ದ್ವಿತೀಯ ಪಿಯುಸಿ ಪರೀಕ್ಷೆ: ಗದಗ ಜಿಲ್ಲೆಯಲ್ಲಿ ಕನ್ನಡ ಪರೀಕ್ಷೆಗೆ 10,604 ವಿದ್ಯಾರ್ಥಿಗಳು ಹಾಜರು

| Published : Mar 02 2024, 01:51 AM IST

ದ್ವಿತೀಯ ಪಿಯುಸಿ ಪರೀಕ್ಷೆ: ಗದಗ ಜಿಲ್ಲೆಯಲ್ಲಿ ಕನ್ನಡ ಪರೀಕ್ಷೆಗೆ 10,604 ವಿದ್ಯಾರ್ಥಿಗಳು ಹಾಜರು
Share this Article
  • FB
  • TW
  • Linkdin
  • Email

ಸಾರಾಂಶ

ದ್ವಿತೀಯ ಪಿಯುಸಿ ಪರೀಕ್ಷೆಗೆ ಶುಕ್ರವಾರ ಜಿಲ್ಲೆಯ 23 ಪರೀಕ್ಷಾ ಕೇಂದ್ರಗಳಲ್ಲಿ ಕನ್ನಡ ವಿಷಯದಲ್ಲಿ 10,604 ವಿದ್ಯಾರ್ಥಿಗಳು ಹಾಜರಾಗಿದ್ದು, 473 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಇನ್ನು ಯಾವುದೇ ವಿದ್ಯಾರ್ಥಿಗಳು ಡಿಬಾರ್ ಆಗಿಲ್ಲ ಎಂದು ಡಿಡಿಪಿಯು ಜಿ.ಎನ್. ಕುರ್ತಕೋಟಿ ತಿಳಿಸಿದ್ದಾರೆ.

ಗದಗ: ದ್ವಿತೀಯ ಪಿಯುಸಿ ಪರೀಕ್ಷೆಗೆ ಶುಕ್ರವಾರ ಜಿಲ್ಲೆಯ 23 ಪರೀಕ್ಷಾ ಕೇಂದ್ರಗಳಲ್ಲಿ ಕನ್ನಡ ವಿಷಯದಲ್ಲಿ 10,604 ವಿದ್ಯಾರ್ಥಿಗಳು ಹಾಜರಾಗಿದ್ದು, 473 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಇನ್ನು ಯಾವುದೇ ವಿದ್ಯಾರ್ಥಿಗಳು ಡಿಬಾರ್ ಆಗಿಲ್ಲ ಎಂದು ಡಿಡಿಪಿಯು ಜಿ.ಎನ್. ಕುರ್ತಕೋಟಿ ತಿಳಿಸಿದ್ದಾರೆ.ಶುಕ್ರವಾರ ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರ ಕನ್ನಡ ವಿಷಯ ಪರೀಕ್ಷೆ ನಡೆಯಿತು. ದ್ವಿತೀಯ ಪಿಯುಸಿ ಪರೀಕ್ಷೆ ಸುಗಮವಾಗಿ ಜರುಗಲು ಮತ್ತು ಶಿಸ್ತು, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಜಿಲ್ಲೆಯ 23 ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಪರಿಮಿತಿಯೊಳಗೆ ಪರೀಕ್ಷಾ ಸಮಯದಲ್ಲಿ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿತ್ತು. ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿರುವ ಹಿನ್ನೆಲೆಯಲ್ಲಿ ಎಸ್ಪಿ ಬಿ.ಎಸ್. ನೇಮಗೌಡ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲಿಸಿದರು. ನಂತರ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ನರೇಗಲ್ಲನಲ್ಲಿ 1510 ವಿದ್ಯಾರ್ಥಿಗಳು ಹಾಜರ್

ರಾಜ್ಯಾದ್ಯಂತ ಜರುಗಿದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಮೊದಲದಿನದ ಕನ್ನಡ ಪತ್ರಿಕೆಗೆ ನರೇಗಲ್ಲನ ಮೂರು ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 1510 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಸ್ಥಳೀಯ ಅನ್ನದಾನೇಶ್ವರ ಪ ಪೂ ಮಹಾವಿದ್ಯಾಲಯದಲ್ಲಿ ನೋಂದಾಯಿಸಲ್ಪಟ್ಟ 377 ವಿದ್ಯಾರ್ಥಿಗಳಲ್ಲಿ 153 ವಿದ್ಯಾರ್ಥಿಗಳು ಹಾಗೂ 208 ವಿದ್ಯಾರ್ಥಿನಿಯರು ಹಾಜರಾಗಿದ್ದು, 16 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಅಭಿನವ ಅನ್ನದಾನೇಶ್ವರ ಪ ಪೂ ಮಹಾವಿದ್ಯಾಲಯದಲ್ಲಿ 667 ವಿದ್ಯಾರ್ಥಿಗಳು ನೋಂದಾಯಿಸಲ್ಪಟ್ಟಿದ್ದು, ಇದರಲ್ಲಿ 285 ವಿದ್ಯಾರ್ಥಿಗಳು ಹಾಗೂ 382 ವಿದ್ಯಾರ್ಥಿನಿಯರು ಹಾಜರಾಗಿದ್ದು ಯಾವುದೇ ಗೈರು ಇರುವುದಿಲ್ಲ,

ಸ್ಥಳೀಯ ಸರಕಾರಿ ಪಪೂ ಮಹಾವಿದ್ಯಾಲಯದಲ್ಲಿ ನೋಂದಾಯಿಸಲ್ಪಟ್ಟ 509 ವಿದ್ಯಾರ್ಥಿಗಳಲ್ಲಿ 482 ವಿದ್ಯಾರ್ಥಿಗಳು ಹಾಜರಾಗಿದ್ದು, 27 ವಿದ್ಯಾರ್ಥಿಗಳು ಗೈರಾಗಿದ್ದಾರೆ.