೩೯೯ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ೧೧ ವಿದ್ಯಾರ್ಥಿಗಳು ಗೈರು

ಕನಕಗಿರಿ: ಪಟ್ಟಣದ ಮೂರು ಪರೀಕ್ಷಾ ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭಗೊಂಡಿದ್ದು, ೧೧೭೦ ವಿದ್ಯಾರ್ಥಿಗಳು ಪ್ರಥಮ ಭಾಷಾ ಪರೀಕ್ಷೆ ಬರೆದಿದ್ದು, ೨೦ ವಿದ್ಯಾರ್ಥಿಗಳು ಗೈರಾಗಿದ್ದರು.

ಕರ್ನಾಟಕ ಪಬ್ಲಿಕ್ ಶಾಲೆಯ ಪರೀಕ್ಷಾ ಕೇಂದ್ರ ಸಂಖ್ಯೆ೧ಕ್ಕೆ ಒಟ್ಟು ೪೧೦ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದ್ದು, ೩೯೯ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ೧೧ ವಿದ್ಯಾರ್ಥಿಗಳು ಗೈರಾಗಿದ್ದಾರೆ.

ಗೈರಾದ ೧೧ ವಿದ್ಯಾರ್ಥಿಗಳ ಪೈಕಿ ೧೦ ಕನ್ನಡ ಭಾಷಾ ಹಾಗೂ ಓರ್ವ ಆಂಗ್ಲ ಭಾಷಾ ವಿದ್ಯಾರ್ಥಿಯಾಗಿದ್ದಾನೆ ಎಂದು ಕೇಂದ್ರದ ಅಧೀಕ್ಷಕ ಜಗದೀಶ ಹಾದಿಮನಿ ತಿಳಿಸಿದರು.

ಕರ್ನಾಟಕ ಪಬ್ಲಿಕ್ ಶಾಲೆಯ ಪರೀಕ್ಷಾ ಕೇಂದ್ರ ಸಂಖ್ಯೆ ೨ರಲ್ಲಿ ೪೬೯ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅವಕಾಶ ಮಾಡಿಕೊಡಲಾಗಿದ್ದು, ೪೬೩ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಇದರಲ್ಲಿ ಕನ್ನಡ ಭಾಷೆಗೆ ೪೩೨ ವಿದ್ಯಾರ್ಥಿಗಳು, ಓರ್ವ ಉರ್ದು ಹಾಗೂ ೩೦ ವಿದ್ಯಾರ್ಥಿಗಳು ಆಂಗ್ಲ ಭಾಷೆಯ ಪರೀಕ್ಷೆ ಬರೆದಿದ್ದಾರೆ ಎಂದು ಕೇಂದ್ರದ ಮುಖ್ಯಸ್ಥ ಚಂದುಸಾಬ ತಿಳಿಸಿದರು.

ಇನ್ನೂ ಶ್ರೀ ರುದ್ರಸ್ವಾಮಿ ಅನುದಾನಿತ ಪ್ರೌಢ ಶಾಲೆ ಪರೀಕ್ಷಾ ಕೇಂದ್ರದಲ್ಲಿ ೩೧೧ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರವಾಗಿದೆ. ಈ ಪೈಕಿ ೩೧೧ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಮೂವರು ಗೈರಾಗಿದ್ದಾರೆ. ಇದರಲ್ಲಿ ೨೮೮ ಕನ್ನಡ ಮಾಧ್ಯಮ ಹಾಗೂ ೨೦ ವಿದ್ಯಾರ್ಥಿಗಳು ಆಂಗ್ಲ ಭಾಷೆಯನ್ನು ಎದುರಿಸಿದ್ದಾರೆ ಎಂದು ಪರೀಕ್ಷಾ ಕೇಂದ್ರದ ಮುಖ್ಯಸ್ಥ ಬಸವರಾಜ ಪಾಟೀಲ್ ತಿಳಿಸಿದರು.

ಎಸ್ಸೆಸ್ಸೆಲ್ಸಿ ಪರೀಕ್ಷಾ ವಿಚಕ್ಷಣಾ ದಳದ ಮುಖ್ಯಸ್ಥ ವೆಂಕಟೇಶ ಗೌಡ್ರು, ಜಾಗೃತ ಸ್ಥಾನಿಕದಳ ಮುಖ್ಯಸ್ಥ ಸಿದ್ದನಗೌಡ, ತಾ.ಪಂ ಇಒ ರಾಜಶೇಖರ ಪರೀಕ್ಷಾ ಕೊಠಡಿಗಳಿಗೆ ತೆರಳಿ ಪರಿಶೀಲಿಸಿದರು. ಪರೀಕ್ಷಾ ಕೇಂದ್ರದ ಸುತ್ತಲೂ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಆರೋಗ್ಯ ಇಲಾಖೆಯ ಸಿಬ್ಬಂದಿ ನಿಯೋಜಿಸಲಾಗಿತ್ತು.

ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಗದೀಶ ಹಾದಿಮನಿ, ಸಮೂಹ ಸಂಪನ್ಮೂಲ ವ್ಯಕ್ತಿ ಶಿವಪ್ಪ ಹೆಳವರ, ಪರೀಕ್ಷಾ ಮುಖ್ಯ ಅಧೀಕ್ಷಕರಾದ ಜಗದಶ ಹಾದಿಮನಿ, ಚಂದುಸಾಬ ಇತರರಿದ್ದರು.