ಸಾರಾಂಶ
ಹೊನ್ನಾಳಿ ಪಟ್ಟಣದ ದುರ್ಗಿಗುಡಿ ಬಡಾವಣೆಯಲ್ಲಿ ಆಪೇ ಆಟೋದಲ್ಲಿ ಅಕ್ರಮವಾಗಿ ಮದ್ಯ ಸಾಗಾಣಿಕೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, ಆಟೋವನ್ನು ವಶಕ್ಕೆ ಪಡೆಯಲಾಗಿದೆ. 138 ಲೀಟರ್ ಬಿಯರ್ ವಶಕ್ಕೆ ಪಡೆದಿದ್ದು, ಚಾಲಕ ಪರಾರಿಯಾಗಿದ್ದಾನೆ ಎಂದು ಅಬಕಾರಿ ಇನ್‌ಸ್ಪೆಕ್ಟರ್ ಬಸವಲಿಂಗಪ್ಪ ಚಿಮ್ಮಲಗಿ ಹೇಳಿದ್ದಾರೆ.
ಕನ್ನಡಪ್ರಭ ವಾರ್ತೆ. ಹೊನ್ನಾಳಿ
ಪಟ್ಟಣದ ದುರ್ಗಿಗುಡಿ ಬಡಾವಣೆಯಲ್ಲಿ ಆಪೇ ಆಟೋದಲ್ಲಿ ಅಕ್ರಮವಾಗಿ ಮದ್ಯ ಸಾಗಾಣಿಕೆ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ, ಆಟೋವನ್ನು ವಶಕ್ಕೆ ಪಡೆಯಲಾಗಿದೆ. 138 ಲೀಟರ್ ಬಿಯರ್ ವಶಕ್ಕೆ ಪಡೆದಿದ್ದು, ಚಾಲಕ ಪರಾರಿಯಾಗಿದ್ದಾನೆ ಎಂದು ಅಬಕಾರಿ ಇನ್‌ಸ್ಪೆಕ್ಟರ್ ಬಸವಲಿಂಗಪ್ಪ ಚಿಮ್ಮಲಗಿ ಹೇಳಿದರು.ಪ್ರಕರಣ ಬಗ್ಗೆ ಎಫ್‍ಐಆರ್ ದಾಖಲಿಸಿದ್ದು, ಘನ ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ಪರಾರಿಯಾದ ವಾಹನ ಚಾಲಕನ ಪತ್ತೆಗೆ ಕ್ರಮ ಕೈಗೊಳ್ಳಲಾಗುವುದು ಎಂದರು.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಬಕಾರಿ ಜಂಟಿ ಆಯುಕ್ತರು, ಉಪ ಆಯುಕ್ತರು ದಾವಣಗೆರೆ ಹಾಗೂ ಅಬಕಾರಿ ಉಪ ಅಧೀಕ್ಷಕರು ಹೊನ್ನಾಳಿ ಅವರ ಮಾರ್ಗದರ್ಶನದಲ್ಲಿ ದಾಳಿ ನಡೆಸಲಾಯಿತು. ಎಂದರು.ಈ ಸಂದರ್ಭ ಅಬಕಾರಿ ಪೋಲಿಸರು ಹಾಗೂ ಸಿಬ್ಬಂದಿ ಹಾಜರಿದ್ದರು.
- - - -5ಎಚ್.ಎಲ್.ಐ3: 138 ಲೀ. ಅಕ್ರಮ ಬಿಯರ್, ಆಟೋ ವಶಕ್ಕೆ ಪಡೆದಿರುವ ಅಬಕಾರಿ ಅಧಿಕಾರಿಗಳು.