ಕನ್ನಡಪ್ರಭ ವಾರ್ತೆ ಸವದತ್ತಿ ಶ್ರೀ ಕ್ಷೇತ್ರ ಯಲ್ಲಮ್ಮನ ಗುಡ್ಡದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರದಿಂದ ₹ ೧೧೮ ಕೋಟಿ ಅನುದಾನ ನೀಡಲಾಗಿದ್ದು, ರಾಜ್ಯ ಸರ್ಕಾರ ದೇವಸ್ಥಾನದಲ್ಲಿ ಕೇಂದ್ರದ ಅನುದಾನದಲ್ಲಿ ಅತ್ಯವಶ್ಯಕ ಅಭಿವೃದ್ದಿ ಕಾಮಗಾರಿಗಳನ್ನು ತಕ್ಷಣ ಆರಂಭಿಸಿ ಭಕ್ತರಿಗೆ ಅನುಕೂಲ ಕಲ್ಪಿಸುವಂತ ಕಾರ್ಯವನ್ನು ಮಾಡಬೇಕಿದೆ ಎಂದು ವಿ.ಪ ಸದಸ್ಯ ಸಿ.ಟಿ.ರವಿ ಹೇಳಿದರು.

ಕನ್ನಡಪ್ರಭ ವಾರ್ತೆ ಸವದತ್ತಿ

ಶ್ರೀ ಕ್ಷೇತ್ರ ಯಲ್ಲಮ್ಮನ ಗುಡ್ಡದ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರದಿಂದ ₹ ೧೧೮ ಕೋಟಿ ಅನುದಾನ ನೀಡಲಾಗಿದ್ದು, ರಾಜ್ಯ ಸರ್ಕಾರ ದೇವಸ್ಥಾನದಲ್ಲಿ ಕೇಂದ್ರದ ಅನುದಾನದಲ್ಲಿ ಅತ್ಯವಶ್ಯಕ ಅಭಿವೃದ್ದಿ ಕಾಮಗಾರಿಗಳನ್ನು ತಕ್ಷಣ ಆರಂಭಿಸಿ ಭಕ್ತರಿಗೆ ಅನುಕೂಲ ಕಲ್ಪಿಸುವಂತ ಕಾರ್ಯವನ್ನು ಮಾಡಬೇಕಿದೆ ಎಂದು ವಿ.ಪ ಸದಸ್ಯ ಸಿ.ಟಿ.ರವಿ ಹೇಳಿದರು.ಸುಕ್ಷೇತ್ರ ಯಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ಶ್ರೀದೇವಿಯ ದರ್ಶನ ಪಡೆದು ನಂತರ ಬಿಜೆಪಿ ತಾಲೂಕು ಅಧ್ಯಕ್ಷ ವಿರುಪಾಕ್ಷ ಮಾಮನಿ ಅವರ ನಿವಾಸದಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ಕೋಟ್ಯಂತರ ಭಕ್ತರು ಆಗಮಿಸುವ ಈ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿಗಳಾಗಬೇಕಿದ್ದು, ಕೇಂದ್ರ ಸರ್ಕಾರ ನೀಡಿದ ಅನುದಾನದಲ್ಲಿ ಇನ್ನೂ ಅಭಿವೃದ್ದಿ ಕೆಲಸಗಳು ಯಾಕೆ ಪ್ರಾರಂಭವಾಗಿಲ್ಲ ಎಂಬುದರ ಮಾಹಿತಿ ಪಡೆದು ಸಂಬಂಧಿಸಿದ ಸಚಿವರೊಂದಿಗೆ ಮಾತನಾಡುತ್ತೇನೆ. ಕೇಂದ್ರ ಸರ್ಕಾರದ ಅನುದಾನದ ಜೊತೆಗೆ ರಾಜ್ಯ ಸರಕಾರದಿಂದಲೂ ಸಹ ಹೆಚ್ಚಿನ ಅನುದಾನ ಮಾದರಿ ಕ್ಷೇತ್ರವನ್ನಾಗಿಸಲು ಪ್ರಯತ್ನಿಸಬೇಕೆಂದರು.ದೇವಸ್ಥಾನದಲ್ಲಿ ಬಿಡಿಸಿಸಿ ಬ್ಯಾಂಕ್‌ ನಿರ್ದೇಶಕ ವಿರುಪಾಕ್ಷ ಮಾಮನಿ ಅವರು ವಿ.ಪ ಸದಸ್ಯ ಸಿ.ಟಿ.ರವಿ, ಕಾರ್ಕಳ ಶಾಸಕರಾದ ಸುನೀಲ ಕುಮಾರ, ಬೈರತಿ ಬಸವರಾಜರನ್ನು ಸನ್ಮಾನಿಸಿ ಗೌರವಿಸಿದರು. ಬಿಜೆಪಿ ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ, ಮುರುಗೇಶ ಪಾಟೀಲ, ಜಗದೀಶ ಕೌಜಗೇರಿ ರಾಜಶೇಖರ ಕಾರದಗಿ, ರಾಜು ನಿಡವಣಿ, ಪುರಸಭೆ ಸದಸ್ಯ ಅರ್ಜುನ ಅಮ್ಮೋಜಿ. ಅಶೋಕ ಪಾಟೀಲ, ಮಲ್ಲಿಕಾರ್ಜುನ ಬೀಳಗಿ, ಶ್ರೇಯಸ್ ಮಾಮನಿ, ರಾಜು ಲಮಾಣಿ, ರವಿ ಲಮಾಣಿ, ಬಸವರಾಜ ಹನಸಿ ಸೇರಿದಂತೆ ಇತರರು ಉಪಸ್ಥಿತರಿದ್ದರು.