ಹಾವೇರಿ: ಪಿಯುಸಿ ವಾರ್ಷಿಕ ಪರೀಕ್ಷೆ ಮೊದಲ ದಿನ ಜರುಗಿದ ಕನ್ನಡ ವಿಷಯದ ಪರೀಕ್ಷೆಗೆ ಒಟ್ಟು 11,928 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದರು. ಈ ಪೈಕಿ 11,520 ವಿದ್ಯಾರ್ಥಿಗಳು ಹಾಜರಾಗಿದ್ದು, 408 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಶೇ.96.58ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಶೋಕ ಶಾಸ್ತ್ರೀ ತಿಳಿಸಿದ್ದಾರೆ. 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಹಿನ್ನೆಲೆ ಜಿಲ್ಲೆಯ 25 ಪರೀಕ್ಷಾ ಕೇಂದ್ರಗಳಲ್ಲಿ ಶನಿವಾರ ಮೊದಲ ದಿನ ಕನ್ನಡ ಭಾಷೆಯ ಪರೀಕ್ಷೆ ಸುಗಮವಾಗಿ ನಡೆಯಿತು. ಪರೀಕ್ಷಾ ಕೇಂದ್ರದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಸಿಸಿ ಟಿವಿಯನ್ನು ಅಳವಡಿಸಲಾಗಿತ್ತು. ಜಿಲ್ಲಾ ಪಂಚಾಯಿತಿಯಲ್ಲಿ ವೆಬ್‌ಕಾಸ್ಟಿಂಗ್ ವ್ಯವಸ್ಥೆ ಮಾಡಲಾಗಿತ್ತು. ವಿದ್ಯಾರ್ಥಿಗಳಿಗೆ ಪರೀಕ್ಷಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಲಹೆ ನೀಡಲಾಗಿತ್ತು. ಪರೀಕ್ಷೆ ಹಿನ್ನೆಲೆ ಪರೀಕ್ಷಾ ಕೊಠಡಿಗಳಲ್ಲಿ ಸ್ವಚ್ಛತೆ, ಗಡಿಯಾರ, ಫ್ಯಾನ್, ಬೆಳಕಿನ ವ್ಯವಸ್ಥೆ, ಕುಡಿಯುವ ನೀರು ಹಾಗೂ ಶೌಚಾಲಯ ಸೇರಿದಂತೆ ಮೂಲಭೂತ ಸೌಕರ್ಯ ಕಲ್ಪಿಸಲಾಗಿತ್ತು. ಮೊಬೈಲ್, ರಿಸ್ಟ್ ವಾಚ್, ಬ್ಲೂಟೂತ್, ಪೇಜರ್, ವೈರಲೆಸ್ ಸೆಟ್‌ಗಳನ್ನು ನಿಷೇಧಿಸಲಾಗಿತ್ತು. ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್‌ವರೆಗೆ ನಿಷೇಧಾಜ್ಞೆ ಹೊರಡಿಸಲಾಗಿತ್ತು. ಝರಾಕ್ಸ್ ಹಾಗೂ ಸೈಬರ್ ಕೆಫೆಗಳನ್ನು ಮುಚ್ಚಿಸಲಾಗಿತ್ತು. ಪರೀಕ್ಷಾ ಕೇಂದ್ರದ ಹೊರ ಆವರಣದಲ್ಲಿ ಯಾವುದೇ ಅಹಿತಕರ ಚಟುವಟಿಕೆ ನಡೆಯದಂತೆ ನಿಗಾವಹಿಸಲು ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿತ್ತು.ಪ್ರತಿ ತಾಲೂಕಿಗೂ ನೇಮಿಸಿದ ತಹಸೀಲ್ದಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಪ್ರಿನ್ಸಿಪಾಲ್ ಒಳಗೊಂಡ ತ್ರಿ ಸದಸ್ಯ ಸಮಿತಿಯು ಪೊಲೀಸ್ ಬಂದೋಬಸ್ತ್‌ನಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಆಯಾ ತಾಲೂಕಿಗೆ ತೆಗೆದುಕೊಂಡು ಹೋಗಿ ನಿಗದಿತ ಸಮಯದೊಳಗೆ ಪರೀಕ್ಷಾ ಕೇಂದ್ರವನ್ನು ತಲುಪಿಸಿದರು. ಬೆಳಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆದ ಪರೀಕ್ಷೆಯು ಸುಸೂತ್ರವಾಗಿ ನಡೆಯಿತು.
ದ್ವಿತೀಯ ಪಿಯು ಪರೀಕ್ಷೆಗೆ 11,520 ವಿದ್ಯಾರ್ಥಿಗಳು ಹಾಜರ್
ಪಿಯುಸಿ ವಾರ್ಷಿಕ ಪರೀಕ್ಷೆ ಮೊದಲ ದಿನ ಜರುಗಿದ ಕನ್ನಡ ವಿಷಯದ ಪರೀಕ್ಷೆಗೆ ಒಟ್ಟು 11,928 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದರು. ಈ ಪೈಕಿ 11,520 ವಿದ್ಯಾರ್ಥಿಗಳು ಹಾಜರಾಗಿದ್ದು, 408 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಶೇ.96.58ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದಾರೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಶೋಕ ಶಾಸ್ತ್ರೀ ತಿಳಿಸಿದ್ದಾರೆ.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.