ಶ್ರೀ ಬೆಕ್ಕಿನಕಲ್ಮಠದ ಗುರುಬಸವ ಭವನದಲ್ಲಿ ಜ.3ರಿಂದ 5ರವರೆಗೆ ಪರಮ ತಪಸ್ವಿ ಲಿಂ.ಜಗದ್ಗುರು ಶ್ರೀ ಗುರುಬಸವ ಮಹಾಸ್ವಾಮಿಗಳವರ 114ನೇ ಪುಣ್ಯಸ್ಮರಣೋತ್ಸವ, 556ನೇ ಶಿವಾನುಭವಗೋಷ್ಠಿ, ಪ್ರಶಸ್ತಿ ಪ್ರಧಾನ ಸಮಾರಂಭ, ಶರಣ ಸಾಹಿತ್ಯ ಸಮ್ಮೇಳನ ಹಾಗೂ ಭಾವೈಕ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಬೆಕ್ಕಿನಕಲ್ಮಠದ ಡಾ.ಶ್ರೀ ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಸ್ವಾಮೀಜಿ ತಿಳಿಸಿದರು.
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಶ್ರೀ ಬೆಕ್ಕಿನಕಲ್ಮಠದ ಗುರುಬಸವ ಭವನದಲ್ಲಿ ಜ.3ರಿಂದ 5ರವರೆಗೆ ಪರಮ ತಪಸ್ವಿ ಲಿಂ.ಜಗದ್ಗುರು ಶ್ರೀ ಗುರುಬಸವ ಮಹಾಸ್ವಾಮಿಗಳವರ 114ನೇ ಪುಣ್ಯಸ್ಮರಣೋತ್ಸವ, 556ನೇ ಶಿವಾನುಭವಗೋಷ್ಠಿ, ಪ್ರಶಸ್ತಿ ಪ್ರಧಾನ ಸಮಾರಂಭ, ಶರಣ ಸಾಹಿತ್ಯ ಸಮ್ಮೇಳನ ಹಾಗೂ ಭಾವೈಕ್ಯ ಸಮ್ಮೇಳನವನ್ನು ಆಯೋಜಿಸಲಾಗಿದೆ ಎಂದು ಬೆಕ್ಕಿನಕಲ್ಮಠದ ಡಾ.ಶ್ರೀ ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಸ್ವಾಮೀಜಿ ತಿಳಿಸಿದರು.ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 2007ರಿಂದ ಪ್ರತಿ ವರ್ಷ ಸಮ್ಮೇಳನದಲ್ಲಿ ನೀಡಲಾಗುವ ಗುರುಬಸವಶ್ರೀ ಪ್ರಶಸ್ತಿಯನ್ನು ಸಂಸದ ಬಿ.ವೈ.ರಾಘವೇಂದ್ರ ಹಾಗೂ 2017ರಿಂದ ಪ್ರತೀ ವರ್ಷ ನೀಡಲಾಗುತ್ತಿರುವ ಅಕ್ಕಮಹಾದೇವಿ ಪ್ರಶಸ್ತಿಯನ್ನು ಕಲಬುರ್ಗಿಯ ಸಾಹಿತಿ ಡಾ.ಜಯಶ್ರೀ ದಂಡೆ ಇವರಿಗೆ ನೀಡಲಾಗುತ್ತಿದೆ ಎಂದರು.
ಜ.3ರಂದು ಬೆಳಗ್ಗೆ 10ಗಂಟೆಗೆ ಡಾ.ನಾಗೇಶ್ ಸುವರ್ಣ ಕವಿ ಆಯುರ್ವೇದ ಆಸ್ಪತ್ರೆಯ ಮುರುಘಾಮಠ ಹಾಗೂ ವಾಸನ್ ಐ ಕೇರ್ ಇವರ ಸಹಯೋಗದಲ್ಲಿ ಉಚಿತ ಆರೋಗ್ಯ ತಪಾಸಣೆ ಮತ್ತು ವಚನ ಗಾಯನ ಸ್ಪರ್ಧೆಗಳು ನಡೆಯಲಿದ್ದು, ಬಸವಕೇಂದ್ರದ ಡಾ.ಬಸವ ಮರುಳಸಿದ್ಧ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಸಂಜೆ 4 ಗಂಟೆಗೆ 114 ಮಹಿಳೆಯರಿಂದ ವಚನ ಗಾಯನವಿದೆ ಎಂದರು.ಸಂಜೆ ೫ಗಂಟೆಗೆ ೫೫೬ನೇ ಶಿವಾನುಭವ ಗೋಷ್ಠಿ, ಗುರುಬಸವಶ್ರೀ ಹಾಗೂ ಅಕ್ಕಮಹಾದೇವಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಕನಕಪುರ ದೇಗುಲಮಠದ ಶ್ರೀ ಚನ್ನಬಸವೇಶ್ವರ ಮಹಾಸ್ವಾಮೀಜಿ ಸಮಾರಂಭ ಉದ್ಘಾಟಿಸಲಿದ್ದು, ಸಂಸದ ಬಿ.ವೈ.ರಾಘವೇಂದ್ರ ಹಾಗೂ ಡಾ.ಜಯಶ್ರೀ ದಂಡೆ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಶಾಸಕ ಎಸ್.ಎನ್.ಚನ್ನಬಸಪ್ಪ, ಶ್ರೀ ಮಠದ ದಿನದರ್ಶಿಕೆ ಬಿಡುಗಡೆ ಮಾಡುವರು. ಮುಖ್ಯ ಅತಿಥಿಯಾಗಿ ಶಾಸಕರಾದ ಆರಗ ಜ್ಞಾನೇಂದ್ರ, ಎಸ್.ಎಲ್.ಭೋಜೇಗೌಡ, ಡಿ.ಎಸ್.ಅರುಣ್, ಡಾ. ಧನಂಜಯ ಸರ್ಜಿ, ಮಾಜಿ ಶಾಸಕ ಎಸ್.ರುದ್ರೇಗೌಡ, ಬಸವೇಶ್ವರ ವೀರಶೈವ ಸಮಾಜದ ಅಧ್ಯಕ್ಷ ಎಸ್.ಎಸ್. ಜ್ಯೋತಿ ಪ್ರಕಾಶ್ ಆಗಮಿಸಲಿದ್ದಾರೆ ಎಂದರು.
ಜ.೪ರ ಬೆಳಿಗ್ಗೆ ೧೦ಗಂಟೆಗೆ ನಡೆಯುವ ರಂಗೋಲಿ ಹಾಗೂ ಜನಪದ ಗೀತೆಗಳ ಸ್ಪರ್ಧೆಯನ್ನು ಹಾನಗಲ್‌ನ ವಿರಕ್ತಮಠದ ಶ್ರೀ ಶಿವಯೋಗಿ ಮಹಾಸ್ವಾಮಿಗಳು ಉದ್ಘಾಟಿಸಲಿದ್ದು, ತಾಳಗುಪ್ಪದ ಶ್ರೀ ಕೂಡಲಿ ಮಠದ ಶ್ರೀ ಸಿದ್ಧವೀರಮಹಾಸ್ವಾಮೀಜಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.ಸಂಜೆ ೫ಗಂಟೆಗೆ ನಡೆಯುವ ಶರಣ ಸಾಹಿತ್ಯ ಸಮ್ಮೇಳನ ಮತ್ತು ಅಲ್ಲಮಪ್ರಭು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಉದ್ಘಾಟಿಸಲಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪುಸ್ತಕ ಬಿಡುಗಡೆ ಮಾಡುವರು. ಮುಖ್ಯ ಅತಿಥಿಯಾಗಿ ಶಾಸಕರಾದ ಬಿ.ಕೆ.ಸಂಗಮೇಶ್ವರ್, ಗೋಪಾಲಕೃಷ್ಣ ಬೇಳೂರು, ಬಲ್ಕೀಷ್‌ಬಾನು, ಮಾಜಿ ಶಾಸಕರಾದ ಆಯನೂರು ಮಂಜುನಾಥ್, ಹೆಚ್.ಎಂ.ಚಂದ್ರಶೇಖರಪ್ಪ, ಸೂಡಾ ಅಧ್ಯಕ್ಷ ಹೆಚ್.ಎಸ್.ಸುಂದರೇಶ್, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಎಸ್.ಕೆ.ಮರಿಯಪ್ಪ, ನಿರ್ದೇಶಕ ಎಂ.ಶ್ರೀಕಾಂತ್ ಇನ್ನಿತರರು ಆಗಮಿಸಲಿದ್ದು, ಈ ಸಮಾರಂಭದಲ್ಲಿ ಬೆಂಗಳೂರು ವಿವಿ ಕನ್ನಡ ಅಧ್ಯಯನ ಕೇಂದ್ರದ ಹಿರಿಯ ಪ್ರಾಧ್ಯಾಪಕ ಡಾ.ಸಿ.ನಾಗಭೂಷಣ್ ಇವರಿಗೆ ಅಲ್ಲಮ ಪ್ರಭು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.
ಜ.5ರಂದು ಬೆಳಗ್ಗೆ 7ಕ್ಕೆ ಸಾಮೂಹಿಕ ಇಷ್ಟಲಿಂಗ ಮಹಾಪೂಜೆ ಮತ್ತು ಪೂಜ್ಯ ಜಗದ್ಗುರುಗಳಾದ ಶೂನ್ಯ ಪೀಠಾರೋಹಣ ನಡೆಯಲಿದ್ದು, ಹುಣಸೇಘಟ್ಟದ ಶ್ರೀ ಗುರುಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ, ವಿವಿಧ ಮಠಗಳ ಶ್ರೀಗಳ ಸಮ್ಮುಖದಲ್ಲಿ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ನವಲಗುಂದದ ಗವಿಮಠದ ಶ್ರೀ ಬಸವಲಿಂಗ ಮಹಾಸ್ವಾಮೀಜಿ ವಹಿಸಲಿದ್ದಾರೆ. ಸಂಜೆ 4.30ರಿಂದ ನಡೆಯುವ ಶ್ರೀಗಳ 114ನೇ ಪುಣ್ಯಸ್ಮರಣೆ ಹಾಗೂ ಭಾವೈಕ್ಯ ಸಮ್ಮೇಳನವನ್ನು ಧಾರವಾಡದ ಮುರುಘಾಮಠದ ಶ್ರೀ ಮಲ್ಲಿಕಾರ್ಜುನ ಮಹಾಸ್ವಾಮೀಜಿಗಳ ಸಮ್ಮುಖದಲ್ಲಿ ಸಚಿವ ಎಚ್.ಕೆ.ಪಾಟೀಲ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಯಾಗಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಶಾಸಕರಾದ ಡಿ.ಎಸ್.ಅರುಣ್, ಶಾರದಾಪೂರ್‍ಯನಾಯ್ಕ್, ಕಾಡಾ ಅಧ್ಯಕ್ಷ ಅಂಶುಮಂತ್, ಶಿಮುಲ್ ಅಧ್ಯಕ್ಷ ವಿದ್ಯಾಧರ ಕಾರಗಡಿ, ರಾಜ್ಯಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ಮೊದಲಾದವರು ಆಗಮಿಸಲಿದ್ದಾರೆ ಎಂದರು.ಇದೇ ಮೊದಲ ಬಾರಿಗೆ ನೀಡಲಾಗುತ್ತಿರುವ ಭಾವೈಕ್ಯತಾ ಪ್ರಶಸ್ತಿಯನ್ನು ಶಿವಮೊಗ್ಗದ ಗಾಂಧಿ ಬಸಪ್ಪ ಮತ್ತು ಹಳದಮ್ಮ ಪ್ರತಿಷ್ಠಾನಕ್ಕೆ ನೀಡಲಾಗುವುದು, ಭಾವೈಕ್ಯ ವಿಷಯ ಕುರಿತು ಧಾರಾವಾಡದ ಚಿಂತಕ ಮಹೇಶ್ ಮಾಶಾಲ್ ಉಪನ್ಯಾಸ ನೀಡಲಿದ್ದಾರೆ ಎಂದರು.
ಗೋಷ್ಠಿಯಲ್ಲಿ ಸ್ಮರಣೋತ್ಸವ ಸಮಿತಿ ಅಧ್ಯಕ್ಷ ಕೆ.ಎನ್.ತಾರಾನಾಥ್, ಪ್ರಧಾನ ಕಾರ್ಯದರ್ಶಿ ಎಸ್.ಎನ್.ಮಹಾಲಿಂಗಯ್ಯ ಶಾಸ್ತ್ರಿ, ಖಜಾಂಚಿ ಹರ್ಷ ರುದ್ರೇಗೌಡ, ಪ್ರಮುಖರಾದ ಎಚ್.ಸಿ.ಯೋಗೀಶ್, ಎಸ್.ಎಸ್. ಜ್ಯೋತಿಪ್ರಕಾಶ್, ಶಾಂತಾ ಆನಂದ್, ಚಂದ್ರಶೇಖರಯ್ಯ, ಅನಿತಾ ರವಿಶಂಕರ್, ವಿವಿಧ ಸಮಿತಿ ಅಧ್ಯಕ್ಷರಾದ ಪುಷ್ಪ ಹಾಲಪ್ಪ, ವಿ.ಟಿ.ಅರುಣ್, ನಾಗರತ್ನ ಚಂದ್ರಶೇಖರ್, ಟಿ.ಎಸ್.ಸಿದ್ದೇಶ್, ಬಿ.ಶಿವರಾಜ್, ಸಂಚಾಲಕ ಡಾ.ವಿದ್ವಾನ್ ರೇಣುಕಾರಾಧ್ಯ, ಕಿರಣ್ ದೇಸಾಯಿ ಉಪಸ್ಥಿತರಿದ್ದರು.