ಸಾರಾಂಶ
ಹೊದ್ದೂರು ಗ್ರಾಮದ ಸರ್ಕಾರಿ ಜಾಗದಲ್ಲಿ ಒತ್ತುವರಿ ತೆರವುಗೊಳಿಸಿ ನಿವೇಶನ ರಹಿತರಿಗೆ ನಿವೇಶನ ಕೊಡಿಸುವಂತೆ ಆಗ್ರಹಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಪದಾಧಿಕಾರಿಗಳು ಹೊದ್ದೂರು ಗ್ರಾಮದ ಪೆಗ್ಗೋಳಿ ಎಂಬಲ್ಲಿ ನಡೆಸುತ್ತಿರುವ ಧರಣಿ ಮಂಗಳವಾರ 11ನೇ ದಿನ ಪೂರೈಸಿದೆ.
ಕನ್ನಡಪ್ರಭ ವಾರ್ತೆ ನಾಪೋಕ್ಲು
ಹೊದ್ದೂರು ಗ್ರಾಮದ ಸರ್ಕಾರಿ ಜಾಗದಲ್ಲಿ ಒತ್ತುವರಿ ತೆರವುಗೊಳಿಸಿ ನಿವೇಶನ ರಹಿತರಿಗೆ ನಿವೇಶನ ಕೊಡಿಸುವಂತೆ ಆಗ್ರಹಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಪದಾಧಿಕಾರಿಗಳು ಹೊದ್ದೂರು ಗ್ರಾಮದ ಪೆಗ್ಗೋಳಿ ಎಂಬಲ್ಲಿ ನಡೆಸುತ್ತಿರುವ ಧರಣಿ ಮಂಗಳವಾರ 11ನೇ ದಿನ ಪೂರೈಸಿದೆ.ಹೋರಾಟದ ನೇತೃತ್ವ ವಹಿಸಿರುವ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಜಿಲ್ಲಾ ಕಾರ್ಯದರ್ಶಿ ಮೊಣ್ಣಪ್ಪ ಮಾತನಾಡಿ, ಮಡಿಕೇರಿ ಶಾಸಕ ಸ್ಥಳಕ್ಕೆ ಆಗಮಿಸಿ ನಿವೇಶನಾ ರಹಿತರ ಸಮಸ್ಯೆ ಪರಿಹರಿಸಿಕೊಡುವಂತೆ ಒತ್ತಾಯಿಸಿದರು.
ಹೊದ್ದೂರು ಗ್ರಾಮದಲ್ಲಿ 800ಕ್ಕೂ ಅಧಿಕ ನಿರಾಶ್ರಿತ ಬಡ ಕುಟುಂಬಗಳಿಗೆ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಹಾಗೂ ಇನ್ನಿತರ ಹಿಂದುಳಿದ ವರ್ಗಗಳಿಗೆ ಸಿಗಬೇಕಾದ ಸರ್ಕಾರಿ ಕಂದಾಯ ಭೂಮಿ ಒತ್ತುವರಿಯಾಗಿದೆ. ಇದುವರೆಗೂ ಬಡವರಿಗೆ ನಿವೇಶನ ಸರ್ಕಾರ ನೀಡಲು ಮುಂದಾಗಿರುವುದಿಲ್ಲ ಎಂದು ಅವರು ಆರೋಪಿಸಿದರು.ಹೊದ್ದೂರು ಗ್ರಾಮದ ಸರ್ವೆ ನಂ. 53/10 49/3 ಮತ್ತು 88/4 ರಲ್ಲಿ ನಿವೇಶನ ಕಲ್ಪಿಸಿ ಕೊಡುವಂತೆ ಒತ್ತಾಯಿಸಿದರು.ಹೊದ್ದೂರು ಗ್ರಾಮ ಪಂಚಾಯಿತಿಗೆ ಒಳಪಟ್ಟ ಹಲವು ನಿವೇಶನಾ ರಹಿತರು ಹೋರಾಟದಲ್ಲಿ ಪಾಲ್ಗೊಂಡಿದ್ದರು.
ಕಾಂಗ್ರೆಸ್ ಪದಾಧಿಕಾರಿ ಬೋಜ ಸತೀಶ್, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಪದಾಧಿಕಾರಿಗಳಾದ ಕಿರಣ್, ಜಗದೀಶ, ಮಹಮ್ಮದ್ , ಮಾದೇಶ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ಕುಸುಮಾವತಿ, ಲೋಕೇಶ್, ಸುಜಾತ, ಮೋಹನ್, ಆನಂದ, ಸೌಮ್ಯ ಮತ್ತಿತರರು ಪಾಲ್ಗೊಂಡಿದ್ದರು.