ಸಾರಾಂಶ
ಶ್ರೀ ತ್ಯಾಗರಾಜ ಕೋ ಆಪರೇಟಿವ್ ಬ್ಯಾಂಕ್ ವಜ್ರಮಹೋತ್ಸವ ವರ್ಷಾಚರಣೆ ಸಂದರ್ಭದಲ್ಲಿ ಕೆಂಗೇರಿಯ ನಾಗದೇವನಹಳ್ಳಿಯಲ್ಲಿ 13ನೇ ನೂತನ ಶಾಖೆಯನ್ನು ಪ್ರಾರಂಭಿಸಿದೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಶ್ರೀ ತ್ಯಾಗರಾಜ ಕೋ ಆಪರೇಟಿವ್ ಬ್ಯಾಂಕ್ ವಜ್ರಮಹೋತ್ಸವ ವರ್ಷಾಚರಣೆ ಸಂದರ್ಭದಲ್ಲಿ ಕೆಂಗೇರಿಯ ನಾಗದೇವನಹಳ್ಳಿಯಲ್ಲಿ 13ನೇ ನೂತನ ಶಾಖೆಯನ್ನು ಪ್ರಾರಂಭಿಸಿದೆ.ನೂತನ ಶಾಖೆ ಉದ್ಘಾಟನೆ ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಆದಿಚುಂಚನಗಿರಿ ಶಾಖಾ ಮಠದ ಶ್ರೀಚಂದ್ರಶೇಖರನಾಥ ಸ್ವಾಮೀಜಿ ಅವರು, ರಾಷ್ಟ್ರೀಕೃತ ಬ್ಯಾಂಕುಗಳು ನೀಡುವ ಆಧುನಿಕ ತಂತ್ರಜ್ಞಾನವನ್ನು ಸಹಕಾರ ಬ್ಯಾಂಕುಗಳು ನೀಡಲು ಸಫಲರಾದಲ್ಲಿ ಹೆಚ್ಚಿನ ಜನಸಾಮಾನ್ಯರು ಸಹಕಾರ ಬ್ಯಾಂಕುಗಳಲ್ಲಿ ವ್ಯವಹಾರ ನಡೆಸಲು ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರಗಳು ಹೆಚ್ಚಿನ ನೆರವನ್ನು ಸಹಕಾರ ಕ್ಷೇತ್ರದ ಉನ್ನತಿಗೆ ನೀಡಬೇಕು ಎಂದು ಆಗ್ರಹಿಸಿದರು. ಬ್ಯಾಂಕಿನ ಅಧ್ಯಕ್ಷರಾದ ಡಾ। ಎಂ.ಆರ್.ವೆಂಕಟೇಶ್, ರಾಷ್ಟ್ರೀಕೃತ ಬ್ಯಾಂಕುಗಳು ನೀಡುವ ಎಲ್ಲಾ ರೀತಿಯ ಸವಲತ್ತುಗಳನ್ನು ನಮ್ಮ ಬ್ಯಾಂಕು ಗ್ರಾಹಕರಿಗೆ ನೀಡುತ್ತಿದ್ದು, ಈ ಪ್ರಸಕ್ತ ವರ್ಷದಲ್ಲೇ ನಾಲ್ಕು ಶಾಖೆಗಳನ್ನು ಪ್ರಾರಂಬಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಹಿರಿಯ ಸಾಹಿತಿ ಬಾಲಸುಬ್ರಹ್ಮಣ್ಯ ಮಾತನಾಡಿದರು. ಸಮಾರಂಭದಲ್ಲಿ ಬಿಬಿಎಂಪಿ ಮಾಜಿ ಸದಸ್ಯ ಮುನಿರಾಜು, ಅಂಜನಾಮೂರ್ತಿ, ಯತೀಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.