ಡ್ರಂಕ್‌ ಆ್ಯಂಡ್‌ ಡ್ರೈವ್‌ ವಿರುದ್ಧ ಕಳೆದ ಏಳು ದಿನಗಳಿಂದ ವಿಶೇಷ ಕಾರ್ಯಾಚರಣೆ : 1187 ಕೇಸ್‌

| Published : Dec 31 2024, 01:31 AM IST / Updated: Dec 31 2024, 09:06 AM IST

ಸಾರಾಂಶ

ನಗರದಲ್ಲಿ ಡ್ರಂಕ್‌ ಆ್ಯಂಡ್‌ ಡ್ರೈವ್‌ ವಿರುದ್ಧ ಕಳೆದ ಏಳು ದಿನಗಳಿಂದ ವಿಶೇಷ ಕಾರ್ಯಾಚರಣೆ ನಡೆಸಿರುವ ನಗರ ಸಂಚಾರ ಪೊಲೀಸರು, ಪಾನಮತ್ತ ಚಾಲಕ/ಸವಾರರ ವಿರುದ್ಧ 1,187 ಪ್ರಕರಣ ದಾಖಲಿಸಿದ್ದಾರೆ.

ಬೆಂಗಳೂರು : ನಗರದಲ್ಲಿ ಡ್ರಂಕ್‌ ಆ್ಯಂಡ್‌ ಡ್ರೈವ್‌ ವಿರುದ್ಧ ಕಳೆದ ಏಳು ದಿನಗಳಿಂದ ವಿಶೇಷ ಕಾರ್ಯಾಚರಣೆ ನಡೆಸಿರುವ ನಗರ ಸಂಚಾರ ಪೊಲೀಸರು, ಪಾನಮತ್ತ ಚಾಲಕ/ಸವಾರರ ವಿರುದ್ಧ 1,187 ಪ್ರಕರಣ ದಾಖಲಿಸಿದ್ದಾರೆ.

ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಡಿ.23ರಿಂದ 29ರವರೆಗೆ ನಗರದ 50 ಸಂಚಾರ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದ ಸಂಚಾರ ಪೊಲೀಸರು, 95,179 ವಾಹನಗಳನ್ನು ತಪಾಸಣೆ ಮಾಡಿದ್ದಾರೆ. ಈ ಪೈಕಿ ಮದ್ಯ ಸೇವಿಸಿ ವಾಹನ ಚಲಾಯಿಸಿದ ಚಾಲಕರು/ಸವಾರರ ವಿರುದ್ಧ 1,187 ಪ್ರಕರಣ ದಾಖಲಿಸಿದ್ದಾರೆ.

ಓವರ್‌ ಸ್ಪೀಡ್‌ ವಿರುದ್ಧ 165 ಪ್ರಕರಣ ದಾಖಲು: ಸಾರ್ವಜನಿಕ ರಸ್ತೆಗಳಲ್ಲಿ ಅತಿವೇಗವಾಗಿ ವಾಹನ ಚಲಾಯಿಸುವ ಸವಾರರು/ಚಾಲಕರ ವಿರುದ್ಧ 165 ಪ್ರಕರಣ ದಾಖಲಿಸಿರುವ ಸಂಚಾರ ಪೊಲೀಸರು, 1.65 ಲಕ್ಷ ರು. ದಂಡ ವಸೂಲಿ ಮಾಡಿದ್ದಾರೆ. ನಗರದಲ್ಲಿ ಪಾನಮತ್ತ ಚಾಲನೆ ಹಾಗೂ ಅತಿವೇಗದ ಚಾಲನೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಇಂತಹ ವಿಶೇಷ ಕಾರ್ಯಾಚರಣೆಗಳು ಮುಂದುವರೆಯಲಿವೆ ಎಂದು ನಗರ ಸಂಚಾರ ವಿಭಾಗದ ಜಂಟಿ ಪೊಲೀಸ್‌ ಆಯುಕ್ತ ಎಂ.ಎನ್‌.ಅನುಚೇತ್‌ ತಿಳಿಸಿದ್ದಾರೆ.