11 ದಿನಗಳ ಮಂಗಳೂರು ದಸರಾ, ಭರದ ಸಿದ್ಧತೆ

| Published : Sep 17 2024, 12:49 AM IST

11 ದಿನಗಳ ಮಂಗಳೂರು ದಸರಾ, ಭರದ ಸಿದ್ಧತೆ
Share this Article
  • FB
  • TW
  • Linkdin
  • Email

ಸಾರಾಂಶ

ನಕ್ಷತ್ರ ಲೆಕ್ಕಾಚಾರದ ಪ್ರಕಾರ ಈ ಬಾರಿ 11 ದಿನಗಳ ಉತ್ಸವವಾಗಿದ್ದು, ಧಾರ್ಮಿಕ- ಸಾಂಸ್ಕೃತಿಕ ಕಾರ್ಯಕ್ರಮ, ಅನ್ನಸಂತರ್ಪಣೆ ಸೇರಿದಂತೆ ಪ್ರತಿಯೊಂದು ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ನಡೆಸುವ ದೃಷ್ಟಿಯಿಂದ ಅಗತ್ಯ ಪೂರ್ವಸಿದ್ಧತೆ ನಡೆಯುತ್ತಿವೆ ಎಂದು ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಎಚ್.ಎಸ್. ಸಾಯಿರಾಮ್ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಗಳೂರು

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾ ಮಹೋತ್ಸವ ಅ.3ರಿಂದ 14ರವರೆಗೆ ವೈಭವದಿಂದ ನಡೆಯಲಿದ್ದು, ಇದಕ್ಕೆ ಪೂರ್ವಸಿದ್ಧತೆಗಳು ಆರಂಭವಾಗಿವೆ. ದಸರಾ ಮಹೋತ್ಸವ ಯಶಸ್ವಿಯಾಗಿ ನಡೆಯಬೇಕಾದರೆ ಸರ್ವರ ಸಹಕಾರ ಮುಖ್ಯವಾಗಿದೆ ಎಂದು ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ಎಚ್.ಎಸ್. ಸಾಯಿರಾಮ್ ಹೇಳಿದ್ದಾರೆ.

ಕುದ್ರೋಳಿ ಕ್ಷೇತ್ರದ ಸಭಾಂಗಣದಲ್ಲಿ ನಡೆದ ದಸರಾ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ನಕ್ಷತ್ರ ಲೆಕ್ಕಾಚಾರದ ಪ್ರಕಾರ ಈ ಬಾರಿ 11 ದಿನಗಳ ಉತ್ಸವವಾಗಿದ್ದು, ಧಾರ್ಮಿಕ- ಸಾಂಸ್ಕೃತಿಕ ಕಾರ್ಯಕ್ರಮ, ಅನ್ನಸಂತರ್ಪಣೆ ಸೇರಿದಂತೆ ಪ್ರತಿಯೊಂದು ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ನಡೆಸುವ ದೃಷ್ಟಿಯಿಂದ ಅಗತ್ಯ ಪೂರ್ವಸಿದ್ಧತೆ ನಡೆಯುತ್ತಿವೆ ಎಂದರು.ಅಭಿವೃದ್ಧಿ ಸಮಿತಿ ಸದಸ್ಯ ಹರಿಕೃಷ್ಣ ಬಂಟ್ವಾಳ್ ಮಾತನಾಡಿ, ಜನರಿಂದಲೇ ಆಚರಿಸುವ ನಾಡಿನ ಏಕೈಕ ದಸರಾ ಇದು. ದೇಶದ ವಿವಿಧೆಡೆಗಳಿಂದ ಪ್ರವಾಸಿಗರು ಮಂಗಳೂರು ದಸರಾಕ್ಕೆ ಬರುತ್ತಿದ್ದು, ಅವರಿಗೆ ಸಂಪೂರ್ಣ ವ್ಯವಸ್ಥೆ ಕಲ್ಪಿಸುವಲ್ಲಿ ಎಲ್ಲರೂ ಸಹಕರಿಸಬೇಕು ಎಂದರು.ಕ್ಷೇತ್ರದ ಕಾರ್ಯದರ್ಶಿ ಮಾಧವ ಸುವರ್ಣ ಪ್ರಾಸ್ತವಿಕವಾಗಿ ಮಾತನಾಡಿದರು. ಉಪಾಧ್ಯಕ್ಷೆ ಉರ್ಮಿಳಾ ರಮೇಶ್, ದೇವಸ್ಥಾನದ ಟ್ರಸ್ಟಿಗಳಾದ ರವಿಶಂಕರ ಮಿಜಾರ್, ಶೇಖರ ಪೂಜಾರಿ, ಜಗದೀಪ್ ಡಿ. ಸುವರ್ಣ, ದೇವಸ್ಥಾನ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ದೇವೇಂದ್ರ ಪೂಜಾರಿ, ಸಹ-ಅಧ್ಯಕ್ಷೆ ಡಾ. ಅನಸೂಯ ಬಿ.ಟಿ. ಸಾಲ್ಯಾನ್, ಉಪಾಧ್ಯಕ್ಷ ಡಾ. ಬಿ.ಜಿ. ಸುವರ್ಣ, ಸದಸ್ಯರಾದ ರಾಧಾಕೃಷ್ಣ, ಎಚ್.ಎಸ್. ಜೈರಾಜ್, ಕೃತಿನ್ ಡಿ. ಅಮೀನ್, ಶೈಲೇಂದ್ರ ವೈ. ಸುವರ್ಣ, ಕೆ. ಚಿತ್ತರಂಜನ್ ಗರೋಡಿ, ರಾಮನಾಥ್ ಕಾರಂದೂರು, ಲೀಲಾಕ್ಷ ಕರ್ಕೇರಾ, ಚಂದನ್‌ದಾಸ್, ಪಿ.ಕೆ. ಗೌರವಿ ರಾಜಶೇಖರ್, ಕಿಶೋರ್ ದಂಡೆಕೇರಿ, ವಾಸುದೇವ ಕೋಟ್ಯಾನ್ ಇದ್ದರು.---------------

ಡಿಜೆ, ನಾಸಿಕ್‌ ಬ್ಯಾಂಡ್‌ ಗೆ ಅವಕಾಶವಿಲ್ಲ: ಪದ್ಮರಾಜ್ಮಂಗಳೂರು: ಕ್ಷೇತ್ರದ ನವೀಕರಣದ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಮಾರ್ಗದರ್ಶನದಲ್ಲಿ ಈ ಬಾರಿಯೂ ಮಂಗಳೂರು ದಸರಾ ಮಹೋತ್ಸವ ನಡೆಯಲಿದೆ. ಈ ಬಾರಿ ಡಿಜೆ, ನಾಸಿಕ್‌ ಬ್ಯಾಂಡ್‌ಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಲಾಗುವುದಿಲ್ಲ ಎಂದು ಕೋಶಾಧಿಕಾರಿ ಪದ್ಮರಾಜ್ ಹೇಳಿದರು.ದಸರಾ ಶೋಭಾಯಾತ್ರೆಯಲ್ಲಿ ನಮ್ಮ ನೆಲದ ಸಂಸ್ಕೃತಿ, ಪರಂಪರೆಗೆ ಹಾನಿಯಾಗುವ ಯಾವುದೇ ಟ್ಯಾಬ್ಲೊ, ಪ್ರದರ್ಶನಕ್ಕೆ ಅವಕಾಶವಿಲ್ಲ. ಟ್ಯಾಬ್ಲೋದಲ್ಲಿ ಭಾಗವಹಿಸುವ ತಂಡಗಳು ಪ್ರದರ್ಶನದ ಸ್ಕ್ರಿಪ್ಟ್ ಮುಂಚಿತವಾಗಿ ನೀಡಿ ಅನುಮತಿ ಪಡೆದುಕೊಳ್ಳಬೇಕು ಎಂದರು.