ಮೈಸೂರಿನ ಉದಯಗಿರಿ ಪೊಲೀಸ್‌ ಠಾಣೆ ಗಲಭೆಯ 12 ಮಂದಿ ಬಂಧನ : ಗೃಹ ಸಚಿವ ಡಾ.ಜಿ.ಪರಮೇಶ್ವರ್‌

| N/A | Published : Feb 15 2025, 12:34 AM IST / Updated: Feb 15 2025, 04:51 AM IST

ಮೈಸೂರಿನ ಉದಯಗಿರಿ ಪೊಲೀಸ್‌ ಠಾಣೆ ಗಲಭೆಯ 12 ಮಂದಿ ಬಂಧನ : ಗೃಹ ಸಚಿವ ಡಾ.ಜಿ.ಪರಮೇಶ್ವರ್‌
Share this Article
  • FB
  • TW
  • Linkdin
  • Email

ಸಾರಾಂಶ

ಮೈಸೂರಿನ ಉದಯಗಿರಿ ಪೊಲೀಸ್‌ ಠಾಣೆ ಗಲಭೆ ಪ್ರಕರಣಗಳಲ್ಲಿ ಈಗಾಗಲೇ 12 ಜನರನ್ನು ಬಂಧಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯ ಗೃಹ ಸಚಿವ ಪರಮೇಶ್ವರ್‌ ತಿಳಿಸಿದರು.

 ಕುಶಾಲನಗರ : ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಗಲಭೆ ಪ್ರಕರಣಗಳಲ್ಲಿ ಈಗಾಗಲೇ 12 ಜನರನ್ನು ಬಂಧಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ರಾಜ್ಯ ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ.

ಅವರು ಕುಶಾಲನಗರ ಸಮೀಪದ ಬೈಲುಕುಪ್ಪೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಜನರನ್ನು ಬಂಧಿಸಲಾಗಿದೆ. ಸಿಸಿ ಟಿವಿ ಮೂಲಕ ಗುರುತಿಸಿ ಕಲ್ಲು ತೂರಾಟ ಮತ್ತು ಗಲಾಟೆ, ದೊಂಬಿಯಲ್ಲಿ ಪಾಲ್ಗೊಂಡ ಇನ್ನೂ ಹಲವರನ್ನು ಬಂಧಿಸಲು ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅವರನ್ನು ಬಂಧಿಸಿ ಕಾನೂನು ಕ್ರಮ ತೆಗೆದುಕೊಳ್ಳುತ್ತಾರೆ. ಇದರಲ್ಲಿ ತಪ್ಪಿತಸ್ಥರನ್ನು ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ತಾನು ದಾರಿ ಮಧ್ಯೆ ಮೈಸೂರಿಗೆ ತೆರಳಿ ಅಲ್ಲಿಯ ಪೊಲೀಸ್ ಠಾಣೆಗೆ ಭೇಟಿ ನೀಡುತ್ತೇನೆ ಎಂದು ಸಚಿವರು, ಆರ್‌ಎಸ್ಎಸ್ ಕಾರ್ಯಕರ್ತರು ಗಲಭೆ ಮಾಡಿದ್ದಾರೆ ಎನ್ನುವ ಲಕ್ಷ್ಮಣ್ ಹೇಳಿಕೆ ವಿಚಾರ ಅದು ಅವರಿಗೆ ಬಿಟ್ಟಿದ್ದು. ಲಕ್ಷ್ಮಣ್, ಪ್ರತಾಪ್ ಸಿಂಹ ತುಂಬಾ ಬುದ್ಧಿವಂತರಿದ್ದಾರೆ ಎಂದರು.

ಅವರ ಹೇಳಿಕೆ ಬಗ್ಗೆ ನನಗೆ ಯಾವುದೇ ಮಾಹಿತಿ ಯಾರೂ ನೀಡಿಲ್ಲ. ಪೊಲೀಸ್ ವಾಹನಕ್ಕೆ ಕಲ್ಲು ಹೊಡೆದವರ ಗುರುತು ಪತ್ತೆ ಹಚ್ಚಲಾಗಿದೆ. ಅವರನ್ನು ತಕ್ಷಣ ಬಂಧಿಸಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪರಮೇಶ್ವರ್ ಹೇಳಿದರು.