ಸಾರಾಂಶ
ಕನ್ನಡ ಭಾಷೆ ತನ್ನದೇಯಾದ ಇತಿಹಾಸ ಹೊಂದಿದೆ. ಆಂಗ್ಲ ಭಾಷೆ ವ್ಯಾಮೋಹದಿಂದ ಕನ್ನಡ ಶಾಲೆಗಳು ಮುಚ್ಚುವ ಸ್ಥಿತಿಗೆ ಬಂದಿರುವುದು ಆತಂಕ ತಂದಿದೆ. ವೈವಿಧ್ಯತೆಯಲ್ಲಿ ಏಕತೆ ಹೊಂದಿರುವ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿ.
ಕನ್ನಡಪ್ರಭವಾರ್ತೆ ಶ್ರೀರಂಗಪಟ್ಟಣ
ಕನ್ನಡ ಸಾಹಿತ್ಯ ಪರಿಷತ್ತಿನ 111ನೇ ಸಂಸ್ಥಾಪಕ ದಿನಾಚರಣೆಯನ್ನು ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಆಚರಿಸಲಾಯಿತು.ತಾಲೂಕಿನ ಬಲ್ಲೇನಹಳ್ಳಿ ಗ್ರಾಪಂ ಆವರಣದಲ್ಲಿ ಗ್ರಾಮೀಣ ಮಕ್ಕಳ ಉಚಿತ ಬೇಸಿಗೆ ಶಿಬಿರದಲ್ಲಿ ಗಮ್ಯ ಸಂಸ್ಥಾಪಕ ಹಾಗೂ ನಿರ್ದೇಶಕ ಚ.ನಾರಾಯಣಸ್ವಾಮಿ ಚಾಲನೆ ನೀಡಿ ಮಾತನಾಡಿ, ಕನ್ನಡ ಭಾಷೆ ಉಳಿವು, ಬೆಳವಣಿಗೆ ಪರಂಪರೆಯನ್ನು ಜಗತ್ತಿನಾದ್ಯಂತ ಪಸರಿಸಲು ಮೈಸೂರು ಮಹಾರಾಜ ಶ್ರೀನಾಲ್ವಡಿ ಕೃಷ್ಣರಾಜ ಒಡೆಯರಿಂದ ಕನ್ನಡ ಸಾಹಿತ್ಯ ಪರಿಷತ್ತು ಸ್ಥಾಪನೆಗೊಂಡಿದೆ ಎಂದರು.
ತಾಲೂಕು ಘಟಕದ ಅಧ್ಯಕ್ಷ ಸಿದ್ದಲಿಂಗು ಮಾತನಾಡಿ, ಕನ್ನಡ ಭಾಷೆ ತನ್ನದೇಯಾದ ಇತಿಹಾಸ ಹೊಂದಿದೆ. ಆಂಗ್ಲ ಭಾಷೆ ವ್ಯಾಮೋಹದಿಂದ ಕನ್ನಡ ಶಾಲೆಗಳು ಮುಚ್ಚುವ ಸ್ಥಿತಿಗೆ ಬಂದಿರುವುದು ಆತಂಕ ತಂದಿದೆ. ವೈವಿಧ್ಯತೆಯಲ್ಲಿ ಏಕತೆ ಹೊಂದಿರುವ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸುವುದು ಪ್ರತಿಯೊಬ್ಬರ ಜವಾಬ್ದಾರಿ ಎಂದರು.ಈ ವೇಳೆ ಕೆ.ಶೆಟ್ಟಹಳ್ಳಿ ಹೋಬಳಿ ಘಟಕ ಅಧ್ಯಕ್ಷ ಕೆ.ಜೆ ಲೋಕೇಶ್, ಪಿಡಿಒ ಸುರೇಶ್ ಕುಮಾರ್, ಯೋಗ ತರಬೇತಿದಾರ ಅಪ್ಪಾಜಿ, ಕಾರ್ಯದರ್ಶಿ ಸ್ವಾಮಿಗೌಡ, ಸಂಘಟನಾ ಕಾರ್ಯದರ್ಶಿ ಉಮಾಶಂಕರ್, ಕೂಡಲಕುಪ್ಪೆ ಸೋಮಶೇಖರ್, ಗಂಜಾಂ ಸುರೇಶ್, ಪ್ರಕೃತಿ ಸಂಜೀವಿನಿ ಮಹಿಳಾ ಒಕ್ಕೂಟದ ಮುಖ್ಯ ಬರಹಗಾರ್ತಿ ಮಮತ ಸೇರಿದಂತೆ ಇತರರು ಹಾಜರಿದ್ದರು.
ಇದೇ ವೇಳೆ ಗಮ್ಯ ಸಂಸ್ಥಾಪಕ ಚ. ನಾರಾಯಣಸ್ವಾಮಿ ಹಾಗೂ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪುರಸ್ಕೃತ ಗ್ರಂಥಪಾಲಕ ಕೂಡಲಕುಪ್ಪೆ ಸೋಮಶೇಖರ್ ಅವರನ್ನು ಸನ್ಮಾನಿಸಲಾಯಿತು.ಮೇ 19 ರಂದು ಪ್ರಗತಿ ಪರಿಶೀಲನಾ ಸಭೆ
ಮಂಡ್ಯ: ಮಂಡ್ಯ ಕ್ಷೇತ್ರದ ಶಾಸಕ ಪಿ.ರವಿಕುಮಾರ್ ಅಧ್ಯಕ್ಷತೆಯಲ್ಲಿ 2024-25ನೇ ಸಾಲಿನ ಮಾರ್ಚ್ ಅಂತ್ಯದವರೆಗಿನ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಮೇ 19ರಂದು ಜಿಪಂ ಕಾವೇರಿ ಸಭಾಂಗಣದಲ್ಲಿ ನಡೆಯಲಿದೆ. ಸಭೆಗೆ ಅಧಿಕಾರಿಗಳು ಬೇರೆ ಸಿಬ್ಬಂದಿಯನ್ನು ನಿಯೋಜಿಸದೆ ಖುದ್ದು ಅಗತ್ಯ ಮಾಹಿತಿಗಳೊಂದಿಗೆ ಹಾಜರಾಗಲು ತಿಳಿಸಲಾಗಿದೆ. ಸದರಿ ಸಭೆಗೆ ಅಧಿಕಾರಿಗಳು ತಮ್ಮ ಇಲಾಖೆಗೆ ಸಂಬಂಧಪಟ್ಟ 20 ಅಂಶಗಳ ಕಾರ್ಯಕ್ರಮಗಳ ವರದಿಯೊಂದಿಗೆ ಇತರ ಪ್ರಗತಿ ವರದಿಯ 30 ಧೃಢೀಕೃತ ಪ್ರತಿಗಳನ್ನು ಮೇ 12ರ ಸಂಜೆಯೊಳಗಾಗಿ ಮುದ್ದಾಂ ಹಾಗೂ ಸ್ಟಾಂಪ್ ಕಾಫಿಯನ್ನು ತಾಪಂ ಕಾರ್ಯಾಲಯ ಕಚೇರಿಯ ಇ-ಮೇಲ್ ವಿಳಾಸವಾದ eotpmandya@gmail.com ಕಳುಹಿಸಲು ತಿಳಿಸಿದ್ದಾರೆ.;Resize=(128,128))
;Resize=(128,128))