ಕನ್ನಡಪ್ರಭ ವಾರ್ತೆ ಜಮಖಂಡಿಸರ್ಕಾರದ ವಿವಿಧ ಯೋಜನೆಗಳಡಿ ಸಾರ್ವಜನಿಕರಿಗೆ ವಿತರಿಸಲಾಗುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವಾಹನವನ್ನು ಕಂದಾಯ ಹಾಗೂ ಪೊಲೀಸ ಅಧಿಕಾರಿಗಳು ದಾಳಿ ನಡೆಸಿ, 13.540 ಕ್ವಿಂಟಾಲ್‌ .ಪಡಿತರ ಅಕ್ಕಿಯನ್ನು ವಶಕ್ಕೆ ಪಡೆಸಿಕೊಂಡಿದ್ದಾರೆ.

ಕನ್ನಡಪ್ರಭ ವಾರ್ತೆ ಜಮಖಂಡಿ

ಸರ್ಕಾರದ ವಿವಿಧ ಯೋಜನೆಗಳಡಿ ಸಾರ್ವಜನಿಕರಿಗೆ ವಿತರಿಸಲಾಗುವ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವಾಹನವನ್ನು ಕಂದಾಯ ಹಾಗೂ ಪೊಲೀಸ ಅಧಿಕಾರಿಗಳು ದಾಳಿ ನಡೆಸಿ, 13.540 ಕ್ವಿಂಟಾಲ್‌ .ಪಡಿತರ ಅಕ್ಕಿಯನ್ನು ವಶಕ್ಕೆ ಪಡೆಸಿಕೊಂಡಿದ್ದಾರೆ.

ತಾಲೂಕಿನ ಚಿಕ್ಕಪಡಸಲಗಿ ಗ್ರಾಮದ ಸಮೀಪದ ನಾಗನೂರ ಗ್ರಾಮದ ಬಳಿ ಈ ದಾಳಿ ನಡೆದಿದ್ದು. ಅಥಣಿ ಕಡೆಗೆ ಲಾರಿಯಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಿಸುತ್ತಿದ್ದ ವೇಳೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸರ್ಕಾರದಿಂದ ವಿವಿಧ ಯೋಜನೆ ಅಡಿಯಲ್ಲಿ ಸಾರ್ವಜನಿಕರಿಗೆ ಹಂಚಿಕೆಯಾಗಿದ ಪಡಿತರ ಅಕ್ಕಿಯನ್ನು ಕಡಿಮೆ ಬೆಲೆಗೆ ಪಡೆದುಕೊಂಡು, ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎನ್ನಲಾಗಿದೆ.ದಾಳಿಯ ವೇಳೆ 244 ಮೂಟೆಗಳಲ್ಲಿ ತುಂಬಿದ್ದ ಒಟ್ಟು 13,540 ಕೆಜಿ, ಪಡಿತರ ಅಕ್ಕಿ ವಶಕ್ಕೆ ಪಡೆಯಲಾಗಿದೆ. ವಶಪಡಿಸಿಕೊಂಡ ಅಕ್ಕಿಯ ಅಂದಾಜು ಬೆಲೆ ₹ 3,04,650 ಗಳಾಗಿದೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿತರಾದ ಜಮಖಂಡಿ ನಗರದ ಅಸ್ಪಾಕ್‌ ಮುಬಾರಕ ಅವಟಿ ಹಾಗೂ ಅಸ್ಪಾಕ್‌ ಅಬ್ದುಲ್‌ಜಬಾರ ಬಿರಾಜದಾರ ಎಂಬ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.

ಸಾವಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ಯಾಚರಣೆಯಲ್ಲಿ ಆಹಾರ ಶಿರೇಸ್ತಾರ ಬಸವರಾಜ ತಾಳಿಕೋಟಿ, ಗ್ರಾಮ ಆಡಳಿತ ಅಧಿಕಾರಿ ಚಿದಾನಂದ ಕಿತ್ತೂರ ಹಾಗೂ ಭರತ ವಾಘಮೋರೆ, ಎಎಸ್‌ಐ ಆರ್‌.ಬಿ.ಕೋಳಿ ಮತ್ತು ಪೊಲೀಸ್‌ ಸಿಬ್ಬಂದಿ ಶಿವಾನಂದ ಭಜಂತ್ರಿ ಇದ್ದರು.