇವರಮನೆ, ಕಸಾಪ ಉಡುಪಿ ಜಿಲ್ಲಾ ಸಹಕಾರ್ಯದರ್ಶಿ ಮೋಹನ್ ಉಡುಪ ಉಪಸ್ಥಿತರಿದ್ದರು.

ಮನೆಯೆ ಗ್ರಂಥಾಲಯ ಅಭಿಯಾನದ ಸಂಚಾಲಕ ರಾಘವೇಂದ್ರ ಪ್ರಭು ಕರ್ವಾಲು ಅವರನ್ನು ಈ ಸಂದರ್ಭದಲ್ಲಿ ಅಭಿನಂದಿಸಲಾಯಿತು.

ಈ ಸಂದರ್ಭ ಕಸಾಪ ಉಡುಪಿ ತಾಲೂಕು ಕಾರ್ಯದರ್ಶಿ ರಂಜಿನಿ ವಸಂತ್, ಸದಸ್ಯರಾದ ಭುವನ ಪ್ರಸಾದ್ ಹೆಗ್ಡೆ, ಡಾ. ನರೇಂದ್ರ ಕುಮಾರ್, ದೀಪ ಚಂದ್ರ ಶೇಖರ್, ಹಫೀಸ್ ರೆಹಮಾನ್, ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ, ಉರಗತಜ್ಞ ಗುರುರಾಜ್ ಸನಿಲ್ ಮತ್ತಿತರರು ಉಪಸ್ಥಿತರಿದ್ದರು .

ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಎಚ್. ಪಿ. ಸ್ವಾಗತಿಸಿ ಆಶಯ ಮಾತುಗಳನ್ನಾಡಿದರು. ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿ, ಸೌಮ್ಯ ಧನ್ಯವಾದ ನೀಡಿದರು.