ಸಾರಾಂಶ
ದೊಡ್ಡಬಳ್ಳಾಪುರ: ರಾಜ್ಯ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬುಧವಾರ ಮಾಂಗಲ್ಯ ಭಾಗ್ಯ ಯೋಜನೆಯಡಿ 13 ಜೋಡಿಗಳು ದಾಂಪತ್ಯಕ್ಕೆ ಕಾಲಿರಿಸಿದರು.
ದೊಡ್ಡಬಳ್ಳಾಪುರ: ರಾಜ್ಯ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬುಧವಾರ ''''''''ಮಾಂಗಲ್ಯ ಭಾಗ್ಯ'''''''' ಯೋಜನೆಯಡಿ 13 ಜೋಡಿಗಳು ದಾಂಪತ್ಯಕ್ಕೆ ಕಾಲಿರಿಸಿದರು.
ಬೆಳಿಗ್ಗೆ 11:20 ರಿಂದ 12:20ರವರೆಗೆ ನಡೆದ ಅಭಿಜಿನ್ ಲಗ್ನದಲ್ಲಿ ಗಣ್ಯರ ಸಮ್ಮುಖದಲ್ಲಿ ಮಾಂಗಲ್ಯ ಧಾರಣೆ ನಡೆಯಿತು. ''''''''ಮಾಂಗಲ್ಯ ಭಾಗ್ಯ'''''''' ಕಾರ್ಯಕ್ರಮದಲ್ಲಿ ವಿವಾಹವಾದ ವರನಿಗೆ 5 ಸಾವಿರ ರುಪಾಯಿ ಹಾಗೂ ವಧುವಿಗೆ 10 ಸಾವಿರ ರುಪಾಯಿ ಸೇರಿದಂತೆ ಚಿನ್ನದ ತಾಳಿ, ಎರಡು ಚಿನ್ನದ ಗುಂಡು ಹೀಗೆ ಒಟ್ಟು 55 ಸಾವಿರ ರುಪಾಯಿಗಳನ್ನು ದೇವಾಲಯದ ವತಿಯಿಂದ ನೀಡಲಾಯಿತು.ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಧು-ವರರು ಮತ್ತು ಅವರ ಬಂಧುಗಳಿಗೆ ಊಟೋಪಚಾರ ವ್ಯವಸ್ಥೆಯನ್ನು ಮಾಡಲಾಗಿತ್ತು. ಈ ವೇಳೆ ದೇವಾಲಯದ ಆಡಳಿತಾಧಿಕಾರಿ ಡಿ.ನಾಗರಾಜ್, ಮುಜರಾಯಿ ತಹಶೀಲ್ದಾರ್ ಜೆ.ಜೆ.ಹೇಮಾವತಿ, ನಂಜಪ್ಪ ಸೇರಿದಂತೆ ಇತರರು ಉಪಸ್ಥಿತರಿದ್ದರು.31ಕೆಡಿಬಿಪಿ2-
ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯದಲ್ಲಿ ಬುಧವಾರ ಮಾಂಗಲ್ಯ ಭಾಗ್ಯ ಯೋಜನೆಯಡಿ 13 ವಧು-ವರರ ಜೋಡಿ ದಾಂಪತ್ಯಕ್ಕೆ ಕಾಲಿರಿಸಿದರು.