ಲೋಕ ಅದಾಲತ್‌ನಲ್ಲಿ ೧೪೫೯೨ ಪ್ರಕರಣ ಇತ್ಯರ್ಥ: ನ್ಯಾ.ರಾಮಾ ನಾಯಕ

| Published : Mar 10 2025, 12:16 AM IST

ಲೋಕ ಅದಾಲತ್‌ನಲ್ಲಿ ೧೪೫೯೨ ಪ್ರಕರಣ ಇತ್ಯರ್ಥ: ನ್ಯಾ.ರಾಮಾ ನಾಯಕ
Share this Article
  • FB
  • TW
  • Linkdin
  • Email

ಸಾರಾಂಶ

ಕನ್ನಡಪ್ರಭ ವಾರ್ತೆ ವಿಜಯಪುರ ಕಕ್ಷಿದಾರರು ನ್ಯಾಯಾಲಯಗಳಿಗೆ ಅಲೆದಾಡುವ ಬದಲು ಜನತಾ ನ್ಯಾಯಾಲಯದಲ್ಲಿ ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ಅನಾವಶ್ಯಕ ವ್ಯರ್ಥವಾಗುವ ಹಣ ಹಾಗೂ ಸಮಯ ಉಳಿತಾಯವಾಗಲಿದೆ. ಅಲ್ಲದೇ, ಸಾರ್ವಜನಿಕರು ಜನತಾ ನ್ಯಾಯಾಲಯದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಮಾ ನಾಯಕ್ ಕರೆ ನೀಡಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಕಕ್ಷಿದಾರರು ನ್ಯಾಯಾಲಯಗಳಿಗೆ ಅಲೆದಾಡುವ ಬದಲು ಜನತಾ ನ್ಯಾಯಾಲಯದಲ್ಲಿ ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡರೆ ಅನಾವಶ್ಯಕ ವ್ಯರ್ಥವಾಗುವ ಹಣ ಹಾಗೂ ಸಮಯ ಉಳಿತಾಯವಾಗಲಿದೆ. ಅಲ್ಲದೇ, ಸಾರ್ವಜನಿಕರು ಜನತಾ ನ್ಯಾಯಾಲಯದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಮಾ ನಾಯಕ್ ಕರೆ ನೀಡಿದರು.

ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾದ ರಾಷ್ಟ್ರೀಯ ಲೋಕ್ ಅದಾಲತ್ ಕಾರ್ಯಕ್ರಮದಲ್ಲಿ ಕಕ್ಷಿದಾರರಿಗೆ ತಿಳುವಳಿಕೆ ನೀಡಿದ ಅವರು, ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗಿದ್ದ ಆಸ್ತಿ ವಿಭಾಗ ದಾವೆಗಳು, ಚೆಕ್ ಬೌನ್ಸ್ ಪ್ರಕರಣಗಳು, ಮೋಟಾರು ವಾಹನ ಅಪಘಾತ ಪರಿಹಾರ ಪ್ರಕರಣಗಳು, ಜೀವನಾಂಶ ಕೋರಿ ಸಲ್ಲಿಸಿದ ಪ್ರಕರಣಗಳು, ರಾಜೀಯಾಗಬಹುದಾದ ಕ್ರಿಮಿನಲ್ ಪ್ರಕರಣಗಳು ಹಾಗೂ ಅಮಲ್ಜಾರಿ ಪ್ರಕರಣಗಳು ಸೇರಿದಂತೆ ಒಟ್ಟು ೧೪,೫೯೨ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ ಎಂದರು.ಜನತಾ ನ್ಯಾಯಾಲಯದಲ್ಲಿ ರಾಜೀ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಂಡು ಪರಸ್ಪರ ಸೌರ್ಹಾತೆಯಿಂದ ಸಮಾಜದಲ್ಲಿ ಜೀವನ ಸಾಗಿಸುವಂತೆ ಸಲಹೆ ನೀಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾಯಾಧೀಶ ಅರವಿಂದ ಹಾಗರಗಿ ಅವರು, ಜಿಲ್ಲೆಯಲ್ಲಿ ನಡೆದ ಲೋಕ ಅದಾಲತ್‌ನಲ್ಲಿ ೮ ಜೋಡಿಗಳನ್ನು ರಾಜಿ ಸಂಧಾನದ ಮೂಲಕ ವೈವಾಹಿಕ ಜೀವನ ನಡೆಸಲು ಒಪ್ಪಿಸಲಾಯಿತು. ಜನತಾ ನ್ಯಾಯಾಲಯದ ಯಶಸ್ಸಿಗೆ ಸಹಕರಿಸಿದ ವಕೀಲರು, ಕಕ್ಷಿದಾರರು, ಪೊಲೀಸ್ ಅಧಿಕಾರಿ-ಸಿಬ್ಬಂದಿ ಸೇರಿದಂತೆ ಸಾರ್ವಜನಿಕರ ಕಾರ್ಯಕ್ಕೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ನ್ಯಾ.ರಾಮಾನಾಯಕ್ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.